ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಜಯ ಸಿಗಲಿದೆ: ಮಹಾರಾಷ್ಟ್ರ ಗಡಿ ವಿವಾದ ಕುರಿತು ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರದೊಂದಿಗಿನ ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಜಯ ಸಿಗಲಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗಡಿ ವಿವಾದದಿಂದ ಉಂಟಾದ ಉದ್ವಿಗ್ನತೆಯ ಬಗ್ಗೆ ಮಹಾರಾಷ್ಟ್ರ ಸರ್ಕಾರವನ್ನು ದೂಷಿಸಿದ ಬೊಮ್ಮಾಯಿ, ರಾಜ್ಯದ ಗಡಿ ಮತ್ತು ಅದರ ಜನರನ್ನು ರಕ್ಷಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಕರ್ನಾಟಕದ … Continued

ಮುಸ್ಲಿಂ ಮಹಿಳೆಯರಿಗಾಗಿ ಪ್ರತ್ಯೇಕ ಕಾಲೇಜು ತೆರೆಯುವ ಪ್ರಸ್ತಾಪವಿಲ್ಲ : ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳಿಗಾಗಿ 10 ಕಾಲೇಜುಗಳನ್ನು ತೆರೆಯಲು ಕರ್ನಾಟಕ ಸರ್ಕಾರವು ವಕ್ಫ್ ಮಂಡಳಿಗೆ ಒಪ್ಪಿಗೆ ನೀಡಿದೆ ಎಂಬ ವರದಿಗಳನ್ನು ತಿರಸ್ಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತಮ್ಮ ಆಡಳಿತದ ಯಾವುದೇ ಮಟ್ಟದಲ್ಲಿ ಅಂತಹ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಗುರುವಾರ ಹೇಳಿದ್ದಾರೆ. ಇದು ವಕ್ಫ್ ಮಂಡಳಿಯ ಅಧ್ಯಕ್ಷರ ವೈಯಕ್ತಿಕ ದೃಷ್ಟಿಕೋನವಾಗಿರಬಹುದು ಮತ್ತು ಅವರ ಸರ್ಕಾರದ … Continued

ಬಸವಕಲ್ಯಾಣದಲ್ಲಿ ಹೊಸ ಅನುಭವ ಮಂಟಪ ನಿರ್ಮಾಣ ಮೇ ತಿಂಗಳಲ್ಲಿ ಆರಂಭ: ಸಿಎಂ ಬೊಮ್ಮಾಯಿ

ಬಸವಕಲ್ಯಾಣ: 12ನೇ ಶತಮಾನದಲ್ಲಿ ಬಸವಕಲ್ಯಾಣದಲ್ಲಿ ಅಸ್ತಿತ್ವದಲ್ಲಿದ್ದ ಮೂಲ ಅನುಭವ ಮಂಟಪ ಇದ್ದಲ್ಲಿ ಮೇ ತಿಂಗಳಿನಿಂದ ನೂತನ ಅನುಭವ ಮಂಟಪ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಇಲ್ಲಿ ಪ್ರಕಟಿಸಿದ್ದಾರೆ. ಬಸವಕಲ್ಯಾಣ ಕ್ಷೇತ್ರ ಸಮಿತಿ ಹಾಗೂ ವಿಕಾಸ ಅಕಾಡೆಮಿ ಜಂಟಿಯಾಗಿ ಬಸವಕಲ್ಯಾಣದಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಯಾತ್ರೆ ಪರ್ವ ಉದ್ಘಾಟಿಸಿ ಮಾತನಾಡಿದ ಅವರು, … Continued