ಹಿಂಸಾಚಾರ ಪೀಡಿತ ಮಣಿಪುರಕ್ಕೆ ಜೂನ್ 29 ರಂದು ರಾಹುಲ್ ಗಾಂಧಿ ಭೇಟಿ
ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಜೂನ್ 29 ರಿಂದ 30ರ ವರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಮಂಗಳವಾರ ತಿಳಿಸಿದ್ದಾರೆ. ರಾಹುಲ್ ಗಾಂಧಿಯವರು ರಾಜ್ಯದಲ್ಲಿ ಸ್ಥಾಪಿಸಲಾಗಿರುವ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಇಂಫಾಲ್ ಮತ್ತು ಚುರಚಂದಪುರದಲ್ಲಿ ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ … Continued