ಕನ್ನಡ ಕಲಿಕೆ ಕಡ್ಡಾಯ: ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

ಬೆಂಗಳೂರು: ರಾಜ್ಯದಲ್ಲಿರುವ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಯ(ಕುಸ್ಮಾ) ವ್ಯಾಪ್ತಿಗೆ ಬರುವ ಎಲ್ಲಾ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಈ ನಿರ್ಧಾರವನ್ನು ಪ್ರಶ್ನಿಸಿ ನಾಲ್ಕನೇ ತರಗತಿ ವಿದ್ಯಾರ್ಥಿಯೊಬ್ಬರು ಕರ್ನಾಟಕ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದಾರೆ. ಈ ಕುರಿತಂತೆ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌ ಜಾರಿ ಮಾಡಿದೆ. … Continued