ಚಾಕುವಿನಿಂದ ಇರಿದು ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಖುರ್ದ ಪಟ್ಟಣ ಪಂಚಾಯತ ವ್ಯಾಪ್ತಿಯ ಫರೀದಖಾನ ವಾಡಿಯ ತೋಟದ ಪ್ರದೇಶದಲ್ಲಿ ತಾಯಿಯೊಬ್ಬಳು ತನ್ನ ಮಗುವನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಎರಡು ವರ್ಷ 9 ತಿಂಗಳಿನ ಸಾತ್ವಿಕ್ ರಾಹುಲ್ ಕಟಗೇರಿ ಎಂಬಾತ ಕೊಲೆಯಾದ ಮಗು. … Continued

ಕಾಗವಾಡ : ಟ್ರ್ಯಾಕ್ಟರ್‌ ಟೇಲರ್‌ ಪಲ್ಟಿ ; ನಾಲ್ವರು ಪಾದಚಾರಿ ಮಹಿಳೆಯರು ಸಾವು

ಬೆಳಗಾವಿ : ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಬಳಿ ಭಾನುವಾರ ಕಬ್ಬು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್‌ ಟೇಲರ್ ಪಲ್ಟಿಯಾಗಿ ಅದರಡಿ ಸಿಲುಕಿ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆ ಒಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಮಾಲಾಬಾಯಿ ರವಸಾಬ್ ಐನಾಪುರೆ (61), ಚಂಪಾ ಲಕ್ಕಪ್ಪ ತಳಕಟ್ಟಿ … Continued