ಕನ್ನಡ ಭಾಷೆ ಜನಿಸಿದ್ದು ತಮಿಳಿನಿಂದ : ವಿವಾದ ಸೃಷ್ಟಿಸಿದ ನಟ ಕಮಲ ಹಾಸನ್‌ ಹೇಳಿಕೆ

ತಮಿಳು ಮೆಗಾಸ್ಟಾರ್ ಕಮಲ್ ಹಾಸನ್ ತಮ್ಮ ಇತ್ತೀಚಿನ ಚಿತ್ರ ‘ಥಗ್ ಲೈಫ್’ ಬಿಡುಗಡೆಯಾಗುವ ವಾರಗಳ ಮೊದಲು ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ “ನಿಮ್ಮ ಭಾಷೆ (ಕನ್ನಡ) ತಮಿಳಿನಿಂದ ಜನಿಸಿದೆ” ಎಂಬ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ನಟ ತಮ್ಮ ಭಾಷಣವನ್ನು “ಉಯಿರೆ ಉರವೆ ತಮಿಳೆ” ಎಂಬ ವಾಕ್ಯದೊಂದಿಗೆ ಪ್ರಾರಂಭಿಸಿದರು, ಇದರರ್ಥ “ನನ್ನ ಜೀವನ ಮತ್ತು ನನ್ನ ಕುಟುಂಬ ತಮಿಳು … Continued

ಬಹುಭಾಷಾ ನಟ ಮುಕುಲ್‌ ದೇವ ನಿಧನ

ಮುಂಬೈ : ಸನ್‌ ಆಫ್‌ ಸರ್ದಾರ್‌ ಸಿನೆಮಾ ಖ್ಯಾತಿಯ ಬಹುಭಾಷಾ ನಟ ಮುಕುಲ್ ದೇವ್ (54) ನಿಧನರಾಗಿದ್ದಾರೆ. ಮುಕುಲ್‌ ಅವರ ಸಾವಿನ ಸುದ್ದಿಯನ್ನು ಅವರ ಸಹೋದರ ರಾಹುಲ್‌ ದೇವ್‌ (Rahul Dev) ಖಚಿತ ಪಡಿಸಿದ್ದಾರೆ ಹಿಂದಿ, ಪಂಜಾಬಿ ಸೇರಿದಂತೆ ವಿವಿಧ ಭಾಷೆಗಳ ಸಿನೆಮಾಗಳು ಚಲನಚಿತ್ರಗಳು ಮತ್ತು ಕಿರುತೆರೆಯಲ್ಲಿ ನಟಿಸಿದ್ದ ಅವರು, ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು … Continued

ಕನ್ನಡಿಗರ ಕ್ಷಮೆ ಕೋರಿದ ಗಾಯಕ ಸೋನು ನಿಗಮ್‌

ಬೆಂಗಳೂರು : ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ತಮ್ಮ ಸಂಗೀತ ಕಚೇರಿಯಲ್ಲಿ ಸೋನು ನಿಗಮ್ ನೀಡಿದ್ದ ಹೇಳಿಕೆಗೆ ತೀವ್ರ ಟೀಕೆಗಳು ವ್ಯಕ್ತವಾದ ನಂತರ ಅವರು ಕ್ಷಮೆಯಾಚಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಸ್ಪಷ್ಟೀಕರಣ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ, ಗಾಯಕ ನಂತರ ಕ್ಷಮೆಯಾಚಿಸಿದ್ದಾರೆ. ಕರ್ನಾಟಕದ ಮೇಲಿನ ಪ್ರೀತಿ ತನ್ನ ಅಹಂಗಿಂತ ದೊಡ್ಡದು ಎಂದು ಸೋನು ನಿಗಮ್‌ ಹೇಳಿದ್ದಾರೆ. “ಕ್ಷಮಿಸಿ ಕರ್ನಾಟಕ. ನಿಮ್ಮ … Continued

ಮಾರಕಾಸ್ತ್ರ ಹಿಡಿದು ರೀಲ್ಸ್‌ ; ಬಿಗ್‌ ಬಾಸ್‌ ಖ್ಯಾತಿಯ ಇಬ್ಬರ ಬಂಧನ

ಬೆಂಗಳೂರು : ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡದ ಸ್ಪರ್ಧಿಗಳಾಗಿದ್ದ ವಿನಯ್ ಗೌಡ ಮತ್ತು ರಜತ್ ಕಿಶನ್ ಅವರನ್ನು ಕರ್ನಾಟಕ ಪೊಲೀಸರು 1959 ರ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಬಂಧಿಸಿದ್ದಾರೆ. ಇಬ್ಬರು ಮಾರಕಾಸ್ತ್ರಗಳನ್ನು ಹಿಡಿದಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಸಲ್ಲಿಸಿದ ದೂರಿನ ನಂತರ ಬಂಧನವಾಗಿದೆ. ವಿನಯ ಗೌಡ ಉದ್ದನೆಯ ಮಚ್ಚನ್ನು ಹಿಡಿದುಕೊಂಡು … Continued

ಬೆಳಗಾವಿ | ಮರಾಠಿ ಮಾತನಾಡಲು ಬರಲ್ಲ ಎಂದಿದ್ದಕ್ಕೆ ನಿರ್ವಾಹಕನ ಮೇಲೆ ಹಲ್ಲೆ : ಮತ್ತೊಬ್ಬ ಆರೋಪಿ ಬಂಧನ

ಬೆಳಗಾವಿ : ಮರಾಠಿ ಮಾತನಾಡಲು ಬರಲ್ಲ ಎಂದು ಹೇಳಿದ್ದಕ್ಕೆ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ಬಸ್‌ ನಿರ್ವಾಹಕ ಮಹಾದೇವ ಹುಕ್ಕೇರಿ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಮಾರಿಹಾಳ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಪ್ರಾಪ್ತ ಸೇರಿದಂತೆ ನಾಲ್ವರನ್ನು ಈಗಾಗಲೇ ಬಂಧಿಸಲಾಗಿದ್ದು, ಈಗ ಬಾಳೇಕುಂದ್ರಿಯ ಮೋಹನ ಹಂಚಿನಾಳ … Continued

ಬೆಳಗಾವಿ | ಕನ್ನಡದಲ್ಲಿ ಮಾತಾಡಿ ಎಂದಿದ್ದಕ್ಕೆ ಹಲ್ಲೆಗೊಳಗಾದ ನಿರ್ವಾಹಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಬೆಳಗಾವಿ: ಮರಾಠಿ ಮಾತನಾಡದ ನಿರ್ವಾಹಕನ ಮೇಲೆ ಪುಂಡರು ಹಲ್ಲೆ ನಡೆಸಿದ ಪ್ರಕರಣದಲ್ಲಿ ಹಲ್ಲೆಗೊಳಗಾದ ನಿರ್ವಾಹಕನ ವಿರುದ್ಧವೇ ಪೋಕ್ಸೋ (POCSO) ಪ್ರಕರಣ ದಾಖಲಿಸಲಾಗಿದೆ. ಬೆಳಗಾವಿಯ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ನನಗೆ ಮರಾಠಿ ಅರ್ಥವಾಗಲ್ಲ, ಕನ್ನಡದಲ್ಲಿ ಮಾತನಾಡು ಎಂದು ಹೇಳಿದ್ದಕ್ಕೆ ನಿರ್ವಾಹಕನ ಮೇಲೆ ಶುಕ್ರವಾರ ಹಲ್ಲೆ ನಡೆಸಲಾಗಿತ್ತು, ನಿರ್ವಾಹಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿದ್ದರು. ಈಗ ನಿರ್ವಾಹಕ ಮಹಾದೇವ … Continued

ಬೆಳಗಾವಿ : ಮರಾಠಿ ಬರಲ್ಲ , ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಬಸ್‌ ಕಂಡಕ್ಟರ್‌ ಮೇಲೆ ಹಲ್ಲೆ

ಬೆಳಗಾವಿ: ತನಗೆ ಮರಾಠಿಯಲ್ಲಿ ಮಾತನಾಡಲು ಬರುವುದಿಲ್ಲ, ಕನ್ನಡದಲ್ಲಿ ಹೇಳಿ ಎಂದಿದ್ದಕ್ಕೆ ಜನರನ್ನು ಕರೆಸಿ ರಾಜ್ಯ ಸಾರಿಗೆ ಸಂಸ್ಥೆ ಕಂಡಕ್ಟ‌ರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ತಾಲೂಕಿನ ಬಾಳೆಕುಂದ್ರಿ ಕೆ.ಎಚ್‌.ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಳಗಾವಿಯ ಮಾರಿಹಾಳ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸರ್ಕಾರಿ ಬಸ್ ಕಂಡಕ್ಟರ್ ಮಹದೇವ ಹಲ್ಲೆಗೊಳಗಾದವರು. ಇವರಿಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ … Continued

ಕನ್ನಡವೂ ಸೇರಿ ಬಹುಭಾಷೆಗಳ ಖ್ಯಾತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಇನ್ನಿಲ್ಲ

ತಿರುವನಂತಪುರಂ : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಅವರು ಗುರುವಾರ ನಿಧನರಾಗಿದ್ದಾರೆ. ಕ್ಯಾನ್ಸರಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ತ್ರಿಶೂರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.. ಮಲಯಾಳಂ ಅಷ್ಟೇ ಅಲ್ಲ, ಜಯಚಂದ್ರನ್ ಅವರು, ಕನ್ನಡ, ತಮಿಳು, ತೆಲುಗು ಹಿಂದಿಯಲ್ಲೂ ಅನೇಕ ಗೀತೆಗಳನ್ನು ಹಾಡಿ ಅಳಿಸಲಾಗದ ಛಾಪು ಮೂಡಿಸಿದ್ದರು. 16000 ಕ್ಕೂ … Continued

ಕನ್ನಡ ಸಾಹಿತಿ-ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆ

ನವದೆಹಲಿ : 2024ರ ಕೇಂದ್ರ ಸಾಹಿತ್ಯ ಅಕಾಡೆಮಿಯ ಈ ಸಾಲಿನ ಪ್ರಶಸ್ತಿ(Sahitya Akademi Award 2024)ಯನ್ನು ಪ್ರಕಟಿಸಲಾಗಿದ್ದು, ಕನ್ನಡದ ವಿದ್ವಾಂಸ, ಭಾಷಾ ವಿಜ್ಞಾನಿ ಮತ್ತು ವಿಮರ್ಶಕ ಮೈಸೂರಿನ ಪ್ರೊ. ಕೆ.ವಿ.ನಾರಾಯಣ (K.V.Narayana) ಅವರ ʼನುಡಿಗಳ ಅಳಿವುʼ ವಿಮರ್ಶೆ ಕೃತಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ದೇಶದ 21 ಭಾಷೆಗಳ ಲೇಖಕರಿಗೆ ಪ್ರಶಸ್ತಿ ಪ್ರಕಟಿಸಲಾಗಿದ್ದು, ವಿಮರ್ಶೆ ವಿಭಾಗದಲ್ಲಿ ಪ್ರೊ.ಕೆ.ವಿ.ನಾರಾಯಣ … Continued

ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು : ಕನ್ನಡ ಆಡಳಿತ ಭಾಷೆಯಷ್ಟೇ ಅಲ್ಲ, ನ್ಯಾಯದಾನದ ಭಾಷೆಯೂ ಆಗಬೇಕು ಎಂಬುದಕ್ಕೆ ಸ್ಪಂದಿಸಿರುವ ಕರ್ನಾಟಕ ಹೈಕೋರ್ಟ್‌ ಗುರುವಾರ ಪ್ರಕರಣವೊಂದಕ್ಕೆ ಸಂಬಂಧಿಸಿ ಕನ್ನಡದಲ್ಲಿಯೇ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಕೃಷ್ಣ ಎಸ್.‌ ದೀಕ್ಷಿತ್‌ ಮತ್ತು ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠವು ಕನ್ನಡದಲ್ಲೇ ತೀರ್ಪು ನೀಡಿದೆ. ತುಮಕೂರಿನ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯಲ್ಲಿರುವ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ … Continued