ಮುಂದುವರಿದ ಮಳೆ : ದಕ್ಷಿಣ ಕನ್ನಡ, ಉಡುಪಿ ಶಾಲೆ-ಪಿಯು ಕಾಲೇಜುಗಳಿಗೆ ಶುಕ್ರವಾರವೂ ರಜೆ ಘೋಷಣೆ

ಮಂಗಳೂರು/ಉಡುಪಿ : ಜೋರಾದ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 7 ರಂದು ರಜೆ ಘೋಷಿಸಲಾಗಿದೆ. ಸತತ ನಾಲ್ಕನೇ ದಿನ ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸುರಿಯುತ್ತಿದೆ. ಶುಕ್ರವಾರದ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಶುಕ್ರವಾರವೂ ಮಳೆಯ ಆರ್ಭಟ … Continued

ಭಾರೀ ಮಳೆ : ಜುಲೈ 7ರಂದು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನ ಶಾಲೆ-ಪದವಿಪೂರ್ವ ಕಾಲೇಜಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತವು ಜುಲೈ 7 ರಂದು ಜಿಲ್ಲೆಯ ಕರಾವಳಿ ತಾಲೂಕಿನ ಎಲ್ಲಾ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಭಾರೀ ಭಾರೀ ಮಳೆ ಬೀಳುವ ಕುರಿತು ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಕರವಾಳಿ … Continued

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುರುವಾರವೂ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ನಾಳೆ, ಮಂಗಳವಾರ (ಜುಲೈ 7) ಕೂಡ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದ್ದು, ಗುರುವಾರ ಭಾರೀ ಮಳೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಯ ಜಿಲ್ಲಾಧಿಕಾರಿಗಳು ಜುಲೈ 7 ರಂದು ಕೂಡ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದ್ದಾರೆ. ಎಲ್ಲ … Continued

ಭಾರಿ ಮಳೆ ಮುನ್ಸೂಚನೆ : ಉತ್ತರ ಕನ್ನಡ ಜಿಲ್ಲಾ ಶಾಲಾ- ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜುಲೈ 7ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯನೈಸರ್ಗಿಕ ವಿಪತ್ತು ನಿರ್ವಹಣಾ ಸಮಿತಿಯು ಮುನ್ಸೂಚನೆ ನೀಡಿದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 7ರಂದು ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಲಾಗಿದೆ. ಮಂಗಳವಾರ ಮತ್ತು ಬುಧವಾರವೂ ರಜೆ ನೀಡಲಾಗಿತ್ತು. ರಾಜ್ಯನೈಸರ್ಗಿಕ ವಿಪತ್ತು ನಿರ್ವಹಣಾ ಸಮಿತಿಯು ಮುನ್ಸೂಚನೆ ಜುಲೈ 7ರ ಬೆಳಿಗ್ಗೆ … Continued