ಭಾರಿ ಮಳೆ ಮುನ್ಸೂಚನೆ ; ಕರ್ನಾಟಕದ ಐದು ಜಿಲ್ಲೆಗಳಿಗೆ ಇಂದು ರೆಡ್‌ ಅಲರ್ಟ್‌

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿದ್ದು, ಆರು ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜುಲೈ 19ರಂದು ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆಯು ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿಯಿಂದ … Continued

ವಿಪರೀತ ಮಳೆ : ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳ ಶಾಲೆ-ಪಿಯು ಕಾಲೇಜುಗಳಿಗೆ ಜುಲೈ 19ಕ್ಕೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ (ಜುಲೈ 19) ಜಿಲ್ಲೆಯ ಐದು ತಾಲೂಕುಗಳ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ಎಲ್ಲಾ ಅಂಗನವಾಡಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು (12 ನೇ ತರಗತಿಯವರೆಗೆ) ಜುಲೈ … Continued

ಉಡುಪಿ : ನಾಳೆ (ಜುಲೈ 19) ಶಾಲಾ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಪಿಯುಸಿ ವರೆಗಿನ ಎಲ್ಲ ಶಾಲಾ-ಕಾಲೇಜುಗಳಿಗೆ ಜುಲೈ 19ರ (ಶುಕ್ರವಾರ) ರಜೆ ಘೋಷಣೆ ಮಾಡಲಾಗಿದೆ. ಗುರುವಾರ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ, ಶುಕ್ರವಾರವು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, … Continued

ಉತ್ತರ ಕನ್ನಡ ಜಿಲ್ಲೆ ; ಇಂದು (ಜುಲೈ 19)ರಂದು ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಹಾಗೂ ರೆಡ್‌ ಅಲರ್ಟ್‌ ಘೋಷಣೆಯಾಗಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಶುಕ್ರವಾರ (ಜುಲೈ 19) ರಜೆ ಘೋಷಿಸಲಾಗಿದೆ. ವಿಪರೀತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ದಾಂಡೇಲಿ, ಹಳಿಯಾಳ, … Continued

ಎಸ್ಸೆಸ್ಸೆಲ್ಸಿ ಪರೀಕ್ಷೆ: ಮೊದಲನೇ ದಿನ ಶೇ.99.64ರಷ್ಟು ವಿದ್ಯಾರ್ಥಿಗಳು ಹಾಜರ್‌, ಇದು ಕಳೆದ ವರ್ಷಕ್ಕಿಂತ ಹೆಚ್ಚು..!

ಬೆಂಗಳೂರು : ಕೊರೊನಾ ಸೋಂಕಿನ ಭೀತಿಯ ನಡುವೆಯೂ ಇಂದು (ಸೋಮವಾರ) ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆದಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡಂತ 8,75,508 ವಿದ್ಯಾರ್ಥಿಗಳಲ್ಲಿ ಕೇವಲ 2,992 ವಿದ್ಯಾರ್ಥಿಗಳು ಮಾತ್ರವೇ ಗೈರು ಹಾಜರಾಗಿದ್ದಾರೆ. ಶೇ.99.64ರಷ್ಟು ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಯಲ್ಲಿ ಹಾಜರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶಕುಮಾರ್ ಹೇಳಿದ್ದಾರೆ. ಈ … Continued