ಪ್ರಚೋದನಕಾರಿ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ಬಜ್ಜೆಯಲ್ಲಿ ಹತ್ಯೆಯಾದ ಸುಹಾಸ ಶೆಟ್ಟಿಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆ‌ರ್.ಎಸ್.ಎಸ್. ಪ್ರಮುಖ ಡಾ.‌ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 12ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ … Continued

ಕಲ್ಲಡ್ಕ ಪ್ರಭಾಕರ ಭಟ್‌ಗೆ ಜಾಮೀನು ಕೊಡಿಸಿದ ವಕೀಲ ಕಾಂಗ್ರೆಸ್‌ನಿಂದ ಉಚ್ಚಾಟನೆ

ಮಂಡ್ಯ: ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕ‌ರ ಭಟ್‌ ಅವರಿಗೆ ನಿರೀಕ್ಷಣಾ ಜಾಮೀನು ಕೊಡಿಸಲು ವಾದಿಸಿದ್ದ ವಕೀಲರನ್ನು ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟಿಸಲಾಗಿದೆ. ಶ್ರೀರಂಗಪಟ್ಟಣ ತಾಲೂಕು‌ ಕಾಂಗ್ರೆಸ್‌ ಕಾನೂನು ಘಟಕದ ಅಧ್ಯಕ್ಷ ಡಿ.ಚಂದ್ರೇಗೌಡ ಅವರನ್ನು ಪಕ್ಷದ ಕಾನೂನು ಘಟಕದ ಜಿಲ್ಲಾಧ್ಯಕ್ಷ ಗೌರಿಶಂಕರ ಅವರು ಪಕ್ಷದಿಂದ ವಜಾಗೊಳಿಸಿ ಆದೇಶಿಸಿದ್ದಾರೆ. ಇತ್ತೀಚೆಗಷ್ಟೇ ಅವರನ್ನು ಪಕ್ಷದ ತಾಲೂಕು ಘಟಕದ ಕಾನೂನು ಮತ್ತು ಮಾನವ … Continued

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ಕಲ್ಲಡ್ಕ ಪ್ರಭಾಕರ್‌ ಭಟ್‌ ಗೆ ಜಾಮೀನು ಮಂಜೂರು

ಮಂಡ್ಯ: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಿಸಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಅವರಿಗೆ ಶ್ರೀರಂಗಪಟ್ಟಣ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿದೆ. ಪ್ರಭಾಕರ ಭಟ್‌ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ಜನವರಿ 10ರಂದು ಕಾಯ್ದಿರಿಸಿದ್ದ ಆದೇಶವನ್ನು ಶ್ರೀರಂಗಪಟ್ಟಣದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ … Continued

ಶ್ಯಾಂಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ: ರಾಘವೇಶ್ವರ ಶ್ರೀ, ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧದ ಆರೋಪ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಶ್ಯಾಮಪ್ರಸಾದ ಶಾಸ್ತ್ರೀ ಆತ್ಮಹತ್ಯೆಗೀಡಾಗಲು ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ. ರಾಘವೇಶ್ವರ ಶ್ರೀಗಳ ವಿರುದ್ಧ ಹಲವು ಪ್ರಕರಣಗಳು ಮುನ್ನಲೆಗೆ ಬಂದ ಸಂದರ್ಭದಲ್ಲೇ … Continued

ಕೊಲ್ಲೂರು ದೇವಾಸ್ಥಾನದಲ್ಲಿ ಸಲಾಂ ಮಂಗಳಾರತಿ ಶೀಘ್ರವೇ ನಿಲ್ಲಿಸಬೇಕು: ಕಲ್ಡಡ್ಕ ಪ್ರಭಾಕರ ಭಟ್ ಆಗ್ರಹ

ಉಡುಪಿ: ಆರ್ ಎಸ್ ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ಅವರು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ಸಲಾಂ ಮಂಗಳಾರತಿ ಪದ್ಧತಿ ಕೂಡಲೇ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ. ಮಂಗಳವಾರ ಉಡುಪಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಮ್ಮ ದೇವರನ್ನು ಅವಹೇಳನ ಮಾಡಿರುವ, ಹಿಂದೂ ಸಮಾಜವನ್ನು ನಾಶ ಮಾಡಲು ಪ್ರಯತ್ನಿಸಿದ ಒಬ್ಬ ವ್ಯಕ್ತಿಯ ಹೆಸರಲ್ಲಿ ಸಲಾಂ ಮಂಗಳಾರತಿ ಮಾಡುವುದು … Continued

ಮುಂದೊಂದು ದಿನ ಕೇಸರಿ ಧ್ವಜ ರಾಷ್ಟ್ರಧ್ವಜ ಆಗಬಹುದು: ಕಲ್ಲಡ್ಕ ಪ್ರಭಾಕರ್ ಭಟ್

ಮಂಗಳೂರು: ಆರ್ ಎಸ್ ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ್​ ಭಟ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ನ ತುಷ್ಟೀಕರಣ ನೀತಿಯಿಂದ ಭಾರತದ ಧ್ವಜ ತುಂಡಾಗಿದೆ. ಒಂದಲ್ಲ ಒಂದು ದಿನ ಕೇಸರಿ ಧ್ವಜ ನಮ್ಮ ರಾಷ್ಟ್ರಧ್ವಜ ಆಗಬಹುದು ಎಂದು ಹೇಳಿದ್ದಾರೆ. ಕುತ್ತಾರಿನ ಕೊರಗಜ್ಜ ಕ್ಷೇತ್ರಕ್ಕೆ ನಮ್ಮ ನಡೆ ಸಮಾರೋಪ ಸಮಾರಂಭದಲ್ಲಿ ಮಾತಾಡಿದ ಅವರು ಕೇಸರಿ ಧ್ವಜ ರಾಷ್ಟ್ರಧ್ವಜ … Continued