ವಿಧಾನಸಭೆಯ ವಿಪಕ್ಷ ನಾಯಕರಾಗಿ ಆರ್‌.ಅಶೋಕ ಆಯ್ಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ಶುಕ್ರವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ (BJP Meeting) ಈ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ವಾರವಷ್ಟೇ ಬಿಜೆಪಿ ರಾಜ್ಯ ಘಟಕದ … Continued

ಸದನದಲ್ಲಿ ಅಶಿಸ್ತು : ಬಿಜೆಪಿಯ 10 ಶಾಸಕರ ಅಮಾನತು

ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಅತಿರೇಕದ ವರ್ತನೆ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ ಹತ್ತು ಮಂದಿ ಶಾಸಕರನ್ನು (BJP MLAs) ಬುಧವಾರ ಅಮಾನತು ಮಾಡಲಾಗಿದೆ. ಬಿಜೆಪಿಯ 10 ಶಾಸಕರನ್ನು ಅಧಿವೇಶನ ಮುಗಿಯುವವರೆಗೂ ಸ್ಪೀಕರ್​ ಯು.ಟಿ. ಖಾದರ್​ ಅಮಾನತು ಮಾಡಿದ್ದಾರೆ. ಬಿಜೆಪಿ ಶಾಸಕರಾದ ಆರ್. ಅಶೋಕ, ಅಶ್ವತ್ಥನಾರಾಯಣ, ಅರವಿಂದ್ ಬೆಲ್ಲದ, ಯಶಪಾಲ ಸುವರ್ಣ, ಅರಗ ಜ್ಞಾನೇಂದ್ರ, ವೇದವ್ಯಾಸ ಕಾಮತ್, … Continued

ಪ್ರಧಾನಿ ನರೇಂದ್ರ ಮೋದಿ ಮಾತು ಕೇಳಿದ್ದರೆ 5 ವರ್ಷ ನಾನೇ ಸಿಎಂ ಆಗಿರುತ್ತಿದ್ದೆ : ಕುಮಾರಸ್ವಾಮಿ

ಬೆಂಗಳೂರು : ಜೆಡಿಎಸ್​​ ಅನ್ನು ಪದೇ ಪದೇ ಬಿಜೆಪಿಯ ‘ಬಿ ಟೀಂ’ ಎಂದು ಟೀಕಿಸುವ ಮುನ್ನ ಒಂದು ವಿಚಾರ ತಿಳಿದುಕೊಳ್ಳಿ. ಪ್ರಧಾನಿ ನರೇಂದ್ರ ಮೋದಿ ಅವರ ಮಾತನ್ನು ನಾನು ಅಂದು ಕೇಳಿದ್ದರೆ ನಾನು ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ … Continued

ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆತ್ಮಹತ್ಯೆ ಯತ್ನ ಪ್ರಕರಣ : ಸದನದಲ್ಲಿ ಕೋಲಾಹಲ, ಸಚಿವ ಚೆಲುವರಾಯಸ್ವಾಮಿ ರಾಜೀನಾಮೆಗೆ ಒತ್ತಾಯ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಆತ್ಮಹತ್ಯೆ ಯತ್ನದ ಪ್ರಕರಣ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಸಚಿವ ಚೆಲುವರಾಯಸ್ವಾಮಿ ವಿರುದ್ಧ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅವರ ರಾಜೀನಾಮೆಗೆ ಆಗ್ರಹಿಸಿದರು. ಶೂನ್ಯ ವೇಳೆಯಲ್ಲಿ ಈ ವಿಚಾರ ಪ್ರಸ್ತಾಪ ಮಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,‌ ಜಿಲ್ಲಾ ಉಸ್ತುವಾರಿ ಸಚಿವರ ಒತ್ತಡದಿಂದ … Continued

ಹಿಂದುತ್ವ-ಗೋಮಾತೆ ಹೆಸರಲ್ಲಿ ಯತ್ನಾಳ, ಡಿಕೆ ಶಿವಕುಮಾರ ಹೆಸರಲ್ಲಿ ಬಸವರಾಜ ಶಿವಗಂಗಾ ಪ್ರಮಾಣವಚನ

ಬೆಂಗಳೂರು : ನೂತನವಾಗಿ ಆಯ್ಕೆಗೊಂಡಿರುವ ಎಲ್ಲ ಶಾಸಕರಿಗೂ ಇಂದು ಸೋಮವಾರದಿಂದ ಆರಂಭವಾಗಿರುವ ವಿಧಾನಸಭೆ ಅಧಿವೇಶನದಲ್ಲಿ ಪ್ರಮಾಣವಚನ ಬೋಧನೆ ಕಾರ್ಯಕ್ರಮ ನಡೆಯುತ್ತಿದೆ. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಹಿಂದುತ್ವ ಹಾಗೂ ಗೋಮಾತೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಶಾಸಕ ಬಸವರಾಜ ಶಿವಗಂಗಾ ಅವರು ಡಿ ಕೆ ಶಿವಕುಮಾರ ಅವರ ಹೆಸರಿನಲ್ಲಿ ಅವರು ಪ್ರಮಾಣವಚನ … Continued

ಕರ್ನಾಟಕ ಭೂಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು: ಸರ್ಕಾರಿ ಭೂಮಿಯನ್ನು ಕೃಷಿಗಾಗಿ ಬಳಕೆ ಮಾಡಿದ ರೈತರಿಗೆ ಭೂ ಕಬಳಿಕೆ ಅಧಿನಿಯಮದ ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಉದ್ದೇಶ ಹೊಂದಿರುವ ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕಯನ್ನು ಕೆಲವು ತಿದ್ದುಪಡಿಯೊಂದಿಗೆ ಗುರುವಾರ  ವಿಧಾನಸಭೆಯಲ್ಲಿ ಅಂಗೀಕಾರ ಪಡೆಯಲಾಯಿತು. ಬುಧವಾರ ವಿಧೇಯಕವನ್ನು ಮಂಡಿಸಲಾಗಿತ್ತು. ಆದರೆ ವಿಧೇಯಕಕ್ಕೆ ವಿರೋಧ ವ್ಯಕ್ತವಾಗಿತ್ತು. ಆಡಳಿತ ಪಕ್ಷದ ಶಾಸಕ ಗೂಳಿಹಟ್ಟಿ ಶೇಖರಹಾಗೂ … Continued

ವಿಧಾನಸಭೆ ಅಧಿವೇಶನ, ಭಾರತ್‌ ಜೋಡೊ ಯಾತ್ರೆ ನಡುವೆಯೇ ಡಿಕೆಶಿಗೆ ಇ.ಡಿ ಸಮನ್ಸ್‌

ಬೆಂಗಳೂರು: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ) ಸಮನ್ಸ್ ಜಾರಿ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 19ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ನಲ್ಲಿ ಸೂಚಿಸಲಾಗಿದೆ. ಈ ಕುರಿತು ಟ್ವೀಟ್‌ ಮಾಡಿ ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು, ಭಾರತ್‌ ಜೋಡೊ ಯಾತ್ರೆ ಹಾಗೂ ವಿಧಾನಸಭೆ … Continued

ಸದನದಲ್ಲಿ ಡಾ.ಸುಧಾಕರ್ ಹೇಳಿಕೆ ಪ್ರಸ್ತಾಪಕ್ಕೆ ಬೊಮ್ಮಾಯಿ ಆಕ್ಷೇಪ

ಬೆಂಗಳೂರು: ಆರೋಗ್ಯ ಸಚಿವ ಡಾ ಸುಧಾಕರ್ ಅವರು ಸದನದ ಹೊರಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅವರು ನೀಡಿರುವ ಹೇಳಿಕೆ ಬಗ್ಗೆ ನಿಮಗೆ ಆಕ್ಷೇಪ‌ ಇದ್ದರೆ ಸದನದ ಹೊರಗೆ ಆ ಬಗ್ಗೆ ಪ್ರಶ್ನಿಸಿ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು. ಬುಧವಾರ ವಿಧಾನಸಭೆಯಲ್ಲಿ ಭೋಜನ ವಿರಾಮದ … Continued

ಕ್ಷೇತ್ರಗಳ ಪುನರ್ ವಿಂಗಡಣೆ ಮಾನದಂಡಗಳ ಪರಿಷ್ಕರಣೆ: ಬೊಮ್ಮಾಯಿ

ಬೆಂಗಳೂರು- ಜಿಲ್ಲಾ ಪಂಚಾಯತ ಮತ್ತು ತಾಲ್ಲೂಕು ಪಂಚಾಯತ ಕ್ಷೇತ್ರ ವಿಂಗಡಣೆ ವೈಜ್ಞಾನಿಕವಾಗಿ ನಡೆದಿಲ್ಲ.  ಹೀಗಾಗಿ  ಕ್ಷೇತ್ರಗಳ  ವಿಂಗಡಣೆಗೆ ಹೊಸ ಮಾರ್ಗಸೂಚಿಗಳನ್ನು ರೂಪಿಸಲು ಗುರುವಾರ ಬೆಂಗಳೂರಿನಲ್ಲಿ ಸರ್ವ ಪಕ್ಷಗಳ ಮುಖಂಡರ ಸಭೆ ನಡೆಸುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಸೋಮವಾರ ಶೂನ್ಯ ವೇಳೆಯಲ್ಲಿ ಬಿಜೆಪಿಯ ಸುನೀಲ್‌ಕುಮಾರ್ ಈ  … Continued