ಕಲಬುರಗಿ : ಮೊಬೈಲ್ ಟಾರ್ಚ್ ಬೆಳಕಲ್ಲಿ ಬಸ್ ಚಲಾಯಿಸಿದ ಚಾಲಕ ; ವಿಡಿಯೋ ವೈರಲ್‌

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ)ಕ್ಕೆ ಸೇರಿದ ಬಸ್ ಒಂದು ಹೆಡ್‌ಲೈಟ್‌ಗಳು ಸರಿಯಾಗಿಲ್ಲದೆ ಸಂಚರಿಸಿದ್ದು, ರಸ್ತೆ ಕಾಣುವಂತೆ ಮಾಡಲು ಬಸ್‌ ಕಂಡಕ್ಟರ್‌ ತೋರಿಸಿದ ಮೊಬೈಲ್ ಫೋನ್‌ನ ಟಾರ್ಚ್ ಬೆಳಕಿನಲ್ಲಿ ಚಾಲಕ್‌ ಬಸ್‌ ಓಡಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯು ಕಲಬುರಗಿ ನಗರದಿಂದ … Continued

ಕಾರು ಅಪಘಾತ: ಐಎಎಸ್‌ ಅಧಿಕಾರಿ ಸೇರಿ ಮೂವರು ಸಾವು

ಕಲಬುರಗಿ: ಇನ್ನೋವಾ ಕಾರು ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಸೇರಿ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ಜೇವರ್ಗಿಯ ಗೌನಳ್ಳಿ ಕ್ರಾಸ್ ಬಳಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಮಹಾಂತೇಶ ಬೀಳಗಿ (51) ಹಾಗೂ ಇವರ ಸಹೋದರ ಸಂಬಂಧಿಗಳಾದ ಶಂಕರ ಬೀಳಗಿ (55) ಹಾಗೂ ಈರಣ್ಣ (53) … Continued

ಕಲಬುರಗಿ ಶರಣಬಸವೇಶ್ವರ ಸಂಸ್ಥಾನ‌ದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ಶಿವೈಕ್ಯ

ಕಲಬುರಗಿ: ನಾಡಿನಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ಸಂತ, ಜ್ಞಾನ ದಾಸೋಹಿ ಹಾಗೂ ಕಲಬುರಗಿಯ (Kalaburagi) ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ. ಶ್ರೀ ಶರಣಬಸಪ್ಪ ಅಪ್ಪಾ (92) ಅವರು ಶಿವೈಕ್ಯರಾಗಿದ್ದಾರೆ. ಶ್ರೀ ಡಾ. ಶರಣಬಸವಪ್ಪ ಅಪ್ಪ (Dr.Sharanabasappa Appa) ಗುರುವಾರ (ಆಗಸ್ಟ್‌ 14) ಶಿವೈಕ್ಯರಾದರು. ಡಾ. ಶ್ರೀ ಶರಣಬಸಪ್ಪ ಅಪ್ಪ ಅವರು ಕಳೆದ ತಿಂಗಳು … Continued

ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳು

ಕಲಬುರಗಿ: ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ (Sacred Thread) ತೆಗೆಸಿದ ಪ್ರಕರಣ ರಾಜ್ಯದಲಲಿ ಹಸಿರಾಗಿರುವಾಗಲೇ ನೀಟ್ ಪರೀಕ್ಷೆಯಲ್ಲೂ (NEET Exam) ಅಧಿಕಾರಿಗಳು ವಿದ್ಯಾರ್ಥಿಯೊಬ್ಬರ ಜನಿವಾರ ತೆಗೆಸಿದ್ದಾರೆ. ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್​ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ ಅವರ ಜನಿವಾರವನ್ನು ಅಧಿಕಾರಿಗಳು ತೆಗೆಸಿ, ಪರೀಕ್ಷೆ … Continued

ಬಿಜೆಪಿ ಎಂಎಲ್​ಸಿ ಸುನಿಲ ವಲ್ಯಾಪುರೆ ಮನೆ ಮೇಲೆ ಸಿಐಡಿ ದಾಳಿ

ಕಲಬುರಗಿ : ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸುನಿಲ ವಲ್ಯಾಪುರೆ ಅವರ ಮನೆ ಮೇಲೆ ಸಿಐಡಿ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಆಪ್ತರಾಗಿರುವ ಸುನಿಲ​ ವಲ್ಯಾಪುರೆ ಅವರ ಪುತ್ರ ವಿನಯ್ ವಲ್ಯಾಪುರೆ 2022ರಲ್ಲಿ ಭೋವಿ ನಿಗಮದ 12 ಕೋಟಿ ರೂ. ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ. … Continued

ವೀಡಿಯೊ..| ಕುಸಿದುಬಿದ್ದ ಐತಿಹಾಸಿಕ ರಾಷ್ಟ್ರಕೂಟರ ಮಳಖೇಡ ಕೋಟೆ ಗೋಡೆ

ಕಲಬುರಗಿ: ಭಾರೀ ಮಳೆಯ ಹಿನ್ನೆಲೆಯಲ್ಲಿ ಕರ್ನಾಟಕದ ಐತಿಹಾಸಿಕ ಸ್ಮಾರಕವಾದ ಕಲಬುರಗಿ ಜಿಲ್ಲೆಯ ಮಳಖೇಡದ ರಾಷ್ಟ್ರಕೂಟರ ಕೋಟೆ ಗೋಡೆ ಕುಸಿದು ಬಿದ್ದಿದೆ. ಕಲಬುರಗಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಮಳಖೇಡ ರಾಷ್ಟ್ರಕೂಟರ ಕೋಟೆ ಗೋಡೆ ಕುಸಿದುಬಿದ್ದಿದೆ. ಮಳೆಯಿಂದಾಗಿ ಕೋಟೆಯ ಗೋಡೆಗಳಲ್ಲಿ ನೀರು ನಿಂತಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಮಳೆಗೆ ಕೋಟೆ ಗೋಡೆಗಳು ತೇವಗೊಂಡಿದ್ದು, ಮಣ್ಣು … Continued

ಐಟಿ ಅಧಿಕಾರಿಗಳ ದಾಳಿ, ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

ಕಲಬುರಗಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಕಲಬುರಗಿಯ ರೈಲು ನಿಲ್ದಾಣದ ಬಳಿ ದಾಳಿ ನಡೆಸಿದ ಐಟಿ ಅಧಕಾರಿಗಳು ಎರಡು ಕೋಟಿ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ವ್ಯಕ್ತಿಯೊಬ್ಬರು ರೈಲಿನಿಂದ ಇಳಿದು ಕಾರನ್ನು ಏರಿ ತೆರಳುವ ವೇಳೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಎರಡು ಕೋಟಿ ರೂಪಾಯಿ ನಗದು ಪತ್ತೆಯಾಗಿದೆ ಎಂದು ವರದಿಯಾಗಿದೆ. ಸದ್ಯ … Continued

ಬಾವಿಗೆ ಹಾರಿದ ತಂಗಿ ರಕ್ಷಿಸಲು ತಾನೂ ಬಾವಿಗೆ ಹಾರಿದ ಅಣ್ಣ; ಇಬ್ಬರೂ ನೀರುಪಾಲು

ಕಲಬುರಗಿ : ಅಣ್ಣ ಹಾಗೂ ತಂಗಿ ಭಾನುವಾರ ರಾತ್ರಿ ಬಾವಿಯಲ್ಲಿ ಬಿದ್ದು ಮೃತಪಟ್ಟ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಟಪಳ್ಳಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಪಟಪಳ್ಳಿಯ ಸಂದೀಪ (23) ಹಾಗೂ ಆತನ ತಂಗಿ ನಂದಿನಿ‌ (19) ಎಂದು ಗುರುತಿಸಲಾಗಿದೆ. ಪಿಯುಸಿ ನಂತರ ಓದನ್ನು ಮಧ್ಯದಲ್ಲೇ ನಿಲ್ಲಿಸಿದ್ದ ನಂದಿಗೆ ಕಾಲೇಜಿಗೆ ಹೋಗು ಎಂದರೂ ಆಕೆ … Continued

ಅಫಜಲಪುರ-ಕಲಬುರಗಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು

ಕಲಬುರಗಿ: ಜೀಪ್​ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆ ಅಫಜಲ​ಪುರ ತಾಲೂಕಿನ ಹೊರವಲಯದ ನೀರಾವರಿ ಕಚೇರಿ ಬಳಿ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಜೀಪ್​ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಸಂತೋಷ (40), ಶಂಕರ (55), … Continued

ಸುದ್ದಿಗೋಷ್ಠಿಗೆ ಮುನ್ನವೇ ಮಣಿಕಂಠ ರಾಠೋಡನ ವಶಕ್ಕೆ ಪಡೆದ ಪೊಲೀಸರು

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಮಾಡಿರುವುದಕ್ಕೆ ಸಂಬಂಧಿಸಿದಂತೆ ಮಣಿಕಂಠ್ ರಾಠೋಡ್ ಸುದ್ದಿಗೋಷ್ಠಿ ಕರೆದಿದ್ದರು. ಆದರೆ ಸುದ್ದಿಗೋಷ್ಠಿಗೆ ಆಗಮಿಸುವ ಮುನ್ನವೇ ಮಣಿಕಂಠ್ ರಾಠೋಡ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಲಬುರಗಿ ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್‌ನಲ್ಲಿದ್ದ ಮಣಿಕಂಠ್ ರಾಠೋಡ್ ನನ್ನು ಇಂದು, ಗುರುವಾರ ಚೌಕ್ … Continued