ಹುಕ್ಕಾ, ಹುಕ್ಕಾ ಬಾರ್‌ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು:ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲಾ ಬಗೆಯ ಹುಕ್ಕಾ ದಾಸ್ತಾನು, ಮಾರಾಟ, ಸೇವನೆ ಮತ್ತು ಜಾಹೀರಾತು ನಿಷೇಧಿಸಿ ರಾಜ್ಯ ಸರ್ಕಾರ ರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಹಾಗೂ ಹುಕ್ಕಾ ಮತ್ತು ಹುಕ್ಕಾ ಬಾರ್‌ ನಿಷೇಧ ಪ್ರಶ್ನಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾ ಮಾಡಿದೆ. ಬೆಂಗಳೂರಿನ ಆರ್‌ ಭರತ್‌ ಹಾಗೂ ಮತ್ತಿತರರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ … Continued

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ ಹಸ್ತಾಂತರ

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಕೆಲ ದಿನಗಳ ಹಿಂದೆ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ನೇಹಾ ಹಿರೇಮಠ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಫಯಾಜ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ರಾಜ್ಯಾದ್ಯಂತ ಈ ಬಗ್ಗೆ ಭರಾಇ ಪ್ರತಿಭಟನೆಯಾಗಿತ್ತು. ಇದೀಗ ರಾಜ್ಯ … Continued

5, 8, 9ನೇ ತರಗತಿಗಳಿಗೆ ಬೋರ್ಡ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ಸಮ್ಮತಿ

ಬೆಂಗಳೂರು: ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್‌ನ (High Court) ದ್ವಿಸದ್ಯ ಪೀಠ ರದ್ದುಗೊಳಿಸಿದ್ದು 5,8,9, ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದೆ. ರಾಜ್ಯದ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಸುತ್ತೋಲೆ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಬದಿಗೆ ಸರಿಸಿರುವ ಕರ್ನಾಟಕ … Continued

ಕರ್ನಾಟಕದ 5, 8, 9, 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು : ರಾಜ್ಯದ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಸುತ್ತೋಲೆ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿರುವ ಮೇಲ್ಮನವಿ ವಿಚಾರಣೆಯನ್ನು ಸೋಮವಾರ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ 5, 8, 9 ಮತ್ತು 11ನೇ ತರಗತಿಗಳಿಗೆ … Continued

ವಿವಿಧ ಅಕಾಡೆಮಿ-ಪ್ರಾಧಿಕಾರಕ್ಕೆ ನೇಮಕ ; ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಪುರುಷೋತ್ತಮ ಬಿಳಿಮಲೆ, ಸಾಹಿತ್ಯ ಅಕಾಡೆಮಿ ಮುಕುಂದರಾಜ ಅಧ್ಯಕ್ಷರಾಗಿ ನೇಮಕ

ಬೆಂಗಳೂರು: ರಾಜ್ಯ ಸರ್ಕಾರ ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಗೆ ಬರುವ ಕೆಲವೇ ಗಂಟೆಗಳ ಮುನ್ನ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ. ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಉಮರ್ ಯುಎಚ್, ಕರ್ನಾಟಕ … Continued

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ತನಿಖೆ ಸಿಐಡಿಗೆ

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರ ಕಚೇರಿಯು ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲು ಆದೇಶಿಸಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಕಳೆದ … Continued

ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರನ್ನು ನೇಮಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರನ್ನಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಆರೋಗ್ಯ ಸಚಿವ ದಿನೇಶ ಗುಂಡೂರಾವ್, ಕಂದಾಯ ಸಚಿವ ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್​ ಖರ್ಗೆ, ಅರಣ್ಯ ಇಲಾಖೆ ಸಚಿವ ಈಶ್ವರ … Continued

5, 8, 9ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ ಸುಪ್ರೀಂ ಕೋರ್ಟ್‌ ತಡೆ; ಪರೀಕ್ಷೆ ಮುಂದೂಡಿಕೆ

ನವದೆಹಲಿ : 5, 8 ಮತ್ತು 9ನೇ ತರಗತಿಗಳಿಗೆ ಕರ್ನಾಟಕ ಸರ್ಕಾರ ನಡೆಸುತ್ತಿರುವ ಬೋರ್ಡ್ ಪರೀಕ್ಷೆಗಳನ್ನು ನಡೆಸದಂತೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶವನ್ನು ರುಪ್ಸ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿತ್ತು. ಮೇಲ್ಮನವಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು … Continued

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರವು ಸಿಹಿ ಸುದ್ದಿ ನೀಡಿದ್ದು, ತನ್ನ ನೌಕರರ ತುಟ್ಟಿಭತ್ಯೆಯನ್ನು (Dearness Allowance) ಶೇ. ಶೇ.3.75ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು (Dearness Allowance) ಶೇಕಡಾ 38.75 ರಿಂದ ಶೇಕಡಾ 42.5 ಕ್ಕೆ ಪರಿಷ್ಕರಿಸಲು ಅನುಮೋದಿಸಲಾಗಿದೆ. … Continued