ಕರ್ನಾಟಕ ಬಜೆಟ್‌ 2023-24 : ಸ್ವಯಂ ಘೋಷಣೆ ಮೂಲಕ ಕೃಷಿಯೇತರ ಉದ್ದೇಶಕ್ಕೆ ಕೃಷಿ ಭೂಮಿ ಪರಿವರ್ತನೆಗೆ ಅವಕಾಶ

ಬೆಂಗಳೂರು : ಕರ್ನಾಟಕ ಭೂ-ಕಂದಾಯ ಕಾಯಿದೆಯ ಸೆಕ್ಷನ್‌ 95ಕ್ಕೆ ತಿದ್ದುಪಡಿ ತಂದು ಸ್ವಯಂ ಘೋಷಣೆಯ ಮೂಲಕ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಕ್ಕೆ ಬಳಸಲು ಭೂ ಪರಿವರ್ತನೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಂದಾಯ ಇಲಾಖೆ ವಿಚಾರವಾಗಿ ಮುಖ್ಯಮಂತ್ರಿ ತಮ್ಮ ಬಜೆಟ್‌ ಭಾಷಣದಲ್ಲಿ ವಿಷಯ ಪ್ರಸ್ತಾಪಿಸಿ, “ಆಡಳಿತದಲ್ಲಿ ದಕ್ಷತೆಯನ್ನು ಹೆಚ್ಚಿಸುವ ಮೂಲಕ ಕಂದಾಯ ಇಲಾಖೆಯ … Continued

ಬಜೆಟ್ ಮಂಡನೆ ವೇಳೆ ಸದನಕ್ಕೆ ಬಂದು ಶಾಸಕರ ಸೀಟಿನಲ್ಲಿ 15 ನಿಮಿಷ ಕುಳಿತಿದ್ದ ಅನಾಮಿಕ : ಭದ್ರತಾ ಲೋಪ..?

ಬೆಂಗಳೂರು : ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡುವಾಗ ಶಾಸಕರಲ್ಲದೇ ಇದ್ದರೂ ಓರ್ವ ಅನಾಮಿಕ ವ್ಯಕ್ತಿ ಸದನದಲ್ಲಿ ಬಂದು ಕುಳಿತಿದ್ದ ಪ್ರಸಂಗ ವರದಿಯಾಗಿದೆ. ಬಜೆಟ್ ಮಂಡನೆ ಮಾಡುವ ಸಂದರ್ಭದಲ್ಲಿ ಸುಮಾರು 15 ನಿಮಿಷಗಳ ಕಾಲ ಈ ಅನಾಮಿಕ ವ್ಯಕ್ತಿ ದೇವದುರ್ಗ‌ ಕ್ಷೇತ್ರದ ಜೆಡಿಎಸ್ ಶಾಸಕಿ ಕರಿಯಮ್ಮ ಆಸನದಲ್ಲಿ ಕುಳಿತಿದ್ದ. ಅವರ ಆಸನದಲ್ಲಿ ಕೆಲಹೊತ್ತು ಕುಳಿತ ಈ … Continued

ಗೃಹಜ್ಯೋತಿ ಯೋಜನೆ ಜಾರಿಗೆ ವಾರ್ಷಿಕ 13,910 ಕೋಟಿ- ಅನ್ನಭಾಗ್ಯ ಯೋಜನೆಗೆ 10,000 ಕೋಟಿ ರೂ.ವೆಚ್ಚ

ಬೆಂಗಳೂರು: ಬಜೆಟ್‌ನಲ್ಲಿ ಪಂಚ ಗ್ಯಾರಂಟಿ ಜಾರಿಗೆ ಐದು ಇಲಾಖೆಗಳಿಗೆ ಅನುದಾನ ಹಂಚಿಕೆ ಮಾಡಲಾಗಿದ್ದು, ಗೃಹ ಲಕ್ಷ್ಮಿ ಯೋಜನೆಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 24,166 ಕೋಟಿ ನಿಗದಿಪಡಿಸಲಾಗಿದೆ. ಉಚಿತ ವಿದ್ಯುತ್ ‘ಗೃಹಜ್ಯೋತಿ’ ಯೋಜನೆಗಾಗಿ ಇಂಧನ ಇಲಾಖೆಗೆ 22,773 ಕೋಟಿ ರೂಪಾಯಿ ಅನುದಾನ ನಿಗದಿ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಗಾಗಿ ಆಹಾರ ಇಲಾಖೆಗೆ 10,460 ಕೋಟಿ ನಿಗದಿಪಡಿಸಲಾಗಿದೆ. … Continued

ಕರ್ನಾಟಕ ಬಜೆಟ್‌ 2023-24 : ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್‌, ರಾಷ್ಟ್ರೀಯ ಶಿಕ್ಷಣ ನೀತಿ ರದ್ದು, 10ನೇ ತರಗತಿ ವರೆಗೆ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ/ಬಾಳೆಹಣ್ಣು/ಶೇಂಗಾಚಿಕ್ಕಿ ವಿತರಣೆ

ಬೆಂಗಳೂರು: ರಾಜ್ಯದ ಅಸ್ಮಿತೆ ಎತ್ತಿಹಿಡಿಯುವ ಹೊಸ ಶಿಕ್ಷಣ ನೀತಿ ರೂಪಿಸುವ ಬಗ್ಗೆ ಬಜೆಟ್​ನಲ್ಲಿ ಪ್ರಸ್ತಾಪಿಸಲಾಗಿದೆ. ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಒಟ್ಟು 37,587 ಕೋಟಿ ರೂ. ಹಣವನ್ನು ಮೀಸಲು ಇರಿಸಲಾಗಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವಂತಹ ಎಂದು ರಾಜ್ಯ ಬಜೆಟ್​ನಲ್ಲಿ ಉಲ್ಲೇಖಿಸಲಾಗಿದ್ದು ಅದನ್ನು ರದ್ದುಗೊಳಿಸುವುದಾಗಿ ಹೇಳಲಾಗಿದೆ. ಬಜೆಟ್​ನಲ್ಲಿ “ಬಹುಧರ್ಮ, … Continued

ಕರ್ನಾಟಕ ಬಜೆಟ್ 2023-24: ಗಾತ್ರ 3.27 ಲಕ್ಷ ಕೋಟಿ ರೂ; 5 ಗ್ಯಾರಂಟಿಗಳ ಜಾರಿಗೆ 52,000 ಕೋಟಿ ರೂ. ಮೀಸಲು, ಬೆಂಗಳೂರಿಗೆ ಬಂಪರ್‌, ಮದ್ಯಪ್ರಿಯರಿಗೆ ಶಾಕ್‌, ರೈತರಿಗೆ ಶೂನ್ಯ ಬಡ್ಡಿದರದ ಸಾಲದ ಮಿತಿ ಹೆಚ್ಚಳ…

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಬಜೆಟ್‌ ಅನ್ನು ಮಂಡಿಸಿದ್ದಾರೆ. ಕರ್ನಾಟಕ ಬಜೆಟ್ 2023-24ರ ಒಟ್ಟು ಗಾತ್ರ 3.27 ಲಕ್ಷ ಕೋಟಿ ರೂ.ಗಳಾಗಿದೆ. ಅದರಲ್ಲಿ 5 ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಬೆಂಗಳೂರಿಗೆ ಒಟ್ಟು 45,000 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಬ್ರ್ಯಾಂಡ್ ಬೆಂಗಳೂರಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಹೆಚ್ಚಿನ ಅನುದಾನ … Continued

ಕರ್ನಾಟಕ ಬಜೆಟ್‌ 2023-24 : ಆರು ಹೊಸ ಇಎಸ್ಐ ಆಸ್ಪತ್ರೆಗಳು, ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ

ಬೆಂಗಳೂರು: 6 ಹೊಸ ಇಎಸ್ಐ ಆಸ್ಪತ್ರೆಗಳು, ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಅನೇಕ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ಹಾಗೂ 45 ತಾಲೂಕು ಆಸ್ಪತ್ರೆಗಳನ್ನು ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ ಮ್ಯಾಪಿಂಗ್ ಮಾಡುವ ಮೂಲಕ ಸ್ಥಳೀಯವಾಗಿ ಹೃದ್ರೋಗ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 2023-24 ನೇ ಸಾಲಿನ ಬಜೆಟ್ ನಲ್ಲಿ … Continued

ಕರ್ನಾಟಕ ಬಜೆಟ್‌ 2023-24 : ಮಹಿಳೆಯರಿಗೆ ಬಂಪರ್‌ ಕೊಡುಗೆ , ಬಜೆಟ್‌ ಹೈಲೈಟ್ಸ್‌…

ಬೆಂಗಳೂರು: ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ ಮಹಿಳಾ ಆಯವ್ಯಯದಲ್ಲಿ ಒಟ್ಟಾರೆ 46,278 ಕೋಟಿ ರೂ. ಒದಗಿಸಲಾಗಿದೆ. ಮಹಿಳೆಯರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಸರ್ಕಾರ ಈ ಬಾರಿ ಆಯವ್ಯಯದಲ್ಲಿ ಭಾರೀ ಕೊಡುಗೆ ನೀಡಿದ್ದಾರೆ. ಈ ಯೋಜನೆಯಡಿ ರಾಜ್ಯ ಸರ್ಕಾರವು ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ. ಗಳ ಸಹಾಯ ಧನವನ್ನು ಡಿ.ಬಿ.ಟಿ. ಮೂಲಕ … Continued

ಕರ್ನಾಟಕ ಬಜೆಟ್‌ 2023-24: ಕೃಷಿ ಪೂರಕ ಚಟುವಟಿಕೆ, ನೀರಾವರಿಗೆ ಆದ್ಯತೆ

ಬೆಂಗಳೂರು: ಕರ್ನಾಟಕ ಬಜೆಟ್‌ 2023-24ರಲ್ಲಿ ಮುಖ್ಯಮಂತ್ರಿ ಬಸವರಾಜ ಕೃಷಿಕರಿಗೆ ಬಂಪರ್ ಕೊಡುಗೆ ಪ್ರಕಟಿಸಿದ್ದಾರೆ. ಈ ವರ್ಷದಿಂದ ರೈತರಿಗೆ ನೀಡುತ್ತಿರುವ ಬಡ್ಡಿ ರಹಿತ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷ ರೂ. ಗಳಿಂದ 5 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗಿದೆ. ಅಲ್ಲದೆ, 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25,000 ಕೋಟಿ ರೂ. ಗಳಷ್ಟು ಸಾಲ ವಿತರಿಸುವ ಗುರಿ … Continued

ಕರ್ನಾಟಕ ಬಜೆಟ್‌ 2023-24: ಪದವಿ ವರೆಗೆ ಎಲ್ಲ ವಿದ್ಯಾರ್ಥಿಗಳಿಗೆ ಶುಲ್ಕ ಇಲ್ಲ, ಸಿಎಂ ವಿದ್ಯಾಶಕ್ತಿ ಯೋಜನೆ ಘೋಷಣೆ; `ಮಕ್ಕಳ ಬಸ್ಸು’ ಎಂಬ ಯೋಜನೆ ಆರಂಭ

ಬೆಂಗಳೂರು: ಶಿಕ್ಷಣ ಇಲಾಖೆ ಹೆಚ್ಚಿನ ಆದ್ಯತೆ ನೀಡಿರುವ ರಾಜ್ಯ ಸರ್ಕಾರವು ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆಯನ್ನು ಪ್ರಕಟಿಸಿದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಪದವಿ ಹಂತದವರೆಗೂ ಎಲ್ಲ ಮಕ್ಕಳಿಗೂ ಸಂಪೂರ್ಣ ಶುಲ್ಕ ವಿನಾಯ್ತಿ ನೀಡಲಾಗಿದೆ. ಶಾಲೆ, ಕಾಲೇಜು, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ನಿಗದಿಪಡಿಸಲಾಗಿದೆ. `ಮುಖ್ಯಮಂತ್ರಿ ವಿದ್ಯಾಶಕ್ತಿ’ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ಇದರಡಿಯಲ್ಲಿ ಸರ್ಕಾರಿ ಪದವಿಪೂರ್ವ ಮತ್ತು ಸರ್ಕಾರಿ … Continued