ಖಾಸಗಿ ಜಾಗದಲ್ಲಿ ಶ್ರೀಗಂಧ ಬೆಳೆದ ರೈತರಿಗೆ ಇನ್ಮುಂದೆ ಮುಕ್ತವಾಗಿ ಮಾರಾಟ ಮಾಡಲು ಅವಕಾಶ

ಬೆಂಗಳೂರು: ಇನ್ಮುಂದೆ ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧ (Sandalwood) ಬೆಳೆದು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದು. ರೈತರು ತಮ್ಮ ಹೊಲ ಗದ್ದೆಗಳಲ್ಲಿ ಶ್ರೀಗಂಧ ಬೆಳೆಯುವುದನ್ನು ಉತ್ತೇಜಿಸುವುದರ ಜೊತೆಗೆ ಮಾರಾಟಕ್ಕೆ ಸರಳ ವ್ಯವಸ್ಥೆ ಕಲ್ಪಿಸಲು ಈ ಹಿಂದೆ ರಾಜ್ಯ ಅರಣ್ಯ ಇಲಾಖೆ ಪ್ರಸ್ತಾಪಿಸಿದ ‘ಶ್ರೀಗಂಧ ನೀತಿ- 2022 ’ ಜಾರಿಮಾಡಲು ರಾಜ್ಯ ಸಚಿ ಸಂಪುಟ ಅನುಮೋದನೆ ನೀಡಿದೆ. … Continued

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ : ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ  ಸುಗ್ರೀವಾಜ್ಞೆ ಮೂಲಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಮಾಡಲು  ಒಪ್ಪಿಗೆ ನೀಡಿದೆ ಹಾಗೂ  ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆ ಮಾಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಸಚಿವ … Continued

ಹಿಂದೂ ಸಂಘಟನೆಗಳು, ಕನ್ನಡ ಸಂಘಟನೆಗಳು, ರೈತರ ಮೇಲೆ ದಾಖಲಾದ ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ 35 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸೋಮವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಸಂಪುಟ ಉಪಸಮಿತಿ ಶಿಫಾರಸುಗಳನ್ನು ಆಧರಿಸಿ ಬಿಜೆಪಿ ಕಾರ್ಯಕರ್ತರು, ಹಿಂದೂ ಸಂಘಟನೆಗಳು ಕಾರ್ಯಕರ್ತರು, ರೈತ ಮುಖಂಡರು ಮತ್ತು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಲಾಯಿತು. ಆದರೆ, ಯಾವ ಯಾವ … Continued

ಲೋಕಾಯುಕ್ತರ ವೇತನ, ಭತ್ಯೆ ಹೆಚ್ಚಳಕ್ಕೆ ಮಸೂದೆ: ಲೋಕಾಯುಕ್ತ ಬಲಪಡಿಸಲು ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ ಆದೇಶ ಹಿನ್ನೆಲೆಯಲ್ಲಿ ಲೋಕಾಯುಕ್ತ ಬಲ ಪಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಲೋಕಾಯುಕ್ತ ತಿದ್ದುಪಡಿ (2022) ಕಾಯ್ದೆಗೆ ಸಚಿವ ಸಂಪುಟವು ಒಪ್ಪಿಗೆ ನೀಡಿದ್ದು, ಲೋಕಾಯುಕ್ತಕ್ಕೆ ಹೆಚ್ಚುವರಿ (ಅಡಿಷನಲ್) ರಿಜಿಸ್ಟ್ರಾರ್​​ ನೇಮಕಕ್ಕೂ ಸಚಿವ ಸಂಪುಟ ತೀರ್ಮಾನಿಸಿದೆ. ಲೋಕಾಯುಕ್ತ ನ್ಯಾಯಮೂರ್ತಿಗಳ ವೇತನ ಹೆಚ್ಚಿಸಿ, ಹೈಕೋರ್ಟ್​​ ನ್ಯಾಯಮೂರ್ತಿಗಳ ವೇತನಕ್ಕೆ … Continued