ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ʼಮಾಧ್ಯಮ ಶ್ರೀʼ ಪ್ರಶಸ್ತಿಗೆ ಪತ್ರಕರ್ತ ರವಿ ನಾಯ್ಕ ಆಯ್ಕೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕವಾಗಿ ಕೊಡಮಾಡುವ ಮಾಧ್ಯಮ ಶ್ರೀ ಪ್ರಶಸ್ತಿಗೆ ಜನಮಾಧ್ಯಮ ದಿನಪತ್ರಿಕೆಯ ಹಿರಿಯ ಉಪಸಂಪಾದಕ ರವಿ ನಾಯ್ಕ ಅವರನ್ನು ಆಯ್ಕೆ ಮಾಡಲಾಗಿದೆ. ಇಲ್ಲಿನ ಪತ್ರಿಕಾ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಕೆರೆಗದ್ದೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಣಿ ಸಭೆಯಲ್ಲಿ ಮಾಧ್ಯಮ ಶ್ರೀ ಪ್ರಶಸ್ತಿಗೆ … Continued

ಶಿರಸಿ : ಹಿರಿಯ ಪತ್ರಕರ್ತ ಪಿ.ಎಸ್.ಸದಾನಂದ ನಿಧನಕ್ಕೆ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ

ಶಿರಸಿ: ಮಂಗಳವಾರ ನಿಧನರಾದ ಹಿರಿಯ ಪತ್ರಕರ್ತ ಹಾಗೂ ಲೋಕಧ್ವನಿ ಪತ್ರಿಕೆಯ ಮಾಜಿ ಸಂಪಾದಕ ಪಿ.ಎಸ್.ಸದಾನಂದ ಅವರಿಗೆ ಬುಧವಾರ ನಗರದ ಪತ್ರಿಕಾಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಿತ್ತು. ಪಿ.ಎಸ್.ಸದಾನಂದ ಅವರು ಸುದೀರ್ಘ ಅವಧಿಯವರೆಗೆ ಪತ್ರಿಕಾ ಕ್ಷೇತ್ರದಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸಲ್ಲಿಸಿದ … Continued

ಇರಾಕಿನ ಬಾಗ್ದಾದಿನಲ್ಲಿ ಅಮೆರಿಕದ ಪ್ರಶಸ್ತಿ ಪುರಸ್ಕೃತ ಪತ್ರಕರ್ತೆಯ ಅಪಹರಣ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಾಗ್ದಾದ್: ಇರಾಕ್ ರಾಜಧಾನಿ ಬಾಗ್ದಾದ್‌ನಲ್ಲಿ ಅಮೆರಿಕದ ಖ್ಯಾತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್ಸನ್ (Shelly Kittleson) ಅವರನ್ನು ಸಶಸ್ತ್ರ ದುಷ್ಕರ್ಮಿಗಳು ಹಾಡುಹಗಲೇ ಅಪಹರಿಸಿದ್ದಾರೆ. ಈ ಘಟನೆಯನ್ನು ಇರಾಕ್‌ನ ಆಂತರಿಕ ಸಚಿವಾಲಯ ಖಚಿತಪಡಿಸಿದ್ದು, ದೇಶಾದ್ಯಂತ ಬಿಗಿ ಭದ್ರತೆ ಹಾಗೂ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಬಾಗ್ದಾದ್‌ನ ಜನನಿಬಿಡ ರಸ್ತೆಯಲ್ಲಿ ಶೆಲ್ಲಿ ಅವರು ಪ್ರಯಾಣಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿದ ಶಸ್ತ್ರಸಜ್ಜಿತ ವ್ಯಕ್ತಿಗಳು, … Continued

ಬಹುಮುಖ ಪ್ರತಿಭೆಯ ಪತ್ರಕರ್ತ-ಬರಹಗಾರ ಅರುಣಕುಮಾರ ಹಬ್ಬು ; ಜೂನ್‌ 29ಕ್ಕೆ ʼಬೊಗಸೆ ನೀರುʼ ಆತ್ಮಕಥನ ಲೋಕಾರ್ಪಣೆ

(29-06-2025ರಂದು 11:00 ಗಂಟೆಗೆ ಹುಬ್ಬಳ್ಳಿ ನಗರದ ಗೋಕುಲ ರಸ್ತೆಯ ಹವ್ಯಕ ಭವನದಲ್ಲಿ ಪತ್ರಕರ್ತ ಅರುಣಕುಮಾರ ಹಬ್ಬು ಅವರ 368 ಪುಟಗಳ ʼಬೊಗಸೆ ನೀರುʼ ಆತ್ಮಕಥನ ಲೋಕಾರ್ಪಣೆಗೊಳ್ಳಲಿದೆ, ಈ ನಿಮಿತ್ತ ಲೇಖನ) ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗವು ಜನಸಾಮಾನ್ಯರಿಗೆ ದೇಶ- ವಿದೇಶಗಳಲ್ಲಿ ಆಗು-ಹೋಗುವ ಘಟನೆಗಳ ಮಾಹಿತಿಯನ್ನು ನೀಡುತ್ತದೆ. ಈ ರೀತಿಯ ಮಾಹಿತಿಗಳನ್ನು ಅಚ್ಚುಕಟ್ಟಾಗಿ ಶಬ್ದರೂಪದಲ್ಲಿ ಕಟ್ಟಿಕೊಡುವ ಪತ್ರಕರ್ತರ … Continued

ವೀಡಿಯೊ..| ಅಮೆರಿಕದ ವಿದೇಶಾಂಗ ಕಾರ್ಯದರ್ಶಿಗೆ ʼಕ್ರಿಮಿನಲ್‌ʼ ಎಂದು ಕರೆದ ನಂತರ ವರದಿಗಾರನನ್ನು ಪತ್ರಿಕಾಗೋಷ್ಠಿಯಿಂದ ಹೊರಗೆ ಎಳೆದೊಯ್ದ ಭದ್ರತಾ ಸಿಬ್ಬಂದಿ

ವಾಷಿಂಗ್ಟನ್‌ ಡಿಸಿ: ಜನವರಿ 16, ಗುರುವಾರದಂದು ತನ್ನ ಅಂತಿಮ ಪತ್ರಿಕಾಗೋಷ್ಠಿ ನಡೆಸುವಾಗ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರು ಹಮಾಸ್‌ನೊಂದಿಗೆ ನಡೆಯುತ್ತಿರುವ ಯುದ್ಧದಲ್ಲಿ ಇಸ್ರೇಲ್‌ಗೆ ಅಮೆರಿಕ ನೀಡಿದ ಬೆಂಬಲವನ್ನು ಟೀಕಿಸುವ ಪತ್ರಕರ್ತರಿಂದ ಪದೇ ಪದೇ ಅಡ್ಡಿಗಳನ್ನು ಎದುರಿಸಬೇಕಾಯಿತು. ಗಾಜಾ ಯುದ್ಧವನ್ನು ಒಳಗೊಂಡ ಇಬ್ಬರು ಪತ್ರಕರ್ತರು ಅವರ ಪತ್ರಿಕಾಗೋಷ್ಠಿ ವೇಳೆ ಅವರ ವಿರುದ್ಧ ಆರೋಪ ಮಾಡಿದರು. … Continued

ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ, ಬರಹಗಾರ ಪ್ರಿತೀಶ್ ನಂದಿ ನಿಧನ

ಮುಂಬೈ : ಹೃದಯ ಸ್ತಂಭನದಿಂದ ಖ್ಯಾತ ಚಲನಚಿತ್ರ ನಿರ್ಮಾಪಕ ಹಾಗೂ ಪತ್ರಕರ್ತ ಪ್ರಿತೀಶ್ ನಂದಿ (73) ತಮ್ಮ ದಕ್ಷಿಣ ಮುಂಬೈ ನಿವಾಸದಲ್ಲಿ ಬುಧವಾರ ನಿಧನರಾದರು. ಝಂಕಾರ್ ಬೀಟ್ಸ್, ಚಮೇಲಿ, ಹಜಾರೋನ್ ಖ್ವೈಶೇನ್ ಐಸಿ, ಏಕ್ ಖಿಲಾಡಿ ಏಕ್ ಹಸೀನಾ, ಅಂಕಹೀ, ಪ್ಯಾರ್ ಕೆ ಸೈಡ್ ಎಫೆಕ್ಟ್ಸ್, ಬೋ ಬ್ಯಾರಕ್ಸ್ ಫಾರೆವರ್, ಮುಂತಾದ ಹಲವಾರು ಯಶಸ್ವಿ ಚಲನಚಿತ್ರಗಳನ್ನು … Continued

ಲಖಿಂಪುರ್ ಹಿಂಸಾಚಾರ ಪ್ರಕರಣ: ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣದಲ್ಲಿ ಇಬ್ಬರ ಬಂಧನ

ಲಖಿಂಪುರಖೇರಿ: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮಂಗಳವಾರ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಅಕ್ಟೋಬರ್ 3 ರಂದು ನಡೆದ ಹಿಂಸಾಚಾರದಲ್ಲಿ ಎಂಟು ಜನರು ಮೃತಪಟ್ಟಿದ್ದು ಅವರಲ್ಲಿ ನಾಲ್ವರು ರೈತರಾಗಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನು ಸಾಗಿಸುತ್ತಿದ್ದ ವಾಹನ ರೈತರ ಮೇಲೆ ಹರಿದಿದೆ … Continued