ಉದ್ಯಮಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ಉಡುಪಿ : ಉದ್ಯಮಿ ಹಾಗೂ ಕಾಂಗ್ರೆಸ್‌ ನಾಯಕ ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ಮುಂಬೈನ ಅನುಜ ಪಾಟೀಲ(35) ಪೊಲೀಸರು ಬಂಧಿಸಿದ್ದು, ಈ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಪೊಲೀಸರು ಅನುಜ ಪಾಟೀಲ್‌ನನ್ನು ಬಂಧಿಸಿ ಹೆಬ್ರಿಗೆ ಕರೆದೊಯ್ಯುತ್ತಿದ್ದ … Continued

ಕಾಂಗ್ರೆಸ್‌ ಮುಖಂಡ-ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಪರಾರಿಯಾಗುತ್ತಿದ್ದ ಮೂವರು ಆರೋಪಿಗಳ ಬಂಧನ

ಉಡುಪಿ : ಜಿಲ್ಲೆಯ ಉದ್ಯಮಿ ಹಾಗೂ ಕಾಂಗ್ರೆಸ್‌ ಮುಖಂಡ ಮುದರಂಗಡಿಯ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ.  ಉತ್ತರ ಪ್ರದೇಶದ ಥಾಣಾ ಪಿಲ್ವಾ ನಿವಾಸಿ ರಾಜು (42) ಎಂಬಾತನನ್ನು ಬೈಂದೂರು ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂತರ ಮತ್ತೊಬ್ಬ ಆರೋಪಿ ಉತ್ತರಾಖಂಡ ಮೂಲದ ಅಜಯ … Continued

ವೀಡಿಯೊ…| ಉಡುಪಿ : ಕಾಪು ಮಾರಿಗುಡಿ ದೇವಸ್ಥಾನಕ್ಕೆ ಬಾಲಿವುಡ್‌ ನಟಿ-ಸಂಸದೆ ಕಂಗನಾ ರಣಾವತ್‌ ಭೇಟಿ ; ಬ್ರಹ್ಮಕಲಶೋತ್ಸವದಲ್ಲಿ ಭಾಗಿ

ಉಡುಪಿ: ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಕಾಪು ಮಾರಿಯಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಕಾಪು ಕ್ಷೇತ್ರದಲ್ಲಿ ಬಹುಕೋಟಿ ವೆಚ್ಚದಲ್ಲಿ ಮರು ನಿರ್ಮಾಣಗೊಂಡಿರುವ ಮಾರಿಯಮ್ಮನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಭೇಟಿ ನೀಡಿ ದರ್ಶನ ಪಡೆದ ನಂತರ ಸಾರ್ವಜನಿಕ ಸಭೆಯಲ್ಲಿ ಕಂಗನಾ ಭಾಗವಹಿಸಿದರು. ಈ ವೇಳೆ ಮಾತನಾಡಿದ ಅವರು ದೇವಸ್ಥಾನಗಳು … Continued

ಹುಡುಗಿಯ ಜೊತೆ ಆಟವಾಡಿದ್ದಕ್ಕೆ ನಾಯಿಯನ್ನೇ ಕೊಂದು ಹಾಕಿದ…!

ಊಡುಪಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮೂಕ ಪ್ರಾಣಿ ನಾಯಿಯನ್ನು ಕೊಂದಿರುವ ಘಟನೆ ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿರುವ ಕಾಲೇಜು ವಠಾರದಲ್ಲಿ ನಾಯಿಯೊಂದು ಹುಡುಗಿಯ ಜೊತೆ ಆಟವಾಡಿದ್ದಕ್ಕೆ ಕಾಲೇಜು ವಾರ್ಡನ್ ನಾಯಿಯನ್ನೇ ಕೊಂದಿದ್ದು, ಈ ಅಮಾನವೀಯ ಘಟನೆ ಕಾಪು ತಾಲೂಕಿನ ಬಂಟಕಲ್​ನ ಕಾಲೇಜಿನಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಹುಡುಗಿ ಜೊತೆ ಆಟ ಆಡಿದ ಕಾರಣಕ್ಕೆ … Continued

ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟಕ್ಕೆ ಇಬ್ಬರು ಸಜೀವ ದಹನ, ಮೂವರಿಗೆ ಗಾಯ

ಉಡುಪಿ: ಕಾಪು ಸಮೀಪದ ಮಲ್ಲಾರುವಿನ ಫಕೀರನ ಕಟ್ಟೆಯಲ್ಲಿದ್ದ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡು, ಮೂವರು ಗಾಯಗೊಂಡ ಘಟನೆ ಸೋಮವಾರ (ಮಾರ್ಚ್‌ ೨೧) ನಡೆದಿದೆ. ಮೃತರನ್ನು ರಜಾಕ್ ಹಾಗೂ ಅಂಗಡಿಯ ಪಾಲುದಾರರಾದ ರಜಬ್ ಎಂದು ಹೇಳಲಾಗಿದೆ. ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅದರಲ್ಲಿ ಒಬ್ಬರು ಗ್ರಾಪಂ ಸದಸ್ಯರೂ ಇದ್ದಾರೆ ಎಂದು … Continued

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶಕ್ಕೆ ನಿರಾಕರಣೆ: 9 ಮಂದಿ ಮನೆಗೆ ವಾಪಸ್

ಉಡುಪಿ: ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 11 ಮಂದಿ ವಿದ್ಯಾರ್ಥಿನಿಯರಿಗೆ ಕಾಲೇಜು ಪರೀಕ್ಷೆಗೆ ಪ್ರವೇಶಿಸಲು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಒಂಬತ್ತು ವಿದ್ಯಾರ್ಥಿನಿಯರು ಮನೆಗೆ ಹಿಂತಿರುಗಿದ್ದಾರೆ ಎಂದು ವರದಿಯಾಗಿದೆ. ಇಬ್ಬರು ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿರಿಸಿ ತರಗತಿಗೆ ತೆರಳಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದ … Continued