ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ

ಬೆಳಗಾವಿ : ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿದ ಘಟನೆ ನಗರದ ಸದಾಶಿವನಗರದ ಚೆನ್ನಮ್ಮ ವೃತ್ತದ ಬಳಿ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ದುಷ್ಕರ್ಮಿಗಳು ಪರಾರಿಯಾಗಿದ್ದು, ಮೂವರು ಗಾಯಾಳುಗಳನ್ನು ಬಿಮ್ಸ್ ಆಸ್ಪತ್ರೆಗೆ ಮತ್ತು ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಭುವನೇಶ್ವರಿ ಮೂರ್ತಿ ಮೆರವಣಿಗೆ ಮಾಡುವಾಗ … Continued

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಈ ಬಾರಿ 68 ಸಾಧಕರು, 10 ಸಂಸ್ಥೆಗಳಿಗೆ ಪ್ರಶಸ್ತಿ; ಇಲ್ಲಿದೆ ಪಟ್ಟಿ

ಬೆಂಗಳೂರು: ವಿವಿಧ ಕ್ಷೇತ್ರಗಳ ಆಯ್ದ 68 ಸಾಧಕರು ಮತ್ತು 10 ಸಂಸ್ಥೆಗಳಿಗೆ ಈ ಸಲದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರನ್ನೂ ರಾಜ್ಯೋತ್ಸವ ಪ್ರಶಸ್ತಿಗಾಗಿ ಪರಿಗಣಿಸಿ ಗೌರವಿಸಲಾಗಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಇಸ್ರೋ ಅಧ್ಯಕ್ಷ ಎಸ್‌. ಸೋಮನಾಥನ್‌ … Continued

ಕನ್ನಡ ರಾಜ್ಯೋತ್ಸವಕ್ಕೆ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡುವ ಸಚಿವರ ಪಟ್ಟಿ ಪ್ರಕಟ: 4 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಹೊಣೆ

ಬೆಂಗಳೂರು: ನವೆಂಬರ್ 1, 2022ರಂದು ರಾಜ್ಯ ಸರ್ಕಾರದಿಂದ ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ (Flag Hosting) ಸಚಿವರ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಂತೆ ನಾಲ್ಕು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಹೊಣೆಗಾರಿಕೆ ನೀಡಲಾಗಿದೆ. ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ … Continued

ಕನ್ನಡ ರಾಜ್ಯೋತ್ಸವದಂದು ಪುನೀತ ರಾಜಕುಮಾರ​ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

ಬೆಂಗಳೂರು: ಪವರ್‌ಸ್ಟಾರ್‌ ದಿವಂಗತ ಪುನೀತ್ ರಾಜ್​ಕುಮಾರ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕೊಡಲು ತೀರ್ಮಾನಿಸಿದ್ದು, ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ವಿಧಾನಸೌಧದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತಾಗಿ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು, ಗುರುವಾರ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ … Continued

ಕನ್ನಡ ಕವಿಗಳ ಕಾವ್ಯ ಕೃತಿಗಳನ್ನು ಓದಿದರೆ ಬದುಕಿಗೆ ಹೊಸ ಅರ್ಥ

ಧಾರವಾಡ : ಕರ್ನಾಟಕ ರಾಜ್ಯೋತ್ಸವವನ್ನು ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಮತ್ತು ಜೆ.ಎಸ್.ಎಸ್. ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದ ‘ಐಕ್ಯೂಎಸಿ’ ಮತ್ತು ಕರ್ನಾಟಕ ಸಂಘದ ಸಹಯೋಗದೊಂದಿಗೆ ಜೆ.ಎಸ್.ಎಸ್. ಡಿ.ಆರ್.ಎಚ್. ಸಭಾಭವನದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟಕರಾದ ಜನತಾ ಶಿಕ್ಷಣ ಸಮಿತಿಯ ವಿತ್ತಾಧಿಕಾರಿ ಡಾ. ಅಜಿತಪ್ರಸಾದ … Continued