ನಾವು ರಾಮ ಮಂದಿರದ ಪರವಾಗಿದ್ದೇವೆ, ನಾನೂ ರಾಮ ಭಜನೆಗೆ ಹೋಗ್ತಿದ್ದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಅಯೋಧ್ಯೆ ರಾಮ ಮಂದಿರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆ ವಿಚಾರವನ್ನು ಬಿಜೆಪಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಕೆಲ ವಿಪಕ್ಷದ ನಾಯಕರು ಆರೋಪಿಸಿರುವ ಬೆನ್ನಲ್ಲೇ ಅಯೋಧ್ಯೆ ರಾಮ ಮಂದಿರದ ನಿರ್ಮಾಣ ಹಾಗೂ ಉದ್ಘಾಟನೆಗೆ ನಮ್ಮ ಯಾವುದೇ ವಿರೋಧವಿಲ್ಲ, ನಾವು ರಾಮಮಂದಿರದ ಪರವಾಗಿದ್ದೇವೆ ಎಂದು ಹೇಳಿದ್ದಾರೆ. … Continued