ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ರಾಜೀನಾಮೆ

ನವದೆಹಲಿ: ಭ್ರಷ್ಟಾಚಾರದ ಆರೋಪದ ಮೇಲೆ ವಜಾಗೊಳಿಸುವ ಪ್ರಕ್ರಿಯೆಯನ್ನು (Impeachment) ಎದುರಿಸುತ್ತಿರುವ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ವರ್ಷ ದೆಹಲಿಯ ಅವರ ನಿವಾಸದಲ್ಲಿ ಭಾರಿ ಪ್ರಮಾಣದ ನಗದು ಪತ್ತೆಯಾದ ನಂತರ ವರ್ಮಾ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ನ್ಯಾಯಮೂರ್ತಿ … Continued

ನ್ಯಾ. ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ತ್ರಿಸದಸ್ಯ ಸಮಿತಿ ರಚಿಸಿದ ಲೋಕಸಭಾ ಸ್ಪೀಕರ್

ನವದೆಹಲಿ: ಅಲಾಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ಅವರು ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಅವರ ನಿವಾಸದಲ್ಲಿ ಅಪಾರ ಪ್ರಮಾಣದ ಸುಟ್ಟು ಕರಕಲಾದ ನಗದು ರಾಶಿ ಪತ್ತೆಯಾದ ಪ್ರಕರಣದ ತನಿಖೆಗಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಂಗಳವಾರ ಮೂವರು ಸದಸ್ಯರ ಸಮಿತಿ ರಚಿಸಿದ್ದು, ನ್ಯಾ. ವರ್ಮಾ ಅವರನ್ನು ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಯಿಂದ ಪದಚ್ಯುತಗೊಳಿಸುವ ಪ್ರಕ್ರಿಯೆಯನ್ನು ಔಪಚಾರಿಕವಾಗಿ … Continued

ಆಂತರಿಕ ತನಿಖಾ ವರದಿ, ಪದಚ್ಯುತಿ ಶಿಫಾರಸ್ಸು ಪ್ರಶ್ನಿಸಿದ್ದ ನ್ಯಾ. ವರ್ಮಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಅಪಾರ ಪ್ರಮಾಣದ ಸುಟ್ಟ ನೋಟಿನ ಕಂತೆಗಳು ದೊರೆತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ವಾಗ್ದಂಡನೆ (ಮಹಾಭಿಯೋಗ) ವಿಧಿಸಲು ಸರ್ವೋಚ್ಚ ನ್ಯಾಯಾಲಯದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸಂಜೀವ ಖನ್ನಾ ಅವರು ಮಾಡಿದ್ದ ಶಿಫಾರಸು ಪ್ರಶ್ನಿಸಿ ಅಲಾಹಾಬಾದ್‌ ಹೈಕೋರ್ಟ್‌ ಹಾಲಿ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ … Continued

ನ್ಯಾಯಮೂರ್ತಿ ಯಶವಂತ ವರ್ಮಾ ಅಲಹಾಬಾದ್ ಹೈಕೋರ್ಟ್‌ ಗೆ ವರ್ಗಾವಣೆ

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರನ್ನು ಅವರ ಮೂಲ ಹೈಕೋರ್ಟ್‌ ಆದ ಅಲಹಾಬಾದ್ ಹೈಕೋರ್ಟಿಗೆ ವರ್ಗಾವಣೆ ಮಾಡಿ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಇದೇ ವೇಳೆ ಅವರಿಗೆ ನ್ಯಾಯಾಂಗ ಕಾರ್ಯ ವಹಿಸದಂತೆ ಅಲಾಹಾಬಾದ್‌ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ಮಾರ್ಚ್ 24 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ಮಾಡಿದ ಶಿಫಾರಸಿನ ಮೇರೆಗೆ … Continued

ನ್ಯಾಯಮೂರ್ತಿ ಯಶವಂತ ವರ್ಮಾ ಪ್ರಕರಣದ ತನಿಖೆ ಆರಂಭಿಸಿದ ಸುಪ್ರೀಂ ಕೋರ್ಟ್‌ ರಚಿತ ಆಂತರಿಕ ಸಮಿತಿ

ನವದೆಹಲಿ: ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ನಿವಾಸದಲ್ಲಿ ನಗದು ರಾಶಿ ಪತ್ತೆಯಾದ ಆರೋಪದ ತನಿಖೆಗಾಗಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸಂಜೀವ ಖನ್ನಾ ಅವರು ರಚಿಸಿದ್ದ ತ್ರಿಸದಸ್ಯ ಆಂತರಿಕ ಸಮಿತಿ ಮಂಗಳವಾರ ತನಿಖೆ ಆರಂಭಿಸಿತು. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ … Continued

ಅಲಾಹಾಬಾದ್‌ ಹೈಕೋರ್ಟಿಗೆ ನ್ಯಾಯಮೂರ್ತಿ ವರ್ಮಾ ವರ್ಗಾವಣೆ ಮಾಡಲು ಕೊಲಿಜಿಯಂ ನಿರ್ಧಾರ

ನವದೆಹಲಿ : ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ಅವರನ್ನು ಮರಳಿ ಅವರ ಮಾತೃ ಸಂಸ್ಥೆಯಾದ ಅಲಹಾಬಾದ್‌ ಹೈಕೋರ್ಟ್‌ಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್‌ ಕೊಲಿಜಿಯಂ ನಿರ್ಧರಿಸಿದೆ. ನ್ಯಾಯಮೂರ್ತಿ ವರ್ಮಾ ಅವರ ಮನೆಯಲ್ಲಿ ಅಗ್ನಿಶಾಮಕ ದಳ ಬೆಂಕಿ ನಂದಿಸುವಾಗ ಸುಟ್ಟ ನೋಟಿನ ಕಂತೆಗಳು ಪತ್ತೆಯಾದ ನಂತರ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಈ ನಿರ್ಧಾರ ಕೈಗೊಂಡಿದೆ. ಮಾರ್ಚ್‌ 20 … Continued

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ವರ್ಮಾ ನಿವಾಸದಲ್ಲಿ ನಗದು ಪತ್ತೆ ಪ್ರಕರಣ: ವೀಡಿಯೊ ಬಹಿರಂಗ

ನವದೆಹಲಿ: ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ಮನೆಯಲ್ಲಿ ನಗದು ಹಣ ಪತ್ತೆಯಾದ ಆರೋಪದ ಕುರಿತು ಮೂರು ಚಿತ್ರಗಳು ಮತ್ತು ವೀಡಿಯೊ ಸೇರಿದಂತೆ ವರದಿಯನ್ನು ಸುಪ್ರೀಂ ಕೋರ್ಟ್ ಶನಿವಾರ ತಡರಾತ್ರಿ ಸಾರ್ವಜನಿಕಗೊಳಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ತನಿಖೆ ನಡೆಸಲು ಆಂತರಿಕ ಸಮಿತಿಯನ್ನು ರಚಿಸಿದ್ದಾರೆ. ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ … Continued

ನಗದು ದೊರೆತಿಲ್ಲ, ಇದು ನನ್ನನ್ನು ಸಿಲುಕಿಸಲು ಪಿತೂರಿ: ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ

ನವದೆಹಲಿ: ಬೆಂಕಿ ಆಕಸ್ಮಿಕಕ್ಕೆ ತುತ್ತಾದ ದೆಹಲಿಯ ತಮ್ಮ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ ಎಂಬ ಆರೋಪ ತಮ್ಮ ಮೇಲೆ ಸುಳ್ಳು ಆಪಾದನೆ ಮತ್ತು ಅಪಪ್ರಚಾರದ ಪಿತೂರಿಯ ಭಾಗ ಎಂದು ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ಹೇಳಿದ್ದಾರೆ. ತನಿಖೆಗಾಗಿ ವಿವಿಧ ಹೈಕೋರ್ಟ್‌ಗಳ ಮೂವರು ನ್ಯಾಯಮೂರ್ತಿಗಳನ್ನು ನೇಮಿಸಲಾಗಿದ್ದು ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸಲ್ಲಿಸಿದ ವರದಿ … Continued

ನಗದು ಪತ್ತೆ ಪ್ರಕರಣ: ನ್ಯಾಯಮೂರ್ತಿ ಯಶವಂತ ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ಮನೆಯಲ್ಲಿ ಅಪಾರ ಪ್ರಮಾಣದ ಹಣದ ರಾಶಿ ಪತ್ತೆಯಾಗಿದೆ ಎಂಬ ಆರೋಪವನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ … Continued

ನ್ಯಾಯಮೂರ್ತಿ ವರ್ಮಾ ಅವರನ್ನು ಇನ್ನೂ ವರ್ಗಾವಣೆ ಮಾಡಿಲ್ಲ, ಆಂತರಿಕ ತನಿಖೆಗೂ ಇದಕ್ಕೂ ಸಂಬಂಧವಿಲ್ಲ : ಸುಪ್ರೀಂ ಕೋರ್ಟ್

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶ್ವಂತ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡುವುದಕ್ಕೂ ಅವರ ಅಧಿಕೃತ ನಿವಾಸದಲ್ಲಿ ಅಪಾರ ಪ್ರಮಾಣದ ಹಣ ಸಿಕ್ಕಿದೆ ಎನ್ನಲಾದ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಸ್ಪಷ್ಟಪಡಿಸಿದೆ. ಸ್ಥಾಪಿತ ಕಾರ್ಯವಿಧಾನಗಳ ಪ್ರಕಾರ ಈ ವಿಷಯದ ಬಗ್ಗೆ ಆಂತರಿಕ ವಿಚಾರಣೆ ನಡೆಸಲಾಗುತ್ತಿದೆ ಮತ್ತು ವರ್ಗಾವಣೆ ನಿರ್ಧಾರವು ನಡೆಯುತ್ತಿರುವ … Continued