ʼಚುನಾವಣಾ ರಾಜಕೀಯ’ಕ್ಕೆ ನಿವೃತ್ತಿ ಘೋಷಿಸಿದ ವೈಎಸ್‌ವಿ ದತ್ತ : ಕಡೂರಿನಲ್ಲಿ ಪಶ್ಚಾತ್ತಾಪದ ಪಾದಯಾತ್ರೆ

ಚಿಕ್ಕಮಗಳೂರು: ಕೆಲದಿನಗಳ ಹಿಂದೆ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸಿ ಸೋತ ನಂತರ ಜೆಡಿಎಸ್​ನ ವೈಎಸ್​ವಿ ದತ್ತ (YSV Datta) ಅವರು ಈಗ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಹಾಗೂ ಚನಾವಣೆ ಸಮಯದಲ್ಲಿ ನಡೆದ ಬೆಳವಣಿಗೆಯಿಂದ ಪಶ್ಚಾತ್ತಾಪ ಪಟ್ಟಿರುವ ಅವರು ಕ್ಷೇತ್ರದಲ್ಲಿ ಪಶ್ಚಾತ್ತಾಪ ಪಾದಯಾತ್ರೆ ಕೈಗೊಂಡು ಜನರಲ್ಲಿ ಕ್ಷಮೆ ಕೋರಲು ನಿರ್ಧರಿಸಿದ್ದಾರೆ. ವಿಧಾನಸಭಾ … Continued

ʼಕಾಂಗ್ರೆಸ್ ಸ್ವಾಭಿಮಾನಕ್ಕೆ ಪೆಟ್ಟು ನೀಡಿದೆ’: ಪಕ್ಷೇತರನಾಗಿ ಸ್ಪರ್ಧಿಸಲು ವೈಎಸ್‌ವಿ ದತ್ತ ನಿರ್ಧಾರ

ಚಿಕ್ಕಮಗಳೂರು: ಇತ್ತೀಚೆಗೆ ಕಾಂಗ್ರೆಸ್ ಸೇರಿ, ಟಿಕೆಟ್‌ ಸಿಗದೆ ಬೇಸರಗೊಂಡಿರುವ ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಡೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಕಡೂರು ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂದಿರದಲ್ಲಿ ಭಾನುವಾರ ನಡೆದ ಅಭಿಮಾನಿಗಳ ಸಭೆಯಲ್ಲಿ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. ಕಾಂಗ್ರೆಸ್‌ ಟಿಕೆಟ್‌ ನೀಡದೆ ವಂಚಿಸಿ ಸ್ವಾಭಿಮಾನಕ್ಕೆ ಪೆಟ್ಟು ನೀಡಿದೆ, ಈ … Continued

ಮಕ್ಕಳ ಜೊತೆ ಅಸಭ್ಯ ವರ್ತನೆ : ಚಾಲಕನನ್ನು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿದ ಗ್ರಾಮಸ್ಥರು

ಚಿಕ್ಕಮಗಳೂರು: ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ ತೋರಿಸಿ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರಿನ ಸಕ್ಕರಾಯಪಟ್ಟಣದಲ್ಲಿ ಈ ಘಟನೆ ನಡೆದ ವರದಿಯಾಗಿದ್ದು, ಆರೋಪಿ ರಾಜಪ್ಪ ವಿರುದ್ಧ ಚಿಕ್ಕಮಗಳೂರಿನ ಸಕ್ಕರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಇತರ ಸೆಕ್ಷನ್‌ಗಳ … Continued

ಆರ್​ಎಸ್​ಎಸ್​ ಪ್ರಮುಖನ ಕಾರಿನ ಮೇಲೆ ‘ಕಿಲ್ ಯು’ ಎಂಬ ಜಿಹಾದಿ ಬರಹ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಆರ್‌ಎಸ್ಎಸ್ ಕಾರ್ಯಕರ್ತನ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ನಾಲ್ಕೂ ಚಕ್ರದ ಗಾಳಿ ಬಿಟ್ಟು ಕಾರಿನ ಮೇಲೆ ಕಿಲ್ ಯು, ಜಿಹಾದಿ ಎಂದು ಬರೆಯಲಾಗಿದೆ ಎಂದು ವರದಿಯಾಗಿದೆ. ಕಡೂರಿನ ಲಕ್ಷ್ಮೀಶ ನಗರದ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ನಾಲ್ಕು ಚಕ್ರದ ಗಾಳಿ ತೆಗೆದ ದುಷ್ಕರ್ಮಿಗಳು ಬಳಿಕ ಈ ರೀತಿ ಬರೆದಿದ್ದಾರೆ. ಕಿಲ್ … Continued