ಹಿರಿಯ ಸಾಹಿತಿ, ಕತೆಗಾರ ನಾ. ಡಿಸೋಜ ನಿಧನ

ಶಿವಮೊಗ್ಗ: ಹಿರಿಯ ಸಾಹಿತಿ ನಾ.ಡಿಸೋಜ (87) (Na. D’Souza) ಅವರು ಅನಾರೋಗ್ಯದಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು. ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿರುವ ಇವರು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರಾಗಿದ್ದ ನಾ.ಡಿಸೋಜಾ ಅವರು ಮಡಿಕೇರಿಯಲ್ಲಿ ನಡೆದ 80ನೇ ಕನ್ನಡ ಸಾಹಿತ್ಯ … Continued

ಖ್ಯಾತ ಸಾಹಿತಿ ಡಾ.ಕಮಲಾ ಹಂಪನಾ ನಿಧನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ, ನಾಡೋಜಾ ಡಾ. ಕಮಲ ಹಂಪನಾ ಅವರು ಶನಿವಾರ (ಜೂನ್ 22) ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಕಮಲ ಹಂಪನಾ ಅವರು ಪತಿ, ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಸಾಹಿತ್ಯಾಭಿಮಾನಿಗಳನ್ನು ಅಗಲಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿ … Continued

ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ

ಧಾರವಾಡ: ಹಿರಿಯ ಸಾಹಿತಿ ಗುರುಲಿಂಗ ಕಾಪಸೆ (96 ವರ್ಷ) ಮಂಗಳವಾರ ತಡರಾತ್ರಿ ನಗರದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದರು. ಗುರುಲಿಂಗ ಕಾಪಸೆ ಅವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 1928ರ ಎಪ್ರಿಲ್ 2ರಂದು ಜನಿಸಿದ ಗುರುಲಿಂಗ ಕಾಪಸೆ ಅವರು ಮೂಲತಃ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ … Continued

ಖ್ಯಾತ ಸಾಹಿತಿ ಕೆ.ಟಿ. ಗಟ್ಟಿ ಇನ್ನಿಲ್ಲ

ಮಂಗಳೂರು : ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ಸೋಮವಾರ ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕರ್ನಾಟಕದ ಗಡಿಭಾಗವಾದ ಕೇರಳದ ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದ ಕೆ.ಟಿ.ಗಟ್ಟಿ ಅವರು ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯಲ್ಲಿ ನೆಲೆಸಿದ್ದರು. ನಂತರ ಮಂಗಳೂರಿಗೆ ಬಂದಿದ್ದರು. ೧೭ನೇ … Continued

ಖ್ಯಾತ ಕನ್ನಡ-ತುಳು ಸಾಹಿತಿ, ಜಾನಪದ-ಯಕ್ಷಗಾನ ವಿದ್ವಾಂಸ ಪ್ರೊ. ‌ಅಮೃತ ಸೋಮೇಶ್ವರ ಇನ್ನಿಲ್ಲ

ಮಂಗಳೂರು : ಕನ್ನಡದ ಖ್ಯಾತ ಸಾಹಿತಿ, ಜಾನಪದ ವಿದ್ವಾಂಸ ಹಾಗೂ ಯಕ್ಷಗಾನ ಪ್ರಸಂಗ ಕರ್ತೃ ಪ್ರೊ.ಅಮೃತ ಸೋಮೇಶ್ವರ (89) ಅವರು ಶನಿವಾರ (ಜನವರಿ 6) ಬೆಳಿಗ್ಗೆ ನಿಧನರಾದರು. ಅವರು ವಯೋಸಹಜವಾಗಿ ಶನಿವಾರ ಬೆಳಿಗ್ಗೆ ತಮ್ಮ ಸ್ವಗೃಹ ಸೋಮೇಶ್ವರದ ‘ಒಲುಮೆ’ಯಲ್ಲಿ ನಿಧನರಾದರು. ಅಮೃತ ಸೋಮೇಶ್ವರ ಅವರಿಗೆ ಪತ್ನಿ ನರ್ಮದಾ, ಮಕ್ಕಳಾದ ಚೇತನ ಸೋಮೇಶ್ವರ, ಜೀವನ ಸೋಮೇಶ್ವರ ಇದ್ದಾರೆ. … Continued

ಕನ್ನಡದ ಖ್ಯಾತ ಲೇಖಕ ಲಕ್ಷ್ಮೀಶ ತೋಳ್ಪಾಡಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆ

ನವದೆಹಲಿ: ಕನ್ನಡದ ಖ್ಯಾತ ಲೇಖಕ ಲಕ್ಷ್ಮೀಶ ತೋಳ್ಪಾಡಿ (Lakshmisha Tolpadi) ಅವರಿಗೆ 2023ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ. ಲಕ್ಷ್ಮೀಶ ತೋಳ್ಪಾಡಿ ಅವರ ʼಮಹಾಭಾರತದ ಅನುಸಂಧಾನದ ಭಾರತಯಾತ್ರೆʼ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ. ಭಗವದ್ಗೀತೆಯ ಕುರಿತಾದ ‘ಮಹಾಯುದ್ದಕ್ಕೆ ಮುನ್ನ’ ಅವರ ಮೊದಲ ಪ್ರಕಟಿತ ಕೃತಿಯಾಗಿದೆ. ಭಾಗವತದ ಬಗ್ಗೆ ಬರೆದ ಸರಣಿ … Continued