ಕರ್ನಾಟಕ ವಿಧಾನಸಭೆ ಚುನಾವಣೆ : ಜೆಡಿಎಸ್‌ 3ನೇ ಪಟ್ಟಿ ಬಿಡುಗಡೆ

ಬೆಂಗಳೂರು: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ( JDS) ಮೂರನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, 59 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆಯಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಮೂರನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಇಂದು ಬುಧವಾರ ಬಿಜೆಪಿ ತೊರೆದು ಜೆಡಿಎಸ್‌ ಸೇರ್ಪಡೆಯಾಗಿದ್ದ ಅಯನೂರು ಮಂಜುನಾಥ ಅವರಿಗೂ ಟಿಕೆಟ್‌ ನೀಡಲಾಗಿದೆ. … Continued

ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್‌ನ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

ಬೆಂಗಳೂರು ; ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಇಂದು, ಬುಧವಾರ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಪ್ರಮುಖವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ಟಾರ್‌ ಪ್ರಚಾರಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. … Continued

ಕರ್ನಾಟಕ ವಿಧಾನಸಭೆ ಚುನಾವಣೆ : ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ಬೆಂಗಳೂರು: ಮೇ 10ರಂದು ನಡೆಯಲಿರುವ ಚುನಾವಣೆಗೆ ರಾಜ್ಯದ ಆಡಳಿತಾರೂಢ ಪಕ್ಷವಾದ ಬಿಜೆಪಿ ಸ್ಟಾರ್ ತನ್ನ ಪಕ್ಷದ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ ಸಿಂಗ್‌. ಕೇಂದ್ರ ಗೃಹ ಸಚಿವ ಅಮಿತ್ … Continued

ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್ 4ನೇ ಪಟ್ಟಿ ಬಿಡುಗಡೆ, ಜಗದೀಶ ಶೆಟ್ಟರಗೆ ಟಿಕೆಟ್‌

ಬೆಂಗಳೂರು : ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದೆ. ಹುಬ್ಬಳ್ಳಿ -ಧಾರವಾಡ ಸೆಂಟ್ರಲ್‌ ಕ್ಷೇತ್ರಕ್ಕೆ ಬಿಜೆಪಿಯಿಂದ ಎರಡು ದಿನಗಳ ಹಿಂದೆ ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರಿಗೆ ಟಿಕೆಟ್‌ ಘೋಷಣೆ ಮಾಡಿದೆ. ಇದೇರೀತಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಚಿಕ್ಕಮಗಳೂರಿನಲ್ಲಿ ಮೂಲ ಕಾಂಗ್ರೆಸ್ಸಿಗರ ವಿರೋಧದ ನಡುವೆಯೂ  ಸಿ.ಟಿ.ರವಿ … Continued

ಬಿಜೆಪಿ ಶಾಸಕ ರಾಮದಾಸಗೆ ಕೈತಪ್ಪಿದ ಟಿಕೆಟ್; ಮಾತುಕತೆಗೆ ಬಂದಿದ್ದ ಪ್ರತಾಪ ಸಿಂಹ ಬರಿಗೈಲಿ ವಾಪಸ್‌

ಮೈಸೂರು: ಬಿಜೆಪಿಯ ಬಂಡಾಯ ಬಿಸಿ ಮೂರನೇ ಪಟ್ಟಿಗೂ ಮುಂದುವರಿದಿದೆ. ಮೋದಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಹಾಲಿ ಶಾಸಕ ಎಸ್.ಎ. ರಾಮದಾಸ ಅವರಿಗೆ ಕೃಷ್ಣರಾಜ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದು, ಮುಂದಿನ ನಿರ್ಧಾರದ ಕುರಿತು ಚರ್ಚಿಸಲು ಹಾಲಿ ಶಾಸಕ ರಾಮದಾಸ ಅವರ ಬೆಂಬಲಿಗರು ಸಭೆ ನಡೆಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪಕ್ಷದ ಅನೇಕ ನಾಯಕರು … Continued

ಬಿಜೆಪಿ 3ನೇ ಪಟ್ಟಿಯಲ್ಲಿ ಮೂವರು ಶಾಸಕರಿಗೆ ಕೈತಪ್ಪಿದ ಟಿಕೆಟ್‌

ಬೆಂಗಳೂರು: ಬಿಜೆಪಿಯ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಈ ಪಟ್ಟಿಯಲ್ಲೂ ಬಿಜೆಪಿ ಮೂವರು ಹಾಲಿ ಶಾಸಕರಿಗೆ ಕೊಕ್ ನೀಡಿದೆ. ಬಿಜೆಪಿ ಈವರೆಗೆ ಬಿಡುಗಡೆ ಮಾಡಿದ್ದ 2 ಪಟ್ಟಿಗಳಲ್ಲಿ 212 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿತ್ತು. ಸೋಮವಾರ 3ನೇ ಪಟ್ಟಿಯಲ್ಲಿ 10 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಇನ್ನೂ 2 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ. ಇದರಲ್ಲಿ ಮೂವರು … Continued

ಕರ್ನಾಟಕದ ಚುನಾವಣೆ: ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ, ಜಗದೀಶ ಶೆಟ್ಟರ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಪ್ರಕಟ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ ಇಂದು, ಸೋಮವಾರ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಬಾಕಿ 12 ಕ್ಷೇತ್ರಗಳಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ಮೂರನೇ ಪಟ್ಟಿ ಕ್ಷೇತ್ರ         ಅಭ್ಯರ್ಥಿ ನಾಗಠಾಣ-ಸಂಜೀವ ಐಹೊಳೆ ಸೇಡಂ-ರಾಜಕುಮಾರ ಪಾಟೀಲ ಕೊಪ್ಪಳ-ಮಂಜುಳಾ ಅಮರೇಶ ರೋಣ – ಕಳಕಪ್ಪ ಬಂಡಿ, … Continued

ಸಿಎಂ ಬೊಮ್ಮಾಯಿ ಆಸ್ತಿ ವಿವರ: ಸ್ವಂತ ವಾಹನವಿಲ್ಲ, 5.98 ಕೋಟಿ ರೂ. ಚರಾಸ್ತಿ, 22.95 ಕೋಟಿ ರೂ. ಸ್ಥಿರಾಸ್ತಿ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ( ಅವರ ಇಂದು(ಏಪ್ರಿಲ್ 15) ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಬೊಮ್ಮಾಯಿ ಅವರು ನಾಮಪತ್ರದಲ್ಲಿ ತಮ್ಮ ವೈಯಕ್ತಿ ಮತ್ತು ಕಟುಂಬದ ಆಸ್ತಿ ವಿವರ ನೀಡಿದ್ದು, 5.98 ಕೋಟಿ ರೂ. ಚರಾಸ್ತಿ ಹಾಗೂ 22.95 ಕೋಟಿ ರೂ. ಸ್ಥಿರಾಸ್ತಿ ಘೋಷಿಸಿಕೊಂಡಿದ್ದಾರೆ. ತಮ್ಮ ಬಳಿ ಯಾವುದೇ ವಾಹನಗಳಿಲ್ಲ ಎಂದು ಬೊಮ್ಮಾಯಿ ಅಫಿಡವಿಟ್‌ನಲ್ಲಿ … Continued

ಕಾಂಗ್ರೆಸ್​​​ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯಗೆ ಕೋಲಾರದಲ್ಲಿ ಟಿಕೆಟ್‌ ಇಲ್ಲ, ಕುಮಟಾದಲ್ಲಿ ಆಳ್ವ ಕುಟುಂಬಕ್ಕೆ ಮಣೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ಈಗಾಗಲೇ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈಗ 43 ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಅಥಣಿ ಕ್ಷೇತ್ರದಿಂದ ಟಿಕೆಟ್ … Continued

ಕರ್ನಾಟಕ ವಿಧಾನಸಭೆ ಚುನಾವಣೆ: ಶಿಗ್ಗಾಂವಿಯಲ್ಲಿ ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ

ಹಾವೇರಿ: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ. ಬೊಮ್ಮಾಯಿ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಂಸದ ಸಚಿವ ಸಿ.ಸಿ ಪಾಟೀಲ, ಶಿವಕುಮಾರ ಉದಾಸಿ ಮೊದಲಾದವರು ಸಾಥ್ ನೀಡಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಮುಖ್ಯಮಂತ್ರಿ ಬೊಮ್ಮಾಯಿ ಹುಬ್ಬಳ್ಳಿ ಸಿದ್ಧಾರೂಢ … Continued