ನಿಧಿ ಆಸೆಗಾಗಿ ಶಿವಲಿಂಗವನ್ನೇ ಕಿತ್ತ ದುಷ್ಕರ್ಮಿಗಳು

posted in: ರಾಜ್ಯ | 0

ಕಲಬುರುಗಿ : ನಿಧಿ ಆಸೆಗಾಗಿ ದುಷ್ಕರ್ಮಿಗಳು ದೇಗುಲದಲ್ಲಿ ಶಿವಲಿಂಗವನ್ನೇ ಕಿತ್ತು ಹಾಕಿದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಹೋಬಳಿ ವಲಯದ ನಡೆದ ವರದಿಯಾಗಿದೆ. ಕಳೆದ ರಾತ್ರಿ ಎನ್. ಸೂಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಮಲ್ಲಿಕಾರ್ಜುನ ದೇವಸ್ಥಾನದಲ್ಲಿರುವ ಶಿವಲಿಂಗದ ಅಡಿಭಾಗದಲ್ಲಿ ನಿಧಿ ಇರಬಹುದು ಎಂಬ ದುರಾಸೆಯಲ್ಲಿ ದುಷ್ಕರ್ಮಿಗಳು ಶಿವಲಿಂಗವನ್ನು ಕಿತ್ತು … Continued

ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

posted in: ರಾಜ್ಯ | 0

ಕಲಬುರಗಿ : ಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮೃತರನ್ನು ಚಿಂಚೋಳಿ ತಾಲೂಕಿನ ಸಲಗರ ಬಸಂತಪುರ ಗ್ರಾಮದ ಬಿಜೆಪಿ ಕಾರ್ಯಕರ್ತ ರಾಮು ರಾಠೋಡ (45) ಎಂದು ಗುರುತಿಸಲಾಗಿದೆ. ಅವರು ಮೇ 10ರಂದು ನಡೆದ ಚುನಾವಣೆಯಲ್ಲಿ ಬೂತ್‌ ಏಜೆಂಟ್‌ ಆಗಿ ಕಾರ್ಯ ನಿರ್ವಹಿಸಿದ್ದರು. ಬುಧವಾರ ರಾತ್ರಿ … Continued

ಮಾರಕಾಸ್ತ್ರ ಹಿಡಿದು ಜನರಿಗೆ ಹೆದರಿಸುತ್ತಿದ್ದ ವ್ಯಕ್ತಿಯ ಮೇಲೆ‌ ಪೊಲೀಸರಿಂದ ಫೈರಿಂಗ್

posted in: ರಾಜ್ಯ | 0

ಕಲಬುರಗಿ : ನಗರದ ಸೂಪರ್ ಮಾರ್ಕೆಟ್‌ನಲ್ಲಿ ಭಾನುವಾರ ರಾತ್ರಿ ಮಾರಕಾಸ್ತ್ರ ಹಿಡಿದು ಜನರಿಗೆ ಹೆದರಿಸುತ್ತಿದ್ದ ವ್ಯಕ್ತಿಯ ಮೇಲೆ‌ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ತಗುಲಿ ಗಾಯಗೊಂಡ ಅಬ್ದುಲ ಜಾಫರ್ ಸಾಬ್ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರಗಿ ನಗರದ ಸೂಪರ್ ಮಾರ್ಕೇಟ್‌ನಲ್ಲಿ ಈ ವ್ಯಕ್ತಿ ಮಾರಕಾಸ್ತ್ರಗಳನ್ನು ಹಿಡಿದು ಅನೇಕರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಸುಮಾರು ಒಂದು … Continued

ಪಿಎಸ್ಐ ನೇಮಕಾತಿ ಅಕ್ರಮ ಕಿಂಗ್‌ಪಿನ್‌ ಆರ್.ಡಿ.ಪಾಟೀಲ ಪರಾರಿ

posted in: ರಾಜ್ಯ | 0

ಕಲಬುರಗಿ: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ ಸಿಐಡಿ ಅಧಿಕಾರಿಗಳಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ತಂಡವು ನಗರದ ಅಕ್ಕಮಹಾದೇವಿ ಕಾಲೋನಿಯ ಆರೋಪಿ ರುದ್ರಗೌಡ ಪಾಟೀಲ್ ನಿವಾಸಕ್ಕೆ ಬಂದಿದ್ದು ವಿಚಾರಣೆಗೆ ಮುಂದಾದಾಗ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಗುರುವಾರ ರಾತ್ರಿ ಹಗರಣದ ಆರೋಪಿ … Continued

ಹಿಂದಿನ ಸರ್ಕಾರಗಳಿಂದ ಬಂಜಾರ ಸಮುದಾಯದ ನಿರ್ಲಕ್ಷ್ಯ, ಆದ್ರೆ ನಾವು ಅವರಿಗೆ ಈಗ ಹಕ್ಕು ಕೊಟ್ಟಿದ್ದೇವೆ: ಪ್ರಧಾನಿ ಮೋದಿ

posted in: ರಾಜ್ಯ | 0

ಕಲಬುರಗಿ: ಹಿಂದಿನ ಸರ್ಕಾರ ಬಂಜಾರ ಸಮುದಾಯವನ್ನು (Banjara Community) ನಿರ್ಲಕ್ಷ್ಯ ಮಾಡಿತ್ತು. ಆದರೆ ನಮ್ಮ ಸರ್ಕಾರ ಅವರಿಗೆ ಹಕ್ಕು ಪತ್ರ ನೀಡುವ ಮೂಲ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಡಬಲ್‌ ಎಂಜಿನ್‌ ಸರ್ಕಾರ ಜನರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಲಬುರಗಿಯ ಮಳಖೇಡದಲ್ಲಿ ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಬಳ್ಳಾರಿ, ವಿಜಯನಗರ … Continued

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಹೆಚ್ಚುವರಿ 5 ಸಾವಿರ ಕೋಟಿ ರೂ.: ಸಿಎಂ ಬೊಮ್ಮಾಯಿ ಘೋಷಣೆ

posted in: ರಾಜ್ಯ | 0

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಮುಂದಿನ ಬಜೆಟ್‌ನಲ್ಲಿ ಕೆಕೆಆರ್‌ಡಿಬಿಗೆ ನೀಡಲಿರುವ ₹ 3 ಸಾವಿರ ಕೋಟಿ ಹೊರತುಪಡಿಸಿ ಹೆಚ್ಚುವರಿಯಾಗಿ ₹ 5 ಸಾವಿರ ಕೋಟಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಸಂದರ್ಭದಲ್ಲಿ ಶನಿವಾರ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಸ್ಥಳೀಯ ಶಾಸಕ, ಕೆಕೆಆರ್‌ಡಿಬಿ ಅಧ್ಯಕ್ಷ … Continued

ಕಲಬುರಗಿ: ಮಹಿಳಾ ಪಿಎಸ್‌ಐ ‌ಮೇಲೆ ಮಚ್ಚಿನಿಂದ ಹಲ್ಲೆ, ಕೊಲೆ ಆರೋಪಿ ಮೇಲೆ ಫೈರಿಂಗ್‌

posted in: ರಾಜ್ಯ | 0

ಕಲಬುರಗಿ: ಶಹಾಬಾದ್ ನಗರಸಭೆ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ವಿಜಯಕುಮಾರ ಹಳ್ಳಿ ಎಂಬಾತನನ್ನು ಪಂಚನಾಮೆಗೆ ಕರೆದೊಯ್ದ ಸಂದರ್ಭದಲ್ಲಿ ಶಹಾಬಾದ್ ಪಿಎಸ್‌ಐ ಸುವರ್ಣಾ ಅವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದರಿಂದ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಇದಕ್ಕೆ ಪ್ರತಿಯಾಗಿ ಪೊಲೀಸರು ವಿಜಯಕುಮಾರನತ್ತ ಗುಂಡು ಹಾರಿಸಿದ್ದು, ಆತನಿಗೂ ಗಾಯಗಳಾಗಿವೆ. ಇಬ್ಬರನ್ನೂ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. … Continued

ಹಾಡಹಗಲೇ ಶಹಾಬಾದ್‌ ನಗರಸಭೆ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ ಭೀಕರ ಹತ್ಯೆ

posted in: ರಾಜ್ಯ | 0

ಕಲಬುರಗಿ: ಜಿಲ್ಲೆಯ ಶಹಾಬಾದ್ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ, ಶಹಾಬಾದ್ ನಗರಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ (42) ಎಂಬವರನ್ನು ಸೋಮವಾರ ಹಾಡಹಗಲೇ ತಲ್ವಾರ್‌ನಿಂದ ಇರಿದು ಹತ್ಯೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಕಾರಣ ತಿಳಿದು ಬಂದಿಲ್ಲ. ಚಿತ್ತಾಪುರ ತಾಲೂಕಿನ ಶಹಾಬಾದ್ ರೈಲ್ವೆ ನಿಲ್ದಾಣದ ಬಳಿ ಕುಳಿತಿದ್ದ ಗಿರೀಶ ಅವರನ್ನು ದುಷ್ಕರ್ಮಿಗಳು ತಲ್ವಾರ್‌ನಿಂದ ಹತ್ತಾರು … Continued

ಮದುವೆ ಮೆರವಣಿಗೆಯಲ್ಲಿ ಮಿನಿಲಾರಿ ಹಾಯ್ದು ನಾಲ್ವರು ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

posted in: ರಾಜ್ಯ | 0

ಕಲಬುರಗಿ: ಮದುವೆ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದವರ ಮೇಲೆ ಡಿಜೆ ಸೌಂಡ್‌ ಇದ್ದ ಮಿನಿಲಾರಿ ಹರಿದು ನಾಲ್ವರು ಸಾವಿಗೀಡಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕಡತಾಲದಲ್ಲಿ ಸಂಭವಿಸಿದೆ. ಅಲ್ಲದೆ, ಘಟನೆಯಲ್ಲಿ ಹತ್ತಕ್ಕೂ ಅಧಿಕ ಜನರು ಗಾಯಗೊಂಡಿದ್ದು, ನಾಲ್ಕು ದಿನದ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತೆಲಂಗಾಣ- ಕರ್ನಾಟಕ ಗಡಿಭಾಗ ಸೇಡಂ ತಾಲೂಕಿನ ಕಡತಾಲ … Continued

ಪಿಎಸ್​​ಐ ನೇಮಕಾತಿ ಪರೀಕ್ಷೆ ಅಕ್ರಮ: 11 ಪೊಲೀಸ್‌ ಸಿಬ್ಬಂದಿ ಅಮಾನತು

posted in: ರಾಜ್ಯ | 0

ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂ ಮತ್ತಷ್ಟು ಪೊಲೀಸರ ತಲೆದಂಡವಾಗಿದೆ.‌ ಕರ್ತವ್ಯಲೋಪ ಆರೋಪದಡಿ 11 ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಎಂ.ಎಸ್. ಇರಾನಿ ಕಾಲೇಜು ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭದ್ರತಾ ಕೆಲಸಕ್ಕಾಗಿ ಈ 11 ಮಂದಿ ಸಿಬ್ಬಂದಿ ನಿಯೋಜನೆಗೊಂಡಿದ್ದರು. ಕರ್ತವ್ಯಲೋಪ ಆರೋಪದಡಿ ಇಬ್ಬರು ಎಎಸ್ಐ ಹಾಗೂ 9 ಜನ ಕಾನ್​ಸ್ಟೇಬಲ್​​ಗಳನ್ನು ಅಮಾನತು ಮಾಡಿದ್ದು, … Continued