ಮರ ಬಿದ್ದು ವ್ಯಕ್ತಿ ಮೃತಪಟ್ಟು ಎರಡು ದಿನ ಕಳೆದರೂ ಸ್ಥಳ ಬಿಟ್ಟು ಕದಲದ ಆತ ಒಯ್ಯುತ್ತಿದ್ದ ಕೋಳಿ…!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳ ಸಮೀಪದ ಪುಳಿಕುಕ್ಕು ಮರಚೆಡವು ಬಳಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ದೂಪದ ಮರ ಬಿದ್ದು ಎಡಮಂಗಲ ಗ್ರಾಮದ ದೇವಸ್ಯ ಸೀತಾರಾಮ ಗೌಡ ಸ್ಥಳದಲ್ಲೇ ಮೃತಪಟ್ಟು ಎರಡು ದಿನ ಕಳೆದಿದೆ. ಆದರೆ, ಅವರು ಸ್ಕೂಟಿಯಲ್ಲಿ ತೆಗೆದುಕೊಂಡು ಹೋಗುತ್ತಿದ್ದ ಕೋಳಿ ಮಾತ್ರ ಘಟನೆ ನಡೆದು ಎರಡು ದಿನ ಕಳೆದರೂ ಆ … Continued

ತಾಳಿ ಕಟ್ಟುವ ವೇಳೆ ಮದುವೆಗೆ ನಿರಾಕರಿಸಿದ ವಧು : ಮಂಟಪದಲ್ಲೇ ಮುರಿದು ಬಿತ್ತು ಮದುವೆ…!

ಮಂಗಳೂರು : ಕೊನೆ ಕ್ಷಣದಲ್ಲಿ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ ನಂತರ ಮದುವೆ ಮಂಟಪದಲ್ಲೇ ಮದುವೆ ಮುರಿದು ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಶುಕ್ರವಾರ (ಏಪ್ರಿಲ್‌ 26) ನಡೆದಿದೆ ಎಂದು ವರದಿಯಾಗಿದೆ. ಕೊಣಾಲು ಗ್ರಾಮದ ಕೋಲ್ಪೆಯ ಉಮೇಶ ಎಂಬವರ ವಿವಾಹವು ಬಂಟ್ವಾಳ ತಾಲೂಕು ಕುಳ ಗ್ರಾಮದ ಕಂಟ್ರಮಜಲು ಸರಸ್ವತಿ … Continued

ಕಡಬ : ಮುಸುಕುಧಾರಿಯಿಂದ ಶಾಲಾ ಆವರಣದಲ್ಲೇ ಆ್ಯಸಿಡ್ ದಾಳಿ ; ಮೂವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ಮಂಗಳೂರು: ದುಷ್ಕರ್ಮಿಯೊಬ್ಬ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ (Acid Attack) ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಅವರಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆರೋಪಿ ಮುಸುಕು ಧರಿಸಿ ಬಂದಿದ್ದು, ದಾಳಿ ನಡೆಸಿದ ಆರೋಪಿ ಅಬೀನ್‌ … Continued

ಹೊಳೆಗೆ ಬಿದ್ದ ಕಾರು : ಓರ್ವ ಸಾವು, ಮತ್ತೋರ್ವ ಗಂಭೀರ

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿ ಹೊಡೆದು ಕೆಳಗೆ ನೀರಿಗೆ ಬಿದ್ದು ಓರ್ವ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದ ತಮಿಳುನಾಡಿನ ಹೊಸೂರು ಕೃಷ್ಣಗಿರಿ ಮೂಲದ ಹರಿಪ್ರಸಾದ (44) ಎಂಬವರ ಮೃತಪಟ್ಟಿದ್ದು, ಗಾಯಗೊಂಡ … Continued

ಕಡಬ: ಕಾಡಾನೆ ದಾಳಿಗೆ ಯುವತಿ ಸೇರಿ ಇಬ್ಬರು ಸಾವು

ಮಂಗಳೂರು: ಇಂದು, ಸೋಮವಾರ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಯಿಂದ ಯುವತಿ ಸೇರಿ ಇಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ರೆಂಜಿಲಾಡಿ ಗ್ರಾಮದ ಬಳಿ ನೈಲ ಎಂಬಲ್ಲಿ ನಡೆದ ವರದಿಯಾಗಿದೆ. ಇಂದು, ಸೋಮವಾರ ಬೆಳಿಗ್ಗೆ 6:30ರ ಸುಮಾರಿಗೆ ಕಾಡಾನೆ ದಾಳಿ ನಡೆಸಿದೆ. ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ(21) ಎಂಬವರು ಸೋಮವಾರ ಮನೆಯಿಂದ ಹಾಲು ಡೈರಿಗೆ … Continued

ಕಡಬ :’ಪಾಂಡವರ ಗುಹೆ’ಯಲ್ಲಿ ಶಿಲಾಯುಗದ ಸಮಾಧಿ ಸ್ಥಳ’ ಪತ್ತೆ…!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ, ರಾಮಕುಂಜ ಗ್ರಾಮದ ಆತೂರು-ಕುಂಡಾಜೆಯ ಸರ್ಕಾರಿ ಗೇರುಬೀಜದ ಪ್ಲಾಂಟೇಶನ್‌ನಲ್ಲಿ ಅಪರೂಪದ ಬೃಹತ್ ಶಿಲಾಯುಗದ ಗುಹಾ ಸಮಾಧಿ ಪತ್ತೆಯಾಗಿದೆ. ಗ್ರಾಮಸ್ಥರು ನೀಡಿದ ಮಾಹಿತಿಯ ಆಧಾರದ ಮೇಲೆ, ತಜ್ಞರ ತಂಡವು ‘ಪಾಂಡವರ ಗುಹೆ’ ಎಂದು ಕರೆಯಲ್ಪಡುವ ಸ್ಥಳಕ್ಕೆ ಭೇಟಿ ನೀಡಿತು ಮತ್ತು ಕೆಲವು ಚಕಿತಗೊಳಿಸುವ ಲಕ್ಷಣಗಳನ್ನ ಹೊಂದಿರುವ ಬೃಹತ್ ಶಿಲಾಯುಗದ ಸ್ಥಳವನ್ನ … Continued

ಸರ್ಕಾರಿ ಶಾಲೆಯಲ್ಲೇ ವಿದ್ಯಾರ್ಥಿಗಳಿಂದ ನಮಾಜ್..!?

ಮಂಗಳೂರು:ಹಿಜಾಬ್​ ವಿವಾದ ರಾಷ್ಟ್ರಾದ್ಯಂತ ಸದ್ದು ಮಾಡುತ್ತಿರುವಾಗ, ಮತ್ತೊಂದು ಹೊಸ ವಿವಾದಕ್ಕೆ ಎಡೆ ಮಾಡಿಕೊಡುವ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಕೆಲವು ವಿದ್ಯಾರ್ಥಿಗಳು ಶಾಲೆಯಲ್ಲೇ ನಮಾಜ್ ಮಾಡಿದ್ದಾರೆ ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಂಕತ್ತಡ್ಕ ಸರ್ಕಾರಿ ಶಾಲೆಯಲ್ಲಿ ಈ ನಮಾಜ್ ಪ್ರಕರಣ ನಡೆದಿದೆ ಎಂದು ವರದಿಯಾಗಿದ್ದು, ಇಲ್ಲಿ 6-7ನೇ ತರಗತಿಯ ಐದು ಮಂದಿ … Continued