ಕರಾಳ ದಿನಕ್ಕೆ ಕರೆ: ಎಂಇಎಸ್‌ಗೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಬೆಳಗಾವಿಯಲ್ಲಿ ನವೆಂಬರ್‌ 1ರಂದು ಕನ್ನಡ ರಾಜ್ಯೋತ್ಸವ ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ನಡೆಸಲು ಉದ್ದೇಶಿಸಿರುವ ಕಾನೂನುಬಾಹಿರ ಕರಾಳ ದಿನ ಪ್ರತಿಭಟನೆಗೆ ಮಧ್ಯಂತರ ಪ್ರತಿಬಂಧಕಾದೇಶ ನೀಡುವಂತೆ ಕೋರಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಮತ್ತು ಎಂಇಎಸ್‌ಗೆ ಕರ್ನಾಟಕ ಹೈಕೋರ್ಟ್‌ ಬುಧವಾರ ನೋಟಿಸ್‌ ಜಾರಿ ಮಾಡಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಮಲ್ಲಪ್ಪ ಚಾಯಪ್ಪ ಅಕ್ಷರದ … Continued

ವೀಡಿಯೊ..| ಅರಳು ಹುರಿದಂತೆ ಪಟಪಟನೆ ಕನ್ನಡದಲ್ಲಿ ಮಾತನಾಡುವ ಜರ್ಮನಿ ಯುವತಿ…!

ಜರ್ಮನ್ ಮಹಿಳೆಯೊಬ್ಬರು ಕನ್ನಡ ಮಾತನಾಡುವ ವೀಡಿಯೊ ಎಕ್ಸ್‌ನಲ್ಲಿ ವೈರಲ್ ಆಗಿದೆ. “ಬೆಂಗಳೂರು ಕನ್ನಡಿಗರಿಗೆ ಸೇರಿದ್ದು” ಎಂಬ ಚರ್ಚೆಯ ನಡುವೆ ಈ ವೀಡಿಯೊ ಹೊರಹೊಮ್ಮಿದೆ. ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರಿನಲ್ಲಿ ಉಳಿಯುವ ಯಾರಾದರೂ ಸ್ಥಳೀಯ ಭಾಷೆಯನ್ನು ತಿಳಿದುಕೊಳ್ಳಬೇಕು ಎಂದು ಕೆಲವರು ಹೇಳುತ್ತಾರೆ. ಈ ಚರ್ಚೆಯ ಮಧ್ಯೆ, ಜರ್ಮನ್ ಪ್ರಜೆ ಮತ್ತು ಭಾಷಾ ಉತ್ಸಾಹಿ ಜೆನ್ನಿಫರ್ ಅವರ ಯೂ … Continued

ಕನ್ನಡಿಗರ ಕ್ಷಮೆ ಕೋರಿದ ಫೋನ್‌ ಪೇ ಸಿಇಒ ಸಮೀರ್ ನಿಗಮ್

ಬೆಂಗಳೂರು : ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ ನೀತಿಯನ್ನು ಖಂಡಿಸಿದ್ದ ಫೋನ್‌ಪೇ ಸಿಇಒ ಮತ್ತು ಸಂಸ್ಥಾಪಕ ಸಮೀರ್ ನಿಗಮ್‌ ಈ ಸಂಬಂಧ ಭಾನುವಾರ ಬೇಷರತ್‌ ಆಗಿ ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಕಂಪನಿಗಳ ‘ಸಿ’ ಮತ್ತು ‘ಡಿ’ ದರ್ಜೆಯ ಹುದ್ದೆಗಳಿಗೆ ಕನ್ನಡಿಗರನ್ನು ನೇಮಿಸಿಕೊಳ್ಳುವ ಸಂಬಂಧ ಸರ್ಕಾರವು ಮಸೂದೆ ಮಂಡಿಸಲು ನಿರ್ಧರಿಸಿತ್ತು. ಇದಕ್ಕೆ … Continued

ಕಾರು ಅಡ್ಡ ಹಾಕಿ ನಟಿ ಹರ್ಷಿಕಾ ಪೂಣಚ್ಚ ದಂಪತಿಗೆ ಕಿರುಕುಳ : “ನಾವು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದಲ್ಲಿದ್ದೇವೆಯೇ ಎಂದು ನಟಿ ಪ್ರಶ್ನೆ

ಬೆಂಗಳೂರು : ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಮತ್ತು ನಟ ಭುವನ್ ಪೊನ್ನಣ್ಣ ದಂಪತಿ ಬೆಂಗಳೂರಿನಲ್ಲಿ ತಮಗಾದ ಕರಾಳ ಅನುಭವವೊಂದನ್ನು ಬಿಚ್ಚಿಟ್ಟಿದ್ದಾರೆ. ರೆಸ್ಟೋರೆಂಟ್‌ವೊಂದಕ್ಕೆ ಊಟಕ್ಕೆ ಹೋದಾಗ, ಅಲ್ಲಿನ ಕೆಲವರು ತಮ್ಮ ಪತಿ ಭುವನ್ ಮೇಲೆ ಹಲ್ಲೆ ಮಾಡಿದ್ದಾರೆ. “ನಾವು ಕನ್ನಡದಲ್ಲಿ ಮಾತನಾಡಿದ್ದೇ ಅವರಿಗೆ ತಪ್ಪಾಗಿ ಕಾಣಿಸಿದೆ” ಎಂದು ನಟಿ ಹರ್ಷಿಕಾ ಪೂಣಚ್ಚ ಆರೋಪಿಸಿದ್ದು, ಈ ಬಗ್ಗೆ ಸುದೀರ್ಘವಾಗಿ … Continued

ವೀಡಿಯೊ…| ರಾಜ್ಯಸಭಾ ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಧಾಮೂರ್ತಿ..: ವೀಕ್ಷಿಸಿ

ನವದೆಹಲಿ: ಲೇಖಕಿ ಹಾಗೂ ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾ ಮೂರ್ತಿ ಗುರುವಾರ (ಮಾರ್ಚ್ 14) ರಾಜ್ಯಸಭೆಯ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಸಭೆ ಚೇರ್ಮನ್‌ ಜಗದೀಪ ಧನಕರ್‌ ಅವರ ಚೇಂಬರ್‌ನಲ್ಲಿ ನಡೆದ ಸಮಾರಂಭದಲ್ಲಿ ಜಗದೀಪ್‌ ಧನಕರ್‌ ಅವರು ಪ್ರಮಾಣ ವಚನ ಬೋಧಿಸಿದರು. ಸುಧಾಮೂರ್ತಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕೇಂದ್ರ ಸಚಿವ ಪೀಯೂಷ್‌ ಗೋಯಲ್‌, … Continued

ಇದೇ ಮೊದಲ ಬಾರಿಗೆ ಕನ್ನಡ ಸೇರಿ 13 ಪ್ರಾದೇಶಿಕ ಭಾಷೆಗಳಲ್ಲಿ ಸಿಎಪಿಎಫ್‌ (CAPF) ಕಾನ್‌ಸ್ಟೆಬಲ್ ಪರೀಕ್ಷೆ

ನವದೆಹಲಿ : ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಕಾನ್‌ಸ್ಟೆಬಲ್‌ಗಳ ನೇಮಕಾತಿಗಾಗಿ ಕಾನ್ಸ್‌ಟೇಬಲ್ (GD) ಪರೀಕ್ಷೆಯನ್ನು ಇದೇ ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುತ್ತದೆ. ಹಿಂದಿ ಮತ್ತು ಇಂಗ್ಲಿಷ್ ಅಲ್ಲದೆ, ಕನ್ನಡ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ … Continued

ಕಾಶಿ ಜ್ಞಾನವಾಪಿ ಮಸೀದಿಯಲ್ಲಿ ಸಿಕ್ಕಿದ ಕನ್ನಡ ಶಿಲಾಶಾಸನದ ಪೋಟೋ ಬಹಿರಂಗ

ಲಕ್ನೋ: ಉತ್ತರ ಪ್ರದೇಶದ ಕಾಶಿಯ ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ಈ ಹಿಂದೆ ದೇವಾಲಯವಿತ್ತು ಎಂದು ಭಾರತೀಯ ಪುರಾತತ್ವ ಇಲಾಖೆ ನಡೆಸಿದ ಸಮೀಕ್ಷೆಯಿಂದ ಬಹಿರಂಗಗೊಂಡ ಬೆನ್ನಲ್ಲೇ ಅಲ್ಲಿ ಕನ್ನಡದ ಶಿಲಾಶಾಸನ ಕೂಡ ಪತ್ತೆಯಾಗಿದೆ ಎಂಬ ಮಾಹಿತಿಯೂ ಬಹಿರಂಗವಾಗಿತ್ತು. ಸಮೀಕ್ಷೆ ವೇಳೆ ಕಂಡುಬಂದ ಕನ್ನಡ ಶಾಸನದ ಚಿತ್ರ ಶನಿವಾರ (ಜ 27 ) ಬಿಡುಗಡೆಯಾಗಿದೆ. ಕಾಶಿಯ ಜ್ಞಾನವಾಪಿ … Continued

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿಕೆಗೆ ಆಕ್ರೋಶ

ಬೆಳಗಾವಿ/ಬೆಂಗಳೂರು  : ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ವಿವಾದಾತ್ಮಕ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ಜನವರಿ 7ರಂದು ನಡೆದ 6ನೇ ಕನ್ನಡ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಮಾತಿನ ಭರದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು … Continued

ಸೋಲದೇವನಹಳ್ಳಿ ತೋಟದಲ್ಲಿ ನಟಿ ಲೀಲಾವತಿ ಅಂತ್ಯಕ್ರಿಯೆ

ಬೆಂಗಳೂರು : ಹಿರಿಯ ನಟಿ ಲೀಲಾವತಿ ಅವರ ಅಂತಿಮ ಸಂಸ್ಕಾರವನ್ನು ಅವರ ನೆಚ್ಚಿನ ತೋಟದಲ್ಲಿ ಶನಿವಾರ (ಡಿಸೆಂಬರ್‌ 9) ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ. ನೆಲಮಂಗಲ ಸಮೀಪದ ಸೋಲದೇವನಹಳ್ಳಿ (Soladevanahalli) ತೋಟದಲ್ಲಿ ಲೀಲಾವತಿ ಅವರ ಅಂತಿಮ ಸಂಸ್ಕಾರ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಶುಕ್ರವಾರದಿಂದ ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ದರ್ಶನಕ್ಕೆ ವ್ಯವಸ್ಥೆ … Continued

ಮನ್ ಕಿ ಬಾತ್: ಜರ್ಮನ್‌ ಯುವತಿಯ ಭಾರತೀಯ ಸಂಗೀತ-ಸಂಸ್ಕೃತಿ ಪ್ರೀತಿಗೆ ಪ್ರಧಾನಿ ಮೋದಿ ಶ್ಲಾಘನೆ ; ಆಕೆ ಹಾಡಿದ ಕನ್ನಡ ಗೀತೆ-ಸಂಸ್ಕೃತ ಶ್ಲೋಕದ ಉಲ್ಲೇಖ | ವೀಕ್ಷಿಸಿ

ಪ್ರಧಾನಿ ನರೇಂದ್ರ ಮೋದಿ ಭಾನುವಾರ ‘ಮನ್ ಕಿ ಬಾತ್‌’ನ 105ನೇ ಸಂಚಿಕೆಯಲ್ಲಿ ಭಾರತೀಯ ಸಂಗೀತ ಹಾಗೂ ಸಂಸ್ಕೃತಿ ಬಗ್ಗೆ ಅಪಾರ ಪ್ರೀತಿ ಇರುವ ವಿಶಿಷ್ಟ ವಿದೇಶಿ ಪ್ರತಿಭೆ ಬಗ್ಗೆ ಉಲ್ಲೇಖಿಸಿದ್ದಾರೆ. ಭಾರತೀಯ ಸಂಸ್ಕೃತಿ ಮತ್ತು ಸಂಗೀತವು ಜಾಗತಿಕಗೊಂಡಿವೆ. ಹೆಚ್ಚು ಹೆಚ್ಚು ಜನರು ಅದರತ್ತ ಒಲವು ತೋರುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಹಾಗೂ ಅದಕ್ಕೆ ಅವರು … Continued