ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅಧಿಕಾರಾವಧಿ ವಿಸ್ತರಣೆ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್‌ ಪ್ರಸಾದ ನಡ್ಡಾ ಅವರ ಅಧಿಕಾರಾವಧಿಯನ್ನು ಈ ವರ್ಷದ ಜೂನ್‌ ವರೆಗೆ ವಿಸ್ತರಿಸಲಾಗಿದೆ. ಈ ನಿರ್ಧಾರವನ್ನು ಪಕ್ಷದ ರಾಷ್ಟ್ರೀಯ ಮಂಡಳಿಯು ಭಾನುವಾರ ಅಂಗೀಕರಿಸಿತು. ಇದಲ್ಲದೆ, ಪಕ್ಷದ ಸಂಸದೀಯ ಮಂಡಳಿಯ ನಂತರದ ಅನುಮೋದನೆಗೆ ಒಳಪಟ್ಟು ಸ್ವತಂತ್ರವಾಗಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವನ್ನು ಜೆ.ಪಿ. ನಡ್ಡಾ ಅವರಿಗೆ ನೀಡಲಾಗಿದೆ. ದೆಹಲಿಯಲ್ಲಿ ನಡೆದ ಬಿಜೆಪಿಯ … Continued

ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ಮತ್ತೊಂದು ಪಟ್ಟಿ ಬಿಡುಗಡೆ ; ಜೆಪಿ ನಡ್ಡಾ, ಅಶೋಕ ಚವಾಣ ಸ್ಪರ್ಧೆ-ಶಿವಸೇನೆಯಿಂದ ಮಿಲಿಂದ್‌ ದಿಯೋರಾ ಕಣಕ್ಕೆ

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕಾಂಗ್ರೆಸ್ ತೊರೆದು ಒಂದು ದಿನದ ಮೊದಲು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ ಅವರು ಫೆಬ್ರವರಿ 27 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕ್ರಮವಾಗಿ ಗುಜರಾತ್ ಮತ್ತು ಮಹಾರಾಷ್ಟ್ರದಿಂದ ಪಕ್ಷದಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಸ್ತುತ … Continued

ಬಿಜೆಪಿ ಅಧ್ಯಕ್ಷ ನಡ್ಡಾ-ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ ಭೇಟಿಯಾದ ಸಂಸದೆ ಸುಮಲತಾ ಅಂಬರೀಷ: ಮಂಡ್ಯ ಕ್ಷೇತ್ರದ ಬಗ್ಗೆ ಮಹತ್ವದ ಚರ್ಚೆ..!

ಬೆಂಗಳೂರು: ಮಂಡ್ಯ ಸಂಸದೆ, ನಟಿ ಸುಮಲತಾ ಅಂಬರೀಷ ಅವರು ಗುರುವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರನ್ನು ಭೇಟಿಯಾಗಿದ್ದು, ಮಂಡ್ಯದ ಕ್ಷೇತ್ರದ ಬಗ್ಗೆ ಕುತೂಹಲ ಹೆಚ್ಚಾಗಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿದ್ದ ಸಮಲತಾ ಅಂಬರೀಷ, ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಡ್ಡಾ … Continued

ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ

ಬೆಂಗಳೂರು: ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ನೇಮಿಸಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಲವು ತಿಂಗಳುಗಳಿಂದ ನಡೆಯುತ್ತಿದ್ದ ರಾಜ್ಯಾಧ್ಯಕ್ಷ ಆಯ್ಕೆ ಕುರಿತಾದ ಚರ್ಚೆಗೆ ತೆರೆ ಬಿಜೆಪಿ ತೆರೆ ಎಳೆದಿದೆ. ವಿಜಯೇಂದ್ರ ಅವರು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದ ಶಾಸಕರಾಗಿದ್ದಾರೆ. ಬಿಜೆಪಿಯು ರಾಜ್ಯಾಧ್ಯಕ್ಷ … Continued

ಬಿಜೆಪಿ ಅಧ್ಯಕ್ಷ ನಡ್ಡಾ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ವೇಳೆ ಮತದಾರರ ಮೇಲೆ ಅನುಚಿತ ಪ್ರಭಾವ ಬೀರಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕಳೆದ ವಿಧಾನಸಭೆ ಚುನಾವಣೆ ವೇಳೆ “ಬಿಜೆಪಿಗೆ ಮತ ನೀಡಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದಿಂದ ಕರ್ನಾಟಕವು ವಂಚಿತವಾಗದಂತೆ ನೋಡಿಕೊಳ್ಳಿ” … Continued

ವೀಡಿಯೊ | ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್‌ ಪಕ್ಷ ಸೇರ್ಪಡೆ

ನವದೆಹಲಿ: ಜೆಡಿಎಸ್‌ ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ ಸೇರ್ಪಡೆಯಾಗಿದೆ. ಶುಕ್ರವಾರ ಮಧ್ಯಾಹ್ನ ಜೆಡಿಎಸ್ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದಕ್ಷಿಣ … Continued

ಮತದಾರರಿಗೆ ಆಮಿಷ ಆರೋಪ: ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ವೇಳೆ ವಿಜಯನಗರ ಜಿಲ್ಲೆ ಹರಪನಹಳ್ಳಿ ಪಟ್ಟಣದಲ್ಲಿ ನಡೆದಿದ್ದ ಬಿಜೆಪಿ ಪ್ರಚಾರದ ವೇಳೆ ಮತದಾರರಿಗೆ ಆಮಿಷವೊಡ್ಡುವ ರೀತಿಯಲ್ಲಿ ಭಾಷಣ ಮಾಡಿದ್ದರು ಆರೋಪಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ರದ್ದುಪಡಿಸಿದೆ. ಹರಪನಹಳ್ಳಿ ಠಾಣಾ ಪೊಲೀಸರು … Continued

ವಿಪಕ್ಷ ನಾಯಕನ ಆಯ್ಕೆ : ಹೈಕಮಾಂಡ್ ಬುಲಾವ್, ನಾಳೆ ದೆಹಲಿಗೆ ಹೊರಟ ಯಡಿಯೂರಪ್ಪ

ಬೆಂಗಳೂರು : ಸೋಮವಾರದಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಬಿಜೆಪಿ ಭಾನುವಾರ ವಿಪಕ್ಷ ನಾಯಕನ ಘೋಷಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ದೆಹಲಿಗೆ ಬುಲಾವ್‌ ಮಾಡಿದ್ದು ನಾಳೆ ಭಾನುವಾರ ಬೆಳಗ್ಗೆ ದೆಹಲಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ, ಭಾನುವಾರ ಬೆಂಗಳೂರಲ್ಲಿ ನಿಗದಿಯಾಗಿದ್ದ … Continued

ನಾಳೆ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನಾಳೆ, ಶನಿವಾರ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬಿಜೆಪಿಯ ವಿಜಯಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಿರುವ ಬಿಜೆಪಿ, ನಾಳೆಯಿಂದ ವಿಜಯ ಸಂಕಲ್ಪ ಅಭಿಯಾನ ಆರಂಭಿಸುತ್ತಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ವಿಜಯಪುರದ ನಾಗಠಾಣಾ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಜಯ … Continued

‘ಒಮ್ಮತದ’ ರಾಷ್ಟ್ರಪತಿ ಆಯ್ಕೆ: ಪ್ರತಿಪಕ್ಷಗಳು, ಮಿತ್ರಪಕ್ಷಗಳ ಜೊತೆ ಚರ್ಚೆ ಹೊಣೆಗಾರಿಕೆ ಜೆಪಿ ನಡ್ಡಾ, ರಾಜನಾಥ್ ಸಿಂಗ್‌ಗೆ ನೀಡಿದ ಬಿಜೆಪಿ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಮುನ್ನ, ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಮಿತ್ರಪಕ್ಷಗಳು ಮತ್ತು ಪ್ರತಿಪಕ್ಷಗಳೊಂದಿಗೆ ಮಾತುಕತೆ ನಡೆಸುವ ಜವಾಬ್ದಾರಿ ನೀಡಲಾಗಿದೆ. ಎನ್‌ಡಿಎ, ಯುಪಿಎ ಮತ್ತು ಯುಪಿಎಯೇತರ ಪಕ್ಷಗಳ ಜೊತೆಗೆ ಒಮ್ಮತದ ರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಕುರಿತು ಚರ್ಚಿಸುವ … Continued