ಜೇವರ್ಗಿ | ನಿಂತಿದ್ದ ಲಾರಿಗೆ ಗುದ್ದಿದ ಮಿನಿ ಬಸ್, ಐವರು ಸಾವು

ಕಲಬುರಗಿ : ನಿಂತಿದ್ದ ಲಾರಿಗೆ ಮಿನಿ ಬಸ್​ ಡಿಕ್ಕಿ ಹೊಡೆದು ಐವರು ಸಾವಿಗೀಡಾದ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಇಂದು ಶನಿವಾರ ಬೆಳಗಿನ ಜಾವ ನಡೆದಿದೆ ಎಂದು ವರದಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಮಿನಿ ಬಸ್‌ ಸಂಪೂರ್ಣ ನುಜ್ಜುಗುಜ್ಜಾಗಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ ಒಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರನ್ನು ಮೆಹಬೂಬ್ … Continued

ಕಲಬುರಗಿ: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ದರಾಮ ಸ್ವಾಮೀಜಿ ವಿಧಿವಶ

ಕಲಬುರಗಿ: ತೀವ್ರ ಹೃದಯಾಘಾತದಿಂದ ಕಲಬುರಗಿಯ ಕಾಳಗಿ ತಾಲೂಕಿನ ವಿರಕ್ತ ಮಠದ ಶ್ರೀ ಸಿದ್ದರಾಮ ಸ್ವಾಮೀಜಿ (35) ವಿಧಿವಶರಾಗಿದ್ದಾರೆ. ಆದರಿಂದು ನಸುಕಿನ ಜಾವ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇಂದು, ಸೋಮವಾರ ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ ವಿಧಾನ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ಸ್ವಾಮೀಜಿಗೆ ರಾತ್ರಿ ಮಲಗಿದ್ದಲ್ಲಿಯೇ ಹೃದಯಾಘಾತವಾಗಿದೆ … Continued

ಪರಿಷತ್​ ಪದವೀಧರ-ಶಿಕ್ಷಕರ ಕ್ಷೇತ್ರಗಳ ಚುನಾವಣೆ:: 3ರಲ್ಲಿ ಕಾಂಗ್ರೆಸ್, 3ರಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿಗೆ ಗೆಲುವು ; ಕಾಂಗ್ರೆಸ್ಸಿಗೆ ಲಾಭ, ಬಿಜೆಪಿಗೆ ನಷ್ಟ

ಬೆಂಗಳೂರು : ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರ ಕ್ಷೇತ್ರಗಳು ಸೇರಿದಂತೆ ಒಟ್ಟು ವಿಧಾನ ಪರಿಷತ್‌ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ೩ ಹಾಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬೆಂಗಳೂರು ವ್ಯಾಪ್ತಿಯ ಒಂದು ಪದವೀಧರ ಮತ್ತು ಒಂದು ಶಿಕ್ಷಕರ ಕ್ಷೇತ್ರವನ್ನು ಬಿಜೆಪಿ ಕಳೆದುಕೊಂಡು ಬಿಜೆಪಿ ಹಿನ್ನಡೆ ಅನುಭವಿಸಿದೆ. ಇಲ್ಲಿ ಕಾಂಗ್ರೆಸ್ … Continued

ಏಪ್ರಿಲ್‌ 28, 29 ರಂದು ಉತ್ತರ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ : ಬೆಳಗಾವಿಯಲ್ಲಿ ತಂಗುವ ಸಾಧ್ಯತೆ

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಚುನಾವಣಾ ಪ್ರಚಾರದಲ್ಲಿ ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ ವ್ಯಾಪ್ತಿಯ ಲೋಕಸಭಾ ಮತಕ್ಷೇತ್ರಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್​ 28 ಮತ್ತು 29 ಎರಡೂ ದಿನಗಳ ಕಾಲ ಕರ್ನಾಟಕದಲ್ಲಿ ಮತಯಾಚಿಸಲಿದ್ದಾರೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಅವರು ಬೆಳಗಾವಿಯಲ್ಲೇ ತಂಗುವ ಸಾಧ್ಯತೆ ಇದೆ. … Continued

ಬಸ್ಸಿ​​ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೃದಯಾಘಾತದಿಂದ ಸಾವು

ಕಲಬುರಗಿ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಭಾನುವಾರ ಕಮಲಾಪುರ ಬಳಿ ನಡೆದಿದೆ ಎಂದು ವರದಿಯಾಗಿದೆ. ಕಲಬುರಗಿ ನಗರದ ಬಿದ್ದಾಪುರ ಕಾಲೊನಿಯ ನಿವಾಸಿ ವಿಜಯಕುಮಾರ (45) ಎಂಬವರು ಮೃತಪಟ್ಟವರು ಎಂದು ಗರುತಿಸಲಾಗಿದೆ. ಕಲಬುರಗಿಯಿಂದ ಭಾಲ್ಕಿಯಲ್ಲಿನ ತಮ್ಮ ಸಹೋದರಿಯ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಅವರು ಮುಗಳಖೋಡ- ಬೀದರ … Continued

ಈ ಕಾರಣಗಳಿಗಾಗಿ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದೇ ಇರಬಹುದು…: ಮೂಲಗಳು

ನವದೆಹಲಿ: ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಸಾಧ್ಯತೆಯಿದೆ. ಕಳೆದ ವಾರ ಗುಲ್ಬರ್ಗ ಕ್ಷೇತ್ರಕ್ಕೆ ಚರ್ಚಿಸಲಾದ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಅವಿರೋಧ ಆಯ್ಕೆಯಾಗಿತ್ತು. ಆದರೆ ಅವರು ತಮ್ಮ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ನಾಮನಿರ್ದೇಶನ ಮಾಡುವ ಸಾಧ್ಯತೆಯಿದೆ ಎಂದು ಅವರ ನಿಕಟ ಮೂಲಗಳು … Continued

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಹಲ್ಲೆ

ಕಲಬುರಗಿ : ಬಿಜೆಪಿಯ ಮುಖಂಡ ಮಣಿಕಂಠ ರಾಠೋಡ್ ಮೇಲೆ ಶನಿವಾರ (ನವೆಂಬರ್‌18) ತಡರಾತ್ರಿ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಜಿಲ್ಲೆಯ ಶಹಾಬಾದ ತಾಲೂಕಿನ ಶಂಕರವಾಡಿ ಕ್ರಾಸ್‌ ಸಮೀಪ ಕಾಗಿಣಾ ಸೇತುವೆ ಬಳಿ ನಡೆದಿದೆ ಎಂದು ವರದಿಯಾಗಿದೆ. ಮಾಲಗತ್ತಿ ಸಮೀಪದ ತಮ್ಮ ತೋಟದ ಮನೆಯಿಂದ ರಾತ್ರಿ 1 ಗಂಟೆ ಸುಮಾರಿಗೆ ಕಲಬುರಗಿಯ ತಮ್ಮ ಮನೆಗೆ … Continued

ಚಿತ್ತಾಪುರ : ಭೀಕರ ಅಪಘಾತ, 3 ತಿಂಗಳ ಮಗು ಸೇರಿ ಒಂದೇ ಕುಟುಂಬದ 6 ಮಂದಿ ಸಾವು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ‌ ಸಿಮೆಂಟ್ ತುಂಬಿದ ಟ್ಯಾಂಕರ್ ಹಾಗೂ ಆಟೋ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ನಜ್ಮಾ ಬೇಗಂ (28), ಬಿಬಿ ಫಾತೀಮಾ (12) , ಅಬುಬಕರ್ (4) ಬೀಬಿ ಮರಿಯಮ್ಮ … Continued

ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ಸಿಗೆ ಬೆಂಕಿ: ಮಹಾರಾಷ್ಟ್ರಕ್ಕೆ ಬಸ್‌ ಸಂಚಾರ ಸ್ಥಗಿತ

ಕಲಬುರಗಿ: ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಸಂಬಂಧ ಹೋರಾಟ ನಡೆಯುತ್ತಿದ್ದು, ಕರ್ನಾಟಕದ ಕೆಕೆಆರ್‌ಟಿಸಿ ಬಸ್‌ಗೆ ಸೋಮವಾರ ಬೆಂಕಿ ಹಚ್ಚಲಾಗಿದೆ. ಅದರ ನಂತರ ಮಹಾರಾಷ್ಟ್ರಕ್ಕೆ ಹೋಗುವ ಬಸ್ ಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ತಿಳಿಸಿದ್ದಾರೆ. ಬೀದರ್‌ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಸೋಮವಾರ ಹೊರಟಿದ್ದ ಬಸ್ (ಕೆಎ-38 ಎಫ್-1201) ಅನ್ನು ಮಹಾರಾಷ್ಟ್ರದ ಉಮರ್ಗಾ … Continued

ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ ; ಸಿಐಡಿ ತನಿಖೆಗೆ ಆದೇಶ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಶಿವಕುಮಾರ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ತುಮಕೂರಿನಲ್ಲಿ ಈ ಬಗ್ಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ ಅವರು, ಬಿಜೆಪಿ ಕಾರ್ಯಕರ್ತ ಶಿವಕುಮಾರ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರು ಭಾಗಿಯಾಗಿದ್ದಾರೆ. ಯಾರೆ ಕೈವಾಡವಿದೆ ಎಂಬುದು ತನಿಖೆ ನಂತರ … Continued