ಕಾರು ಅಡ್ಡ ಹಾಕಿ ನಟಿ ಹರ್ಷಿಕಾ ಪೂಣಚ್ಚ ದಂಪತಿಗೆ ಕಿರುಕುಳ : “ನಾವು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದಲ್ಲಿದ್ದೇವೆಯೇ ಎಂದು ನಟಿ ಪ್ರಶ್ನೆ

ಬೆಂಗಳೂರು : ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಮತ್ತು ನಟ ಭುವನ್ ಪೊನ್ನಣ್ಣ ದಂಪತಿ ಬೆಂಗಳೂರಿನಲ್ಲಿ ತಮಗಾದ ಕರಾಳ ಅನುಭವವೊಂದನ್ನು ಬಿಚ್ಚಿಟ್ಟಿದ್ದಾರೆ. ರೆಸ್ಟೋರೆಂಟ್‌ವೊಂದಕ್ಕೆ ಊಟಕ್ಕೆ ಹೋದಾಗ, ಅಲ್ಲಿನ ಕೆಲವರು ತಮ್ಮ ಪತಿ ಭುವನ್ ಮೇಲೆ ಹಲ್ಲೆ ಮಾಡಿದ್ದಾರೆ. “ನಾವು ಕನ್ನಡದಲ್ಲಿ ಮಾತನಾಡಿದ್ದೇ ಅವರಿಗೆ ತಪ್ಪಾಗಿ ಕಾಣಿಸಿದೆ” ಎಂದು ನಟಿ ಹರ್ಷಿಕಾ ಪೂಣಚ್ಚ ಆರೋಪಿಸಿದ್ದು, ಈ ಬಗ್ಗೆ ಸುದೀರ್ಘವಾಗಿ … Continued

ವೀಡಿಯೊ…| ರಾಜ್ಯಸಭಾ ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಧಾಮೂರ್ತಿ..: ವೀಕ್ಷಿಸಿ

ನವದೆಹಲಿ: ಲೇಖಕಿ ಹಾಗೂ ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾ ಮೂರ್ತಿ ಗುರುವಾರ (ಮಾರ್ಚ್ 14) ರಾಜ್ಯಸಭೆಯ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಸಭೆ ಚೇರ್ಮನ್‌ ಜಗದೀಪ ಧನಕರ್‌ ಅವರ ಚೇಂಬರ್‌ನಲ್ಲಿ ನಡೆದ ಸಮಾರಂಭದಲ್ಲಿ ಜಗದೀಪ್‌ ಧನಕರ್‌ ಅವರು ಪ್ರಮಾಣ ವಚನ ಬೋಧಿಸಿದರು. ಸುಧಾಮೂರ್ತಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕೇಂದ್ರ ಸಚಿವ ಪೀಯೂಷ್‌ ಗೋಯಲ್‌, … Continued

ಇದೇ ಮೊದಲ ಬಾರಿಗೆ ಕನ್ನಡ ಸೇರಿ 13 ಪ್ರಾದೇಶಿಕ ಭಾಷೆಗಳಲ್ಲಿ ಸಿಎಪಿಎಫ್‌ (CAPF) ಕಾನ್‌ಸ್ಟೆಬಲ್ ಪರೀಕ್ಷೆ

ನವದೆಹಲಿ : ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಕಾನ್‌ಸ್ಟೆಬಲ್‌ಗಳ ನೇಮಕಾತಿಗಾಗಿ ಕಾನ್ಸ್‌ಟೇಬಲ್ (GD) ಪರೀಕ್ಷೆಯನ್ನು ಇದೇ ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುತ್ತದೆ. ಹಿಂದಿ ಮತ್ತು ಇಂಗ್ಲಿಷ್ ಅಲ್ಲದೆ, ಕನ್ನಡ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ … Continued

ಕಾಶಿ ಜ್ಞಾನವಾಪಿ ಮಸೀದಿಯಲ್ಲಿ ಸಿಕ್ಕಿದ ಕನ್ನಡ ಶಿಲಾಶಾಸನದ ಪೋಟೋ ಬಹಿರಂಗ

ಲಕ್ನೋ: ಉತ್ತರ ಪ್ರದೇಶದ ಕಾಶಿಯ ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ಈ ಹಿಂದೆ ದೇವಾಲಯವಿತ್ತು ಎಂದು ಭಾರತೀಯ ಪುರಾತತ್ವ ಇಲಾಖೆ ನಡೆಸಿದ ಸಮೀಕ್ಷೆಯಿಂದ ಬಹಿರಂಗಗೊಂಡ ಬೆನ್ನಲ್ಲೇ ಅಲ್ಲಿ ಕನ್ನಡದ ಶಿಲಾಶಾಸನ ಕೂಡ ಪತ್ತೆಯಾಗಿದೆ ಎಂಬ ಮಾಹಿತಿಯೂ ಬಹಿರಂಗವಾಗಿತ್ತು. ಸಮೀಕ್ಷೆ ವೇಳೆ ಕಂಡುಬಂದ ಕನ್ನಡ ಶಾಸನದ ಚಿತ್ರ ಶನಿವಾರ (ಜ 27 ) ಬಿಡುಗಡೆಯಾಗಿದೆ. ಕಾಶಿಯ ಜ್ಞಾನವಾಪಿ … Continued

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿಕೆಗೆ ಆಕ್ರೋಶ

ಬೆಳಗಾವಿ/ಬೆಂಗಳೂರು  : ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ವಿವಾದಾತ್ಮಕ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ಜನವರಿ 7ರಂದು ನಡೆದ 6ನೇ ಕನ್ನಡ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಮಾತಿನ ಭರದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು … Continued

ಸೋಲದೇವನಹಳ್ಳಿ ತೋಟದಲ್ಲಿ ನಟಿ ಲೀಲಾವತಿ ಅಂತ್ಯಕ್ರಿಯೆ

ಬೆಂಗಳೂರು : ಹಿರಿಯ ನಟಿ ಲೀಲಾವತಿ ಅವರ ಅಂತಿಮ ಸಂಸ್ಕಾರವನ್ನು ಅವರ ನೆಚ್ಚಿನ ತೋಟದಲ್ಲಿ ಶನಿವಾರ (ಡಿಸೆಂಬರ್‌ 9) ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ. ನೆಲಮಂಗಲ ಸಮೀಪದ ಸೋಲದೇವನಹಳ್ಳಿ (Soladevanahalli) ತೋಟದಲ್ಲಿ ಲೀಲಾವತಿ ಅವರ ಅಂತಿಮ ಸಂಸ್ಕಾರ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಶುಕ್ರವಾರದಿಂದ ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ದರ್ಶನಕ್ಕೆ ವ್ಯವಸ್ಥೆ … Continued

ಮನ್ ಕಿ ಬಾತ್: ಜರ್ಮನ್‌ ಯುವತಿಯ ಭಾರತೀಯ ಸಂಗೀತ-ಸಂಸ್ಕೃತಿ ಪ್ರೀತಿಗೆ ಪ್ರಧಾನಿ ಮೋದಿ ಶ್ಲಾಘನೆ ; ಆಕೆ ಹಾಡಿದ ಕನ್ನಡ ಗೀತೆ-ಸಂಸ್ಕೃತ ಶ್ಲೋಕದ ಉಲ್ಲೇಖ | ವೀಕ್ಷಿಸಿ

ಪ್ರಧಾನಿ ನರೇಂದ್ರ ಮೋದಿ ಭಾನುವಾರ ‘ಮನ್ ಕಿ ಬಾತ್‌’ನ 105ನೇ ಸಂಚಿಕೆಯಲ್ಲಿ ಭಾರತೀಯ ಸಂಗೀತ ಹಾಗೂ ಸಂಸ್ಕೃತಿ ಬಗ್ಗೆ ಅಪಾರ ಪ್ರೀತಿ ಇರುವ ವಿಶಿಷ್ಟ ವಿದೇಶಿ ಪ್ರತಿಭೆ ಬಗ್ಗೆ ಉಲ್ಲೇಖಿಸಿದ್ದಾರೆ. ಭಾರತೀಯ ಸಂಸ್ಕೃತಿ ಮತ್ತು ಸಂಗೀತವು ಜಾಗತಿಕಗೊಂಡಿವೆ. ಹೆಚ್ಚು ಹೆಚ್ಚು ಜನರು ಅದರತ್ತ ಒಲವು ತೋರುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಹಾಗೂ ಅದಕ್ಕೆ ಅವರು … Continued

ಅ.11ರಿಂದ ಕನ್ನಡ-ಹಿಂದಿಯಲ್ಲೂ ಪ್ರಸಾರವಾಗಲಿದೆ ತಿರುಪತಿ ಚಾನೆಲ್

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನ ನಿರ್ವಹಿಸುವ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್ ಇನ್ನು ಮುಂದೆ ಕನ್ನಡದಲ್ಲಿಯೂ ಪ್ರಸಾರವಾಗಲಿದೆ. ಅಕ್ಟೋಬರ್ 11ರಿಂದ ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್ ಪ್ರಸಾರವಾಗಲಿದೆ. ಬ್ರಹ್ಮೋತ್ಸವದ ಗರುಡ ಸೇವೆ ಆಚರಣೆ ವೇಳೆಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಾಹಿನಿಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮಕ್ಕೆ ಕರ್ನಾಟಕ ಮುಖ್ಯಮಂತ್ರಿ … Continued