ಕಾಂಗ್ರೆಸ್ಸಿನಲ್ಲಿ ಮುಗಿಯದ ಸಿಎಂ ಆಯ್ಕೆ ಕಗ್ಗಂಟು : ನಾಳೆ ಬೆಳಿಗ್ಗೆ ಹೈಕಮಾಂಡ್ ಮತ್ತೊಂದು ಸಭೆ, ನಂತರ ಸಿಎಂ ಹೆಸರು ಘೋಷಣೆ ಸಾಧ್ಯತೆ

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಮುಂದಿನ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ದೆಹಲಿಯಲ್ಲಿ ನಿನ್ನೆಯಿಂದ ಸಾಲು ಸಾಲು ಸಭೆಗಳು ನಡೆಯುತ್ತಿದ್ದರೂ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ಇನ್ನೂ ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ನಾಳೆ, ಬುಧವಾರ ದೆಹಲಿಯಲ್ಲಿ ಬೆಳಿಗ್ಗೆ 11ಕ್ಕೆ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ಸಭೆ ನಡೆಯಲಿದ್ದು, ಬಳಿಕ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಆಯ್ಕೆ … Continued

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ಸಿಗೆ ಈಗ ಸಿಎಂ ಅಭ್ಯರ್ಥಿ ಆಯ್ಕೆ ಮಾಡುವುದೇ ಸದ್ಯದ ದೊಡ್ಡ ಸವಾಲು..

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣ ಭಾರತದ ತನ್ನ ಏಕೈಕ ಭದ್ರಕೋಟೆ ಕರ್ನಾಟಕವನ್ನು ಕಳೆದುಕೊಂಡಿದ್ದು, ರಾಜ್ಯದ 223 ಸ್ಥಾನಗಳಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ 65 ಮತ್ತು ಎಚ್‌ಡಿ ಕುಮಾರಸ್ವಾಮಿ ಅವರ ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿದೆ.30 ವರ್ಷಗಳ ನಂತರ ಸ್ಥಾನಗಳು ಮತ್ತು ಮತಗಳ ಹಂಚಿಕೆಯಲ್ಲಿ ಕಾಂಗ್ರೆಸ್‌ ದಾಖಲೆ ಮಾಡಿದೆ. ಕರ್ನಾಟಕದ ಅಧಿಕಾರದ ಚುಕ್ಕಾಣಿ … Continued

ಬಿಜೆಪಿ 75 ಹೊಸ ಅಭ್ಯರ್ಥಿಗಳಲ್ಲಿ 61 ಮಂದಿಗೆ ಸೋಲು, 9 ಜಿಲ್ಲೆಗಳಲ್ಲಿ ಶೂನ್ಯ ಸಂಪಾದನೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಮಲ ಮುದುಡಿದೆ. ಕೈ ಗೆಲುವು ಸಾಧಿಸಿದೆ. ಬಿಜೆಪಿ 9 ಜಿಲ್ಲೆಗಳಲ್ಲಿ ಶೂನ್ಯ ಸಂಪಾದನೆ ಮಾಡಿದರೆ 8 ಜಿಲ್ಲೆಯಲ್ಲಿ ತಲಾ ಒಂದು ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸಿದೆ. ಕೋಲಾರ, ರಾಮನಗರ, ಮಂಡ್ಯ, ಕೊಡಗು, ಬಳ್ಳಾರಿ, ಚಿಕ್ಕಮಗಳೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಯಲ್ಲಿ ಶೂನ್ಯ ಸಂಪಾದನೆ ಮಾಡಿದೆ. ರಾಜ್ಯದ 7 ಜಿಲ್ಲೆಗಳಲ್ಲಿ ತಲಾ … Continued

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ : ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್‌-೪ ಬಿಜೆಪಿ-೩ರಲ್ಲಿ ಗೆಲುವು, ಅಭ್ಯರ್ಥಿಗಳ ಗೆಲುವಿನ ಅಂತರ..?

ಧಾರವಾಡ : ರಾಜ್ಯ ವಿಧಾನಸಭೆಯ ೨೨೪ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಸರ್ಕಾರ ರಚಿಸಲು ಬೇಕಿದ್ದಂತ ಮ್ಯಾಜಿಕ್ ನಂಬರ್ ಅನ್ನು ಕಾಂಗ್ರೆಸ್‌ ದಾಟಿದೆ. ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್‌ ತನ್ನ ಪ್ರಾಬಲ್ಯ ಮೆರೆದಿದೆ. ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್‌ ನಾಲ್ಕು ಸ್ಥಾನಗಳಲ್ಲಿ ಗೆದ್ದರೆ ಬಿಜೆಪಿ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿಯಿಂದ ಟಿಕೆಟ್‌ ನಿರಾಕರಿಸಿದ್ದಕ್ಕೆ ಅಸಮಾಧಾನಗೊಂಡು ಕಾಂಗ್ರೆಸ್‌ ಸೇರಿ ಟಿಕೆಟ್‌ … Continued

ವಿಧಾನಸಭೆ ಚುನಾವಣೆ ಫಲಿತಾಂಶ: ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್‌-8, ಜೆಡಿಎಸ್‌-2, ಬಿಜೆಪಿ-1ರಲ್ಲಿ ಗೆಲುವು

ಮೈಸೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ. 2 ಕ್ಷೇತ್ರಗಳಲ್ಲಿ ಜೆಡಿಎಸ್‌ ಹಾಗೂ 1 ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಜಯಭೇರಿ ಬಾರಿಸಿದೆ. ಜಿಲ್ಲೆಯ ಚಾಮರಾಜ, ಕೆ.ಆರ್ ನಗರ, ಟಿ.ನರಸೀಪುರ, ನರಸಿಂಹರಾಜ, ನಂಜನಗೂಡು, ಪಿರಿಯಾಪಟ್ಟಣ, ಎಚ್.ಡಿ‌ ಕೋಟೆ, ವರುಣ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿದೆ. ಚಾಮುಂಡೇಶ್ವರಿ, … Continued

ಉತ್ತರ ಕನ್ನಡ ಜಿಲ್ಲೆ: ಕಾಂಗ್ರೆಸ್‌-4 ಬಿಜೆಪಿ-2, ಸೋಲೆ ಕಾಣದ ಕಾಗೇರಿಗೆ ಸೋಲುಣಿಸಿದ ಭೀಮಣ್ಣ, ಹಾವು ಏಣಿ ಆಟದಲ್ಲಿ ಕೊನೆ ಸುತ್ತಿನಲ್ಲಿ ಅಲ್ಪಮತದಲ್ಲಿ ಗೆದ್ದ ದಿನಕರ ಶೆಟ್ಟಿ

ಕಾರವಾರ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು ಆರು ಕ್ಷೇತ್ರಗಳಲ್ಲಿ ನಾಲ್ಕರಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ್ದರೆ ಎರಡುರಲ್ಲಿ ಬಿಜೆಪಿ ಗೆದ್ದಿದೆ. ಶಿರಸಿಯಲ್ಲಿ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದಿದ್ದ ಸತತ ಆರು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೋಲುಂಡಿದ್ದಾರೆ. ಇದೇವೇಳೆ ಸತತ ಸೋಲು ಅನುಭವಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ … Continued

ಚಿತ್ರದುರ್ಗ ಜಿಲ್ಲೆಯಲ್ಲಿ ಕಾಂಗ್ರೆಸ್‌ ಜಯಭೇರಿ, ಒಂದಕ್ಕೆ ಬಿಜೆಪಿ ತೃಪ್ತಿ

ಚಿತ್ರದುರ್ಗ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು ಆರು ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸಾಧಿಸಿದರೆ ಒಂದು ಕ್ಷೇತ್ರದಲ್ಲಿ ಗೆದ್ದು ತೃಪ್ತಿಪಟ್ಟುಕೊಂಡಿದೆ. ಜಿಲ್ಲೆಯ ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಸದುರ್ಗ, ಮೊಳಕಾಲ್ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದರೆ, ಹೊಳಲ್ಕೆರೆ ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಜಯಗಳಿಸಿದೆ.. ಚಿತ್ರದುರ್ಗ ಕ್ಷೇತ್ರದಲ್ಲಿ 99,804 ಮತಗಳನ್ನು ಪಡೆದು ಕೆ.ಸಿ.ವೀರೇಂದ್ರ ಅವರು … Continued

ಕರ್ನಾಟಕ ವಿಧಾನಸಭೆ ಚುನಾವಣೆ: ಘಟನಾಘಟಿಗಳಿಗೆ ಸೋಲು-ಹಲವು ಪ್ರಮುಖ ನಾಯಕರಿಗೆ ಗೆಲುವು

ಬೆಂಗಳೂರು : ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಹಾಲಿ ಸಚಿವರಿಗೆ ಬಿಗ್ ಶಾಕ್ ಎದುರಾಗಿದೆ. ಸ್ಪೀಕರ್‌ ಆಗಿದ್ದ ವಿಶ್ವೇಶ್ವರ ಹಾಗೆಡೆ ಕಾಗೇರಿ ಸೇರಿದಂತೆ ಬಿಜೆಪಿಯ ಹಲವು ಘಟನಾಘಟಿ ನಾಯಕರು ಹಾಗೂ ಸಚಿವರು ಸೋತಿದ್ದಾರೆ. ಕಾಂಗ್ರೆಸ್‌ 130 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಸಿದ್ದು, ಭರ್ಜರಿ ಜಯದತ್ತ ಸಾಗುತ್ತಿದೆ. ಕಾಂಗ್ರೆಸ್- 47 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 83 ಕ್ಷೇತ್ರಗಳಲ್ಲಿ … Continued

ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್‌ 127 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ, ಬಿಜೆಪಿಯ ಘಟನಾಘಟಿ ನಾಯಕರಿಗೆ, ಅನೇಕ ಸಚಿವರಿಗೆ ಭಾರೀ ಹಿನ್ನಡೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಈವರೆಗಿನ ಮುನ್ನಡೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತದತ್ತ ದಾಪುಗಾಲು ಇಡುತ್ತಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ 118 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಈಗ ಸಿಕ್ಕಿರುವ ಮಾಹಿತಿಯ ಪ್ರಕಾರ ಬಿಜೆಪಿ 68 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 127 ಕ್ಷೇತ್ರಗಳಲ್ಲಿ ಜೆಡಿಎಸ್ ೨೭ ಹಾಗೂ ಇತರೆ 6 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿರುವುದಾಗಿ ತಿಳಿದು ಬಂದಿದೆ. … Continued

ಕರ್ನಾಟಕ ವಿಧಾನಸಭೆ ಚುನಾವಣೆ ಮತ ಎಣಿಕೆ : ಆರಂಭಿಕ ಮುನ್ನಡೆ ಕಾಯ್ಡುಕೊಂಡ ಕಾಂಗ್ರೆಸ್‌

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದು, ಶನಿವಾರ ಬೆಳಗ್ಗೆ 8 ಗಂಟೆಯಿಂದ ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ 2615 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಆರಂಭಿಕ ಮತ ಎಣಿಕೆಯಲ್ಲಿ ಕಾಂಗ್ರೆಸ್‌ 112, ಬಿಜೆಪಿ 87, ಜೆಡಿಎಸ್‌ 21, ಇತರರು 02 ಕಡೆಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಆರಂಭಿಕ ಎಣೀಕೆಯಲ್ಲಿ ಮಾಜಿ ಮುಖ್ಯಮಂತ್ರಿ … Continued