ನಾಳೆ (ಮೇ 30) ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ : ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ ಆಯ್ಕೆ ಬಹುತೇಕ ಖಚಿತ

ಬೆಂಗಳೂರು : ಇಲ್ಲಿನ ವಿಧಾನ ಸೌಧದಲ್ಲಿ ಶನಿವಾರ (ಮೇ 30) ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ನಿಗದಿಯಾಗಿದ್ದು, ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಶಿವಕುಮಾರ ಅವರನ್ನು ಹೆಸರಿಸಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ … Continued

ವೀಡಿಯೊ..| ಕೈಯಲ್ಲಿ ರಾಷ್ಟ್ರ ಧ್ವಜ ಹಿಡಿದುಕೊಂಡೇ ಸಿಎಂ ಸಿದ್ದರಾಮಯ್ಯ ಶೂ ತೆಗೆದ ಕಾಂಗ್ರೆಸ್‌ ಕಾರ್ಯಕರ್ತ ; ವ್ಯಾಪಕ ಟೀಕೆ

ಬೆಂಗಳೂರು: ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನಾಚರಣೆ ಅಂಗವಾಗಿ ಬುಧವಾರ ನಡೆದ ಕಾರ್ಯಕ್ರಮ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕರ್ತರೊಬ್ಬರ ಕೈಯಲ್ಲಿ ಬೂಟುಗಳನ್ನು ತೆಗೆಸಿಕೊಂಡಿದ್ದಾರೆ ಹಾಗೂ ಆ ಸಂದರ್ಭದಲ್ಲಿ ಕಾರ್ಯಕರ್ತ ಕೈಯಲ್ಲಿ ರಾಷ್ಟ್ರ ಧ್ವಜ ಹಿಡಿದುಕೊಂಡೇ ಶೂ ಬಿಚ್ಚಿರುವುದು ಈಗ ವಿವಾದಕ್ಕೆ ಕಾರಣವಾಗಿದ್ದು, ಇದಕ್ಕೆ ಭಾರೀ ಟೀಕೆ ವ್ಯಕ್ತವಾಗಿದೆ. ಇದರ ವೀಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ … Continued

ಹಲಾಲ್ ಮಾಂಸದ ಬಗ್ಗೆ ಗಂಭೀರ ಆಕ್ಷೇಪಣಗಳ ಬಗ್ಗೆ ಪರಿಶೀಲಿಸಿ ನಂತರ ಸರ್ಕಾರದಿಂದ ಕ್ರಮ-ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹಲಾಲ್ ಮಾಂಸದ ಬಗ್ಗೆ ಗಂಭೀರ ಆಕ್ಷೇಪಣೆಗಳನ್ನು ರಾಜ್ಯ ಸರ್ಕಾರ ಪರಿಶೀಲಿಸಿ ನಂತರ ಕ್ರಮದ ಬಗ್ಗೆ ವಿಚಾರ ಮಾಡುತ್ತೇವೆ ಎಂದು ಹೇಳಿದ್ದಾರೆ. ಕೆಲವು ಬಲಪಂಥೀಯ ಗುಂಪುಗಳು ಅದನ್ನು ಬಹಿಷ್ಕರಿಸಲು ಕರೆ ನೀಡಿವೆ. ಮುಖ್ಯಮಂತ್ರಿಗಳು ತಮ್ಮ ಸರ್ಕಾರಕ್ಕೆ ಸಂಬಂಧಿಸಿದಂತೆ “ಬೆಳವಣಿಗೆಯ ರೆಕ್ಕೆಗಳು” ಮಾತ್ರ ಇವೆಯೇ ಹೊರತು ಬಲಪಂಥೀಯ ಅಥವಾ … Continued

ಕೊರೊನಾ ಉಲ್ಬಣ: ಸರ್ವಪಕ್ಷಗಳ ಸಭೆ ಕರೆದ ಸಿಎಂ, ಲಾಕ್‌ಡೌನ್‌ ಆಗುತ್ತಾ..?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಕೊರೊನಾ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ವಪಕ್ಷ ಸಭೆ ಕರೆಯಲಾಗುವುದು. ಏಪ್ರಿಲ್ 18, 19ರಂದು ಸಭೆ ಕರೆದು ಚರ್ಚಿಸಲಾಗುವುದು ಎಂದು ತಿಳಿಸಿದರು.ರಾಜ್ಯದಲ್ಲಿ ಕೊರೊನಾ ಸೋಂಕು … Continued