ಬೆಂಗಳೂರು : ಕನ್ನಡದ ಖ್ಯಾತ ನಟನಿಂದ ಸರಣಿ ಅಪಘಾತ ; ದೂರು ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಮಯೂರ್ ಪಟೇಲ್ ಅವರು ಕುಡಿದ ಅಮಲಿನಲ್ಲಿ ಅತಿವೇಗವಾಗಿ ಕಾರು ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣರಾಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಹಲಸೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ. ಹಳೆ ವಿಮಾನ ನಿಲ್ದಾಣ ರಸ್ತೆಯ ಕಮಾಂಡೋ ಆಸ್ಪತ್ರೆ ಸಿಗ್ನಲ್ ಬಳಿ … Continued

ಕನ್ನಡ ಸಿನೆಮಾದ ಖ್ಯಾತ ಖಳನಟ ಹರೀಶ ರಾಯ್ ಇನ್ನಿಲ್ಲ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ ರಾಯ್ ಇಂದು, ಗುರುವಾರ (ನವೆಂಬರ್‌ 6) ನಿಧನರಾಗಿದ್ದಾರೆ. ಅವರಿಗೆ ಅವರಿಗೆ 55 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಅವರು ಬೆಂಗಳೂರಿನ ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಥೈರಾಯಡ್‌ ಕ್ಯಾನ್ಸರ್‌ (Thyroid Cancer) ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ‘ಓಂ’, … Continued

ಸಿನಿಮಾ ಚಿತ್ರೀಕರಣದ ವೇಳೆ ನಟ ಶ್ರೀಮುರಳಿಗೆ ಗಾಯ : ಆಸ್ಪತ್ರೆಗೆ ದಾಖಲು

ಬೆಂಗಳೂರು: ಮೈಸೂರಿನಲ್ಲಿ ‘ಬಘೀರ’ ಸಿನಿಮಾ ಚಿತ್ರೀಕರಣದ ವೇಳೆ ನಟ ಶ್ರೀಮುರಳಿ ಅವರ ಕಾಲು ಮತ್ತು ಕೈಗೆ ಪೆಟ್ಟಾಗಿದ್ದು, ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೈಸೂರಿನಲ್ಲಿ ‘ಬಘೀರ’ ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಚಿತ್ರೀಕರಣದ ವೇಳೆ ಶ್ರೀಮುರಳಿ ಅವರಿಗೆ ಗಾಯವಾಗಿದೆ. ಎರಡು ದಿನಗಳ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ. … Continued

ನಟ-ಮಾಜಿ ಐಎಎಸ್​ ಅಧಿಕಾರಿ ಕೆ. ಶಿವರಾಮಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಐಎಎಸ್ ಅಧಿಕಾರಿ ಹಾಗೂ ಕನ್ನಡದ ನಟ ಕೆ. ಶಿವರಾಮ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, 71 ವರ್ಷ ವಯಸ್ಸಿನ ಕೆ ಶಿವರಾಮ ಅವರಿಗೆ ಆರೋಗ್ಯ ಸಮಸ್ಯೆಯಾಗಿ ಕೆಲದಿನಗಳ ಹಿಂದೆ ರಕ್ತದೊತ್ತಡದಲ್ಲಿ ಏರುಪೇರು ಉಂಟಾಗಿತ್ತು … Continued