ವರಸೆ ಬದಲಿಸಿತೇ ಕಾಂಗ್ರೆಸ್‌…? : ಐದು ಚುನಾವಣಾ ಗ್ಯಾರಂಟಿಗಳ ಜಾರಿಗೆ ಷರತ್ತುಗಳು ಇರುತ್ತವೆ ಎಂದ ಡಾ.ಜಿ ಪರಮೇಶ್ವರ…!

ಬೆಂಗಳೂರು:ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಕಾರಣಗಳಾಗಿದ್ದ ಐದು ಗ್ಯಾರಂಟಿ ಘೋಷಣೆಗಳು ದೊಡ್ಡ ಸದ್ದು ಮಾಡಿತ್ತು. ಆದರೆ ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತಿದ್ದಂತೆ ಗ್ಯಾರಂಟಿಗಳ ಜಾರಿಗೆ ಕೆಲವೊಂದು ಷರತ್ತುಗಳು ಅನ್ವಯವಾಗಲಿದೆ ಎಂದು ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿದ್ದ ಡಾ. ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ  ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೊದಲ ಕ್ಯಾಬಿನೆಟ್ … Continued

ಕರ್ನಾಟಕ ವಿಧಾನಸಭೆ ಚುನಾವಣೆ: ಹೆಣ್ಣು ಸಿಗದ ಯುವಕರಿಗೆ ಪ್ರಣಾಳಿಕೆಯಲ್ಲಿ ಮದುವೆ ಭಾಗ್ಯ ಗ್ಯಾರಂಟಿ ಯೋಜನೆ ಘೋಷಿಸಿದ ಈ ಕ್ಷೇತ್ರಗಳ ಅಭ್ಯರ್ಥಿಗಳು…!

ಬೆಳಗಾವಿ : ಜಾರಕಿಹೊಳಿ ಸಹೋದರರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಕಣಕ್ಕಿಳಿದಿರುವ ಗೋಕಾಕ ಹಾಗೂ ಅರಬಾವಿ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸಹೋದರರಿಬ್ಬರು (ಕುಳ್ಳೂರ) ಕಣಕ್ಕಿಳಿದಿದ್ದಾರೆ. ಈಗ ಅವರ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆ ವಿಶೇಷವಾಗಿ ಎಲ್ಲೆಡೆ ಸುದ್ದಿಯಾಗುತ್ತಿದೆ. ಹೆಣ್ಣು ಸಿಗದ ಯುವಕರಿಗೆ ಮದುವೆ ಮಾಡಿಸುವುದಾಗಿ ಅವರು ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದ್ದಾರೆ. ಗೋಕಾಕ ಹಾಗೂ ಅರಬಾವಿ ಮತಕ್ಷೇತ್ರದಲ್ಲಿ ವಿಧಾನಸಭಾ … Continued

ಕರ್ನಾಟಕ ಚುನಾವಣೆ: ಮೇ 6ರಂದು ಬೆಂಗಳೂರಲ್ಲಿ 36 ಕಿಮೀ ರೋಡ್‌ ಶೋ ನಡೆಸಲಿರುವ ಪ್ರಧಾನಿ ಮೋದಿ

ಬೆಂಗಳೂರು: ಕರ್ನಾಟಕದ 2023 ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೇ 6ರಂದು ಬೆಂಗಳೂರಿನಲ್ಲಿ ಮೋದಿ ಬೃಹತ್ ರೋಡ್‌ ಶೋ ನಡೆಸಲಿದ್ದಾರೆ. ಮೇ 6ರಂದು ‘ನಮ್ಮ ಕರ್ನಾಟಕ ಯಾತ್ರೆ’ ಹೆಸರಿನಡಿ ಮೋದಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಪಿ.ಸಿ.ಮೋಹನ ಅವರು, ಮೇ 6ರಂದು ಪ್ರಧಾನಿಯವರು ರಾಜಧಾನಿಯ 17 ಕ್ಷೇತ್ರಗಳಲ್ಲಿ … Continued

ಕನಕಪುರದಲ್ಲಿ ಕೊನೆ ಕ್ಷಣದ ಅಚ್ಚರಿ : ಡಿಕೆಶಿ ಸ್ಪರ್ಧಿಸಿರುವ ಕ್ಷೇತ್ರದಲ್ಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಹೋದರನಿಂದ ನಾಮಪತ್ರ ಸಲ್ಲಿಕೆ…!

ರಾಮನಗರ: ರಾಜ್ಯ ವಿಧಾನಸಭೆ ಚುನಾವಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರು ಸ್ಪರ್ಧಿಸಿರುವ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಂದು ಟ್ವಿಸ್ಟ್‌ ಕಂಡುಬಂದಿದೆ. ಡಿ.ಕೆ ಶಿವಕುಮಾರ ಅವರನ್ನು ಕಟ್ಟಿ ಹಾಕಲು ಬಿಜೆಪಿ ರಣತಂತ್ರ ರೂಪಿಸಿ ಸಚಿವ ಆರ್.ಅಶೋಕ ಅವರನ್ನು ಕಣಕ್ಕಿಳಿಸಿದ್ದು ಒಂದೆಡೆಯಾದರೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಇಂದು ಗುರುವಾರ ಮತ್ತೊಂದು ಅಚ್ಚರಿಯ ಬೆಳವಣಿಗೆಯಾಗಿದೆ. ಈಗ ಕನಕಪುರದಲ್ಲಿ … Continued

ಇಂದಿನಿಂದ ನಟ ಕಿಚ್ಚ ಸುದೀಪ ಪ್ರಚಾರ ಶುರು: ಇಂದು ಸಿಎಂ ಬೊಮ್ಮಾಯಿ ಪರ ಶಿಗ್ಗಾಂವಿಯಲ್ಲಿ ಪ್ರಚಾರ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಇಂದು ಪ್ರಚಾರ ಮಾಡಲಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿಯವರು ಇಂದು (ಏ.19) ಶಿಗ್ಗಾಂವಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಮುನ್ನ ಬೆಳಿಗ್ಗೆ 10 ಗಂಟೆಗೆ ನಡೆಯುವ ರೋಡ್​ ಶೋನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ನಟ … Continued

ಕಾರು ಅಪಘಾತ: ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರಗೆ ಗಾಯ

ಕಲಬುರಗಿ: ಯಾದಗಿರಿ ಜಿಲ್ಲೆ ಗುರುಮಠಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರ ಅವರ ಕಾರು ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರದ ಬಳಿ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ. ಕಾರಿನಲ್ಲಿದ್ದ ಚಿಂಚನಸೂರ ಅವರಿಗೆ ಗಾಯಗಳಾಗಿವೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ನಗರದ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಡರಾತ್ರಿ ಎರಡು ಗಂಟೆ ಸುಮಾರಿಗೆ ಬಾಬಾರಾವ್‌ ಚಿಂಚನಸೂರ ಅವರನ್ನು ಯುನೈಟೆಡ್‌ ಆಸ್ಪತ್ರೆಗೆ … Continued

ಕರ್ನಾಟಕ ವಿಧಾನಸಭೆ ಚುನಾವಣೆ 2023: ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿಯ ರಣತಂತ್ರಗಳೇನು…?

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ತಾನು ಅಧಿಕಾರದಲ್ಲಿರುವ ದಕ್ಷಿಣ ಭಾರತದ ಏಕೈಕ ರಾಜ್ಯವನ್ನು ಉಳಿಸಿಕೊಳ್ಳಲು ಬಿಜೆಪಿ ಸರ್ವ ಪ್ರಯತ್ನವನ್ನೂ ಮಾಡುತ್ತಿದೆ. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಏಪ್ರಿಲ್ ಮೊದಲ ವಾರದಲ್ಲಿ ಚುನಾವಣಾ ಕಾರ್ಯತಂತ್ರವನ್ನು ರೂಪಿಸಲು ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ ಎಂದು ವರದಿಯಾಗಿದೆ. ಈ ವಾರದ … Continued

ಕರ್ನಾಟಕ ವಿಧಾನಸಭಾ ಚುನಾವಣೆ 2023 : ನಟ ಉಪೇಂದ್ರರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಚಿಹ್ನೆ ನೀಡಿದ ಚುನಾವಣಾ ಆಯೋಗ

ಬೆಂಗಳೂರು : ರಾಜ್ಯವಿಧಾನಸಭಾ ಚುನಾವಣೆಗೆ ಸಮೀಪಿಸುತ್ತಿದ್ದು, ರಾಜಕೀಯ ಪಕ್ಷಗಳು ಚುನಾವಣಾ ತಯಾರಿ ಆರಂಭಿಸಿವೆ. ಏನ್ಮಧ್ಯೆ ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಆಟೋ ರಿಕ್ಷಾ ಚಿಹ್ನೆ ನೀಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ಕುರಿತು ನಟ ಉಪೇಂದ್ರ ಅವರು ಟ್ವೀಟ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಚುನಾವಣಾ ಆಯೋಗದ ಆದೇಶವನ್ನು ಸಹ … Continued

ಯಾರೇ ಆದರೂ ಈ ಬಾರಿ ಒಬ್ಬರಿಗೆ ಒಂದೇ ಟಿಕೆಟ್ : ಡಿ.ಕೆ. ಶಿವಕುಮಾರ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾರೇ ಆಗಲಿ ಅವರಿಗೆ ಒಂದೇ ಟಿಕೆಟ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಇದರಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಾರಿಯಂತೆ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಕ್ಕೆ ತೆರೆ ಬಿದ್ದಂತಾಗಿದೆ. ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನೂರಾರು ಜನರು … Continued