ಕಾಂಗ್ರೆಸ್‌ ಐದನೇ ಗ್ಯಾರಂಟಿ ʼಯುವನಿಧಿʼ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಯುವನಿಧಿ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಚಾಲನೆ ನೀಡಿದ್ದಾರೆ. ವಿಧಾನಸೌಧದ ಬ್ವಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಚಿವರಾದ ಶರಣ ಪ್ರಕಾಶ ಪಾಟೀಲ, ಪ್ರಿಯಾಂಕ್ ಖರ್ಗೆ, ಎಂ.ಸಿ. ಸುಧಾಕರ, ಬಿ. ನಾಗೇಂದ್ರ ಮೊದಲಾದವರು ಉಪಸ್ಥಿತರಿದ್ದರು. ಇದು … Continued

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯಲು ಕ್ಯಾಬಿನೆಟ್ ತೀರ್ಮಾನ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಯನ್ನು ರದ್ದು ಮಾಡುವ ಪ್ರಸ್ತಾವೆನೆಗೆ ರಾಜ್ಯ ಸಚಿವ ಸಂಪುಟದ ನಿರ್ಧಾರ ಕೈಗೊಂಡಿದ್ದನ್ನು ವಿರೋಧಿಸಿ ನವೆಂಬರ್‌ ೨೫ರಂದು ಬಿಜೆಪಿ ನಗರದ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದರು, ಮಾಜಿ ಸಚಿವರು, ಶಾಸಕರು … Continued

ಡಿ.ಕೆ. ಶಿವಕುಮಾರ ವಿರುದ್ಧದ ಸಿಬಿಐ ಕೇಸ್ ಹಿಂಪಡೆಯುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ….!

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಒಡೆತನದ ಅಕ್ರಮ ಆಸ್ತಿಯನ್ನು ಪರಿಶೀಲಿಸಲು ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸುತ್ತಿರುವ ಪ್ರಕರಣವನ್ನು ಹಿಂಪಡೆಯುವ ಪ್ರಸ್ತಾವನೆಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ತನಿಖೆಯನ್ನು ರಾಜ್ಯ ಪೊಲೀಸ್ ಅಥವಾ ಭ್ರಷ್ಟಾಚಾರ ನಿಗ್ರಹ ಪ್ರಾಧಿಕಾರವಾದ ಲೋಕಾಯುಕ್ತಕ್ಕೆ ವಹಿಸುವಂತೆ ಗೃಹ ಇಲಾಖೆ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟದ ಮುಂದೆ … Continued

ಕಾಂಗ್ರೆಸ್​ ಸರ್ಕಾರದಲ್ಲಿ ಸಚಿವರ ಮೇಲೆ ಶಾಸಕರ ಅತೃಪ್ತಿ…?: ಜುಲೈ 27ಕ್ಕೆ ಸಿಎಲ್‌ಪಿ ಸಭೆ

ಬೆಂಗಳೂರು : ಜುಲೈ 27 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ಕರೆಯಲಾಗಿದೆ, ಅಲ್ಲಿ ಶಾಸಕರು ತಮ್ಮ ಕೆಲಸದ ಮನವಿ ಅರ್ಜಿಗಳಿಗೆ ಸಚಿವರು ಸ್ಪಂದಿಸುತ್ತಿಲ್ಲ ಹಾಗೂ ತಮ್ಮ ಯಾವುದೇ ಕೆಲಸ ಅಗುತ್ತಿಲ್ಲ ಎಂದು ಅಸಮಾಧಾನವನ್ನು ವ್ಯಕ್ತಪಡಿಸುವ ಸಾಧ್ಯತೆಯಿದೆ. ಅರಮನೆ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಸಿಎಲ್‌ಪಿ ಸಭೆ ನಡೆಯಲಿದೆ. ಮುಖ್ಯಮಂತ್ರಿ ಹಾಗೂ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ … Continued

ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆ, ಎಪಿಎಂಸಿ ಕಾಯ್ದೆ ರದ್ದು: ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ರದ್ದು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ 2022 ತಿದ್ದುಪಡಿ ರದ್ದು ಮಾಡಲು ಸಂಪುಟ ನಿರ್ಧಾರ ಕೈಗೊಂಡಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಸಭೆಯ ನಂತರ … Continued