ಮೇರು ನಟ ಅನಂತ ನಾಗ್‌ಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ‘ದಾದಾ ಸಾಹೇಬ ಫಾಲ್ಕೆ’ ಪ್ರಶಸ್ತಿ ಘೋಷಣೆ

ನವದೆಹಲಿ: ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ 2024ನೇ ಸಾಲಿನ ದಾದಾಸಾಹೇಬ ಫಾಲ್ಕೆ ಪ್ರಶಸ್ತಿಗೆ ಕನ್ನಡದ ಹಿರಿಯ ನಟ ಅನಂತ ನಾಗ್ ಭಾಜನರಾಗಿದ್ದಾರೆ. ಭಾರತೀಯ ಸಿನೆಮಾಕ್ಕೆ ಅವರು ನೀಡಿದ ಅಮೋಘ ಕೊಡುಗೆಯನ್ನು ಪರಿಗಣಿಸಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಅವರಿಗೆ ಘೋಷಿಸಲಾಗಿದೆ. ಗುಜರಾತ್‌ನ ಕೆವಾಡಿಯಾದಲ್ಲಿ 2026ರ ಸೆಪ್ಟೆಂಬರ್ 22 ರಂದು ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ … Continued

ಖ್ಯಾತ ಕನ್ನಡ ನಟ ದುನಿಯಾ ವಿಜಯ – ನಾಗರತ್ನ ದಂಪತಿ ವಿಚ್ಛೇದನ : 2 ಕೋಟಿ ಜೀವನಾಂಶ ನೀಡಲು ಆದೇಶ

ಬೆಂಗಳೂರು: ಖ್ಯಾತ ಕನ್ನಡ ನಟ ದುನಿಯಾ ವಿಜಯ ಮತ್ತು ಅವರ ಪತ್ನಿ ನಾಗರತ್ನ ಅವರ ನಡುವಿನ ಸುದೀರ್ಘ ವೈವಾಹಿಕ ವಿವಾದ ಅಂತ್ಯಗೊಂಡಿದೆ. ಗುರುವಾರ ಕರ್ನಾಟಕ ಹೈಕೋರ್ಟ್ ಇಬ್ಬರಿಗೂ ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇದರ ಜೊತೆಗೆ, ಪತ್ನಿ ನಾಗರತ್ನ ಅವರಿಗೆ ಒಂದು ಬಾರಿಯ ಕಾಯಂ ಜೀವನಾಂಶವಾಗಿ (ಅಲಿಮೋನಿ) 2 ಕೋಟಿ ರೂಪಾಯಿ ಪಾವತಿಸುವಂತೆ ನಟ … Continued

ಕನ್ನಡ ಸಿನೆಮಾ-ಕಿರುತೆರೆಯ ಖ್ಯಾತ ನಟ ದಿಲೀಪ ರಾಜ ನಿಧನ

ಬೆಂಗಳೂರು : ಕನ್ನಡ ಸಿನೆಮಾ ಹಾಗೂ ಕಿರುತೆರೆಯ ಖ್ಯಾತ ನಟ, ನಿರ್ಮಾಪಕ, ಕಂಠದಾನ ಕಲಾವಿದ ದಿಲೀಪ ರಾಜ (48) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಯಕ ನಟ, ಪೋಷಕ ನಟ, ನಿರ್ಮಾಪಕ ಹೀಗೆ ವಿವಿಧ ರಂಗಗಳಲ್ಲಿ ಗುರುತಿಸಿಕೊಂಡಿದ್ದ ಅವರು ಸಿನೆಮಾ ಹಾಗೂ ಕಿರುತೆರೆ ಎರಡರಲ್ಲೂ ತೊಡಗಿಸಿಕೊಂಡಿದ್ದರು. ರಾತ್ರಿ ಮಲಗಿದ್ದ ದಿಲೀಪರಾಜ ((Dilip Raj) ಅವರಿಗೆ ಹೃದಯಾಘಾತವಾಗಿದೆ. ತಕ್ಷಣ … Continued

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ‌ ಉಮೇಶ ಇನ್ನಿಲ್ಲ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್ ಉಮೇಶ (umesh) ಇಂದು (ನ.30) ಬೆಳಿಗ್ಗೆ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.  ಇತ್ತೀಚೆಗೆ ನಟ ಉಮೇಶ  ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ (Hospital) ದಾಖಲಾಗಿದ್ದರು. ಪರೀಕ್ಷೆ ವೇಳೆ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಆದರೆ … Continued

ಕನ್ನಡ ಸಿನೆಮಾದ ಖ್ಯಾತ ಖಳನಟ ಹರೀಶ ರಾಯ್ ಇನ್ನಿಲ್ಲ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ ರಾಯ್ ಇಂದು, ಗುರುವಾರ (ನವೆಂಬರ್‌ 6) ನಿಧನರಾಗಿದ್ದಾರೆ. ಅವರಿಗೆ ಅವರಿಗೆ 55 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಅವರು ಬೆಂಗಳೂರಿನ ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಥೈರಾಯಡ್‌ ಕ್ಯಾನ್ಸರ್‌ (Thyroid Cancer) ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ‘ಓಂ’, … Continued

ಗಟ್ಟಿಮೇಳ ಖ್ಯಾತಿಯ ಹಿರಿಯ ನಟಿ ಕಮಲಶ್ರೀ ನಿಧನ

ಬೆಂಗಳೂರು : ಗಟ್ಟಿಮೇಳ ಧಾರಾವಾಹಿಯ ಮೂಲಕ ಕರ್ನಾಟಕದ ಜನರ ಮನಗೆದ್ದಿದ್ದ ಹಿರಿಯ ನಟಿ ಕಮಲಶ್ರೀ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ನಟಿ ಕಮಲಶ್ರೀ ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಅವರು ಮಂಗಳವಾರ (ಸೆಪ್ಟೆಂಬರ್‌ 30) ಮೃತಪಟ್ಟಿದ್ದಾರೆ. ಕಮಲಶ್ರೀ ಅವರು ಜನಪ್ರಿಯ ಧಾರಾವಾಹಿಯಾದ ‘ಗಟ್ಟಿಮೇಳ’ ದಲ್ಲಿ ಅಜ್ಜಿಯ … Continued

ಖ್ಯಾತ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ

ಬೆಂಗಳೂರು : ಕನ್ನಡದ ರಂಗಭೂಮಿಯ ಹಿರಿಯ ಕಲಾವಿದ ಯಶವಂತ ಸರದೇಶಪಾಂಡೆ ಅವರು ಇಂದು, ಸೋಮವಾರ (ಸೆಪ್ಟೆಂಬರ್‌ ೨೯) ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಯಶವಂತ ಸರದೇಶಪಾಂಡೆ ಅವರಿಗೆ ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಯಿತು. ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರು … Continued

ಖ್ಯಾತ ನಟರಾದ ವಿಷ್ಣುವರ್ಧನ್​​, ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರ ಕನ್ನಡದ ಖ್ಯಾತ ನಟರಾದ ವಿಷ್ಣುವರ್ಧನ್ ಹಾಗೂ ಸರೋಜಾದೇವಿಗೆ ಮರಣೋತ್ತರ ʼಕರ್ನಾಟಕ ರತ್ನʼ ಪ್ರಶಸ್ತಿ ಘೋಷಿಸಿದೆ. ಕನ್ನಡ ಚಿತ್ರರಂಗಕ್ಕೆ ಈ ಇಬ್ಬರು ಕಲಾವಿದರು ನೀಡಿದ ಅಪಾರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ. ನಟರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಇಂದು ಗುರುವಾರ (ಸೆ.೧೨) ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. … Continued

ಕನ್ನಡದ ಹಿರಿಯ ನಟ ಬ್ಯಾಂಕ್‌ ಜನಾರ್ಧನ ನಿಧನ

ಬೆಂಗಳೂರು: 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ  (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2:30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ನಿಧನರಾಗಿದ್ದಾರೆ. ಸುಲ್ತಾನ್‌ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್‌ಗೆ ಬೆಂಗಳೂರಿನ ಸತ್ರ ನ್ಯಾಯಾಲಯವು ಗುರುವಾರ ಜಾಮೀನು ನಿರಾಕರಿಸಿದೆ. ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ರನ್ಯಾ ಜಾಮೀನು ಅರ್ಜಿ ಆದೇಶವನ್ನು ಮಂಗಳವಾರ ಕಾಯ್ದಿರಿಸಿತ್ತು. ಕಾಯ್ದಿರಿಸಿದ್ದ ಜಾಮೀನು ಆದೇಶವನ್ನು ಬೆಂಗಳೂರಿನ 64ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶ ಈರಪ್ಪಣ್ಣ ಪವಡಿ … Continued