ಒಂದೇ ದಿನದಲ್ಲಿ 500ಕ್ಕೂ ಹೆಚ್ಚು ಅಧಿಕ ಅರ್ಜಿಗಳ ವಿಚಾರಣೆ ; ನ್ಯಾಯಮೂರ್ತಿ ನಾಗಪ್ರಸನ್ನ ಮತ್ತೊಂದು ಮೈಲಿಗಲ್ಲು

ಬೆಂಗಳೂರು : ತುರ್ತು ವಿಚಾರಣೆಗೆ ಕೋರಿದ್ದ 250ಕ್ಕೂ ಹೆಚ್ಚು ಅರ್ಜಿಗಳನ್ನು ಬುಧವಾರ ವಿಚಾರಣೆ ನಡೆಸುವ ಮೂಲಕ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಇದೇ ಮೊದಲ ಬಾರಿಗೆ ಹೈಕೋರ್ಟ್‌ ಕಲಾಪಗಳ ಇತಿಹಾಸದಲ್ಲೇ ಹೊಸ ದಾಖಲೆ ಬರೆದರು. ಅವರು ಒಟ್ಟು 550ಕ್ಕೂ ಹೆಚ್ಚು ಪ್ರಕರಣಗಳ ವಿಚಾರಣೆ ನಡೆಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಬುಧವಾರ (ಸೆಪ್ಟೆಂಬರ್ 2) ಬೆಳಿಗ್ಗೆ … Continued

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶಗೆ ಸದ್ಯಕ್ಕೆ ರಿಲೀಫ್ ನೀಡಿದ ಹೈಕೋರ್ಟ್‌

ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರ ವಿರುದ್ಧ ಜಾರಿ ನಿರ್ದೇಶನಾಲಯ ಜಾರಿ ಮಾಡಿರುವ ಸಮನ್ಸ್‌ಗೆ ಹೈಕೋರ್ಟ್‌ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ ಅವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಅರ್ಜಿಗಳ … Continued

ಹುಕ್ಕಾ, ಹುಕ್ಕಾ ಬಾರ್‌ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು:ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲಾ ಬಗೆಯ ಹುಕ್ಕಾ ದಾಸ್ತಾನು, ಮಾರಾಟ, ಸೇವನೆ ಮತ್ತು ಜಾಹೀರಾತು ನಿಷೇಧಿಸಿ ರಾಜ್ಯ ಸರ್ಕಾರ ರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಹಾಗೂ ಹುಕ್ಕಾ ಮತ್ತು ಹುಕ್ಕಾ ಬಾರ್‌ ನಿಷೇಧ ಪ್ರಶ್ನಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾ ಮಾಡಿದೆ. ಬೆಂಗಳೂರಿನ ಆರ್‌ ಭರತ್‌ ಹಾಗೂ ಮತ್ತಿತರರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ … Continued

ವಾಕ್‌-ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ವಾದ ಆಲಿಸಿ ಇತಿಹಾಸ ಸೃಷ್ಟಿಸಿದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು : ವಾಕ್‌ ಮತ್ತು ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ಅವರ ವಾದವನ್ನು ಪ್ರಮಾಣೀಕೃತ ದುಭಾಷಿಯ ನೆರವಿನಿಂದ ಆಲಿಸುವ ಮೂಲಕ ಕರ್ನಾಟಕ ಹೈಕೋರ್ಟ್‌ ಸೋಮವಾರ ಇತಿಹಾಸ ಸೃಷ್ಟಿಸಿದೆ. ಕೌಟುಂಬಿಕ ವ್ಯಾಜ್ಯ ಪ್ರಕರಣವೊಂದರಲ್ಲಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಪ್ರತಿವಾದಿ ಪತ್ನಿ ಪರವಾಗಿ ಸಾರಾ ಸನ್ನಿ ವಾದಿಸಿದರು. ಸ್ಕಾಟ್ಲೆಂಡ್‌ನಲ್ಲಿರುವ ಪತಿ ಮತ್ತು ಬೆಂಗಳೂರಿನಲ್ಲಿರುವ … Continued

40% ಕಮಿಷನ್‌ ಆರೋಪ ಪ್ರಕರಣ: ಏಕ ವ್ಯಕ್ತಿ ಆಯೋಗದ ಮುಂದೆ ಯಾಕೆ ಒಂದೇ ಒಂದು ಪ್ರಕ್ರಿಯೆ ನಡೆದಿಲ್ಲ ; ಹೈಕೋರ್ಟ್‌ ಪ್ರಶ್ನೆ

ಬೆಂಗಳೂರು : ಕಳೆದ ನಾಲ್ಕು ವರ್ಷದಲ್ಲಿ ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆಗಳ ಗುತ್ತಿಗೆ ಕಾಮಗಾರಿಗಳಲ್ಲಿ ನಡೆದಿದೆ ಎಂದು ಆರೋಪಿಸಲಾದ ಅಕ್ರಮಗಳ ಕುರಿತು ವಿಚಾರಣೆ ನಡೆಸಲು ನೇಮಕಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನದಾಸ ಅವರ ಏಕ ವ್ಯಕ್ತಿ ಆಯೋಗದ ಮುಂದೆ ಏಕೆ ಒಂದೇ ಒಂದು ಪ್ರಕ್ರಿಯೆ ನಡೆದಿಲ್ಲ ಎಂಬುದನ್ನು ರಾಜ್ಯ ಸರ್ಕಾರ ತಿಳಿಸಬೇಕು. ಇಲ್ಲವಾದಲ್ಲಿ ಸೂಕ್ತ ಆದೇಶ … Continued

ಗೋಕರ್ಣ ಮಹಾಬಲೇಶ್ವರ ದೇಗುಲ ಮೇಲ್ವಿಚಾರಣಾ ಸಮಿತಿಯ ಸದಸ್ಯರ ಬದಲಾವಣೆ: ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು : ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಚಟುವಟಿಕೆಗಳ ನಿರ್ವಹಣೆಗಾಗಿ ಸುಪ್ರೀಂ ಕೋರ್ಟ್‌ ಆದೇಶದ ಅನ್ವಯ ರಚಿಸಲಾಗಿದ್ದ ಮೇಲ್ವಿಚಾರಣಾ ಸಮಿತಿಯ ನಾಲ್ವರು ಸದಸ್ಯರನ್ನು ತೆಗೆದುಹಾಕಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ. ಮೇಲ್ವಿಚಾರಣಾ ಸಮಿತಿಯಲ್ಲಿದ್ದ ಇಬ್ಬರು ಉಪಾಧಿವಂತರಯ ಹಾಗೂ ಇಬ್ಬರು ವಿದ್ವಾಂಸರನ್ನು ಬದಲಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್‌ ರದುಪಡಿಸಿದೆ. ಮಠದ ಮೇಲ್ವಿಚಾರಣಾ ಸಮಿತಿಯ ನಾಲ್ವರು … Continued