ಕುಮಟಾ:  ಜಿಲ್ಲಾ ಮಟ್ಟದ ಸೌಲಭ್ಯ ವಿತರಣಾ ಸಮಾವೇಶದಲ್ಲಿ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ಕುಮಟಾ : ನಗರದ ಮಣಕಿ ಮೈದಾನದಲ್ಲಿ ನಡೆದ ಉತ್ತರಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಸಂಯುಕ್ತ ಆಶ್ರಯದಲ್ಲಿ ಹಲ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಜಿಲ್ಲಾ ಮಟ್ಟದ ಸೌಲಭ್ಯ ವಿತರಣಾ ಸಮಾವೇಶ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವರು ಕೋಟ ಶ್ರೀನಿವಾಸ್ ಪೂಜಾರಿ ಸಮಾವೇಶಕ್ಕೆ ಚಾಲನೆ ನೀಡಿದರು. ಸಮಾವೇಶ ದಲ್ಲಿ … Continued

ಡಿ.13 ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ: ಸಮರ್ಪಕ ಸಿದ್ಧತೆಗೆ ಸಭಾಧ್ಯಕ್ಷ ಕಾಗೇರಿ ಸೂಚನೆ

ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಇದೇ ಡಿ.13 ರಿಂದ 24ರ ವರೆಗೆ ನಡೆಯಲಿರುವ ಚಳಿಗಾಲದ ಅಧಿವೇಶನವನ್ನು ಯಶಸ್ವಿಗೊಳಿಸಲು ಉತ್ತಮ ವಸತಿ, ಸಾರಿಗೆ ,ಆಹಾರ , ಶಿಷ್ಟಾಚಾರ ಸಿದ್ಧತೆಗಳನ್ನು ಸರ್ಕಾರ ಹಾಗೂ ಜಿಲ್ಲಾಡಳಿತ ಸಮರ್ಪಕವಾಗಿ ಕೈಗೊಳ್ಳಬೇಕು.ಸದ್ಯಕ್ಕೆ ಕೊರೊನಾ ಬಗ್ಗೆ ಯಾವುದೇ ಆತಂಕಗಳಿಲ್ಲ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಸುವರ್ಣಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಅಧಿವೇಶನದ … Continued

ನೂತನ ಶಾಸಕರಿಗೆ ತರಬೇತಿ- ಸರ್ವಪಕ್ಷಗಳ ಜೊತೆಗೆ ಸಮಾಲೋಚಿಸಿ ನಿರ್ಣಯ: ಕಾಗೇರಿ

ಬೆಂಗಳೂರು: ನೂತನವಾಗಿ ಆಯ್ಕೆಯಾಗುವ ಶಾಸಕರಿಗೆ ತರಬೇತಿ ನೀಡಬೇಕಿದೆ. ಈ ಬಗ್ಗೆ ಸರ್ವಪಕ್ಷಗಳ ಜೊತೆಗೆ ಸಮಾಲೋಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಇಂದು (ನವೆಂಬರ್ 21) ಹೇಳಿಕೆ ನೀಡಿರುವ ಅವರು, ಉತ್ತಮ ವಿಧಾನಸಭೆ, ಪರಿಷತ್ ಪ್ರಶಸ್ತಿ ನೀಡಲು ಸಮಿತಿ ರಚನೆಗೆ ನಿರ್ಣಯ ಕೈಗೊಳ್ಳಲಾಗಿದೆ. ರಾಷ್ಟ್ರಪತಿ, ರಾಜ್ಯಪಾಲರ ಭಾಷಣ, ಪ್ರಶ್ನೋತ್ತರ ವೇಳೆ ಸದನದಲ್ಲಿ … Continued

ಸಂಸದೀಯ ವ್ಯವಸ್ಥೆ ಅಡಿ ಸಚಿವ ಸುಧಾಕರ ಮೇಲೆ ಕ್ರಮ: ಕಾಗೇರಿ

ಬೆಂಗಳೂರು: ಶಾಸಕರ ಕುರಿತಾಗಿ ಸಚಿವ ಡಾ.ಕೆ.ಸುಧಾಕರ್ ಅವರ ಮೇಲೆ ಸಂಸದೀಯ ವ್ಯವಸ್ಥೆ ಅಡಿಯಲ್ಲಿ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇನೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಡಾ.ಕೆ.ಸುಧಾಕರ್ ಆಕ್ಷೇಪಾರ್ಹ ಹೇಳಿಕೆ ಸರಿಯಲ್ಲ. ಅದರ ಬಗ್ಗೆ ಅವರೇ ಸ್ಪಷ್ಟೀಕರಣ ಕೂಡಾ ಕೊಟ್ಟಿದ್ದಾರೆ. ಆದರೂ ಸಹ ಸಭಾಧ್ಯಕ್ಷನಾಗಿ ಸಂಸದೀಯ ವ್ಯವಸ್ಥೆ … Continued

ಒಂದು ರಾಷ್ಟ್ರ ಒಂದು ಚುನಾವಣೆ ಆರ್‌ಎಸ್‌ಎಸ್ ಅಜೆಂಡಾವಲ್ಲ : ಕಾಗೇರಿ

ಬೆಂಗಳೂರು: ಒಂದು ರಾಷ್ಟ್ರ ಒಂದು ಚುನಾವಣೆ ಆರ್‌ಎಸ್‌ಎಸ್ ಅಜೆಂಡಾವೂ ಅಲ್ಲ, ಪ್ರಧಾನಿ ಮೋದಿಯವರ ಅಜೆಂಡಾವೂ ಅಲ್ಲ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ವಿಧಾನಸಭೆಯ ತಮ್ಮ ಕೊಠಡಿಯಲ್ಲಿ ಸುದ್ದಿಗಾರರೊಂದಿಗೆ ಅನೌಪಚಾರಿಕವಾಗಿ ಮಾತನಾಡಿದ ಅವರು, ಸಂಸತ್ತಿನ ಸ್ಥಾಯಿ ಸಮಿತಿ ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ಹಿಂದೆಯೇ ಪ್ರಸ್ತಾಪಿಸಿತ್ತು. ಹಾಗೆಯೇ ಮಾಜಿ ರಾಷ್ಟ್ರಪತಿ ದಿ. ಪ್ರಣಬ್ … Continued

ಕಡ್ಡಾಯ ಮತದಾನ: ಸ್ಪೀಕರ್‌ ಕಾಗೇರಿ ಪ್ರತಿಪಾದನೆ

ಬೆಂಗಳೂರು: ಕಡ್ಡಾಯ ಮತದಾನವನ್ನು ಪ್ರತಿಪಾದಿಸಿರುವ ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ ಏಕ ಕಾಲದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆಸುವುದರಿಂದ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಏರು ಮಟ್ಟದಲ್ಲಿ ತೆಗೆದುಕೊಂಡು ಹೋಗಲು ಸಹಾಯವಾಗುತ್ತಿದೆ ಎಂದು ಹೇಳಿದ್ದಾರೆ. ಗುರುವಾರ ವಿಧಾನಸಭೆಯಲ್ಲಿಂದು ಒಂದು ರಾಷ್ಟ್ರ, ಒಂದು ಚುನಾವಣೆಯ ಚರ್ಚೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಒಂದು ಬಾರಿ ಲೋಕಸಭೆ ಮತ್ತು ವಿಧಾನಸಭೆಗಳಿಗೆ … Continued