ಅಕ್ಟೋಬರ್‌ 3ರಂದು ಮೈಸೂರು ದಸರಾ ಉತ್ಸವಕ್ಕೆ ಚಾಲನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸೋಮವಾರ ನಾಡಹಬ್ಬ ಮೈಸೂರು ದಸರಾ – 2024ರ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಕ್ಟೋಬರ್‌ 3ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 9:15ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ … Continued

ಡಿಕೆ ಶಿವಕುಮಾರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಈ ಹಿಂದಿನ ಬಿಜೆಪಿ ಆಡಳಿತದ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ. ರಾಜ್ಯ … Continued

ಗೃಹಲಕ್ಷ್ಮಿ ಯೋಜನೆಯ ಜೂನ್-ಜುಲೈ ತಿಂಗಳ ಹಣ ಬಿಡುಗಡೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ

ಮಂಡ್ಯ : ರಾಜ್ಯ ಸರ್ಕಾರದ ‘ಗೃಹ ಲಕ್ಷ್ಮಿ’ ಯೋಜನೆಯಲ್ಲಿ ಕೆಲವು ತಾಂತ್ರಿಕ ಕಾರಣಗಳಿಂದ ಜೂನ್ ಮತ್ತು ಜುಲೈ ತಿಂಗಳ ಗೃಹಲಕ್ಷ್ಮಿ(Gruha Lakshmi Scheme) ಹಣ ಜಮಾ ಆಗಲು ವಿಳಂಬವಾಗಿತ್ತು. ಇದೀಗ ಆ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಲಾಗಿದ್ದು, ಆಗಸ್ಟ್ ಮೊದಲ ವಾರದಲ್ಲಿ ಜೂನ್ ಮತ್ತು ಜುಲೈ ತಿಂಗಳ ಹಣವನ್ನು ಖಾತೆಗಳಿಗೆ ಜಮಾ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದು … Continued

ರಾಮನಗರಕ್ಕೆ ʼಬೆಂಗಳೂರು ದಕ್ಷಿಣ ಜಿಲ್ಲೆʼ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ರಾಮನಗರ ಜಿಲ್ಲೆಯನ್ನು ʼಬೆಂಗಳೂರು ದಕ್ಷಿಣ ಜಿಲ್ಲೆʼ ಯನ್ನಾಗಿ ಮರುನಾಮಕರಣ ಮಾಡುವ ಕುರಿತ ಮಹತ್ವದ ನಿರ್ಧಾರವನ್ನು ಇಂದು, ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಸಚಿವ ಎಚ್. ಕೆ.ಪಾಟೀಲ್ ಅವರು, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಬದಲಾಯಿಸಲು … Continued

ರಾಜ್ಯದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ ; ಪತಿ ನಿವೃತ್ತಿಯ ಬೆನ್ನಲ್ಲೇ ಪತ್ನಿಗೆ ಅದೇ ಹುದ್ದೆ…

ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ಜುಲೈ 31ಕ್ಕೆ ನಿವೃತ್ತಿಯಾಗಲಿರುವ ರಜನೀಶ ಗೋಯೆಲ್‌ ಅವರ ಸ್ಥಾನಕ್ಕೆ ಅವರ​ ಪತ್ನಿ ಶಾಲಿನಿ ರಜನೀಶ ಅವರನ್ನು ನೇಮಕ ಮಾಡಲು ಶುಕ್ರವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇಂದು, ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ … Continued

ಹಿರಿಯ ಪತ್ರಕರ್ತ ಶಶಿಧರ ಭಟ್ಟರಿಗೆ ಅನಾರೋಗ್ಯ : ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿರಿಯ ಪತ್ರಕರ್ತರಾದ ಶಶಿಧರ ಭಟ್ ಅವರು ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿದ್ದು, ಅವ ಆಸ್ಪತ್ರೆ ಪೂರ್ತಿ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಶಿಧರ ಭಟ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಶಿಧರ್‌ ಭಟ್‌ ಅವರ ಆರೋಗ್ಯ … Continued

ಮುಡಾ ಹಗರಣ: ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ, ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕಸದಸ್ಯ ಆಯೋಗ ರಚನೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಪರ್ಯಾಯ ಪ್ಲಾಟ್ ಹಗರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಿರುವ ರಾಜ್ಯ ಸರ್ಕಾರ ಈ ಸಂಬಂಧ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ರಚನೆ ಮಾಡಿದೆ. ಮುಡಾ ಸೈಟ್​ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧವೇ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮುಡಾ ಅಕ್ರಮ ನಿವೇಶನ … Continued

ಕೆಎಸ್ ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಸಾಧ್ಯತೆ ; ಶೇ.15ರಿಂದ 20ರಷ್ಟು ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ

ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ನಿಗಮಗಳ ಬಸ್‌ಗಳ ಟಿಕೆಟ್ ದರ ಹೆಚ್ಚಾಗುವ ಸಾಧ್ಯತೆಯಿದೆ. ಕೆಎಸ್ ಆರ್‌ಟಿಸಿ ಬಸ್ಸಿನ ಟಿಕೆಟ್ ದರದಲ್ಲಿ ಶೇ.15ರಿಂದ 20ರಷ್ಟು ಹೆಚ್ಚಳ ಮಾಡುವ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೆಎಸ್ ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೊನ್ನೆ ಕೆಎಸ್ ಆರ್‌ಟಿಸಿ ನಿಗಮದ ಬೋರ್ಡ್ ಮೀಟಿಂಗ್ ಮಾಡಿ, … Continued

ಮೈಸೂರು ಜಿಲ್ಲಾಧಿಕಾರಿ ಸೇರಿದಂತೆ 21 ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರ 21 ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಅವರ ಬದಲಿಗೆ ಮೈಸೂರು ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ್​ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಲಕ್ಷ್ಮಿಕಾಂತ್ ಅವರು ಈ ಹಿಂದೆ ಮೈಸೂರು ಪಾಲಿಕೆ ಆಯುಕ್ತರಾಗಿದ್ದರು. ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಡಾ. … Continued

ಕಪ್ಪತ್ತಗುಡ್ಡದ ಅಂಚಿನಿಂದ 1 ಕಿಮೀ ವ್ಯಾಪ್ತಿಯಲ್ಲಿ ಕಲ್ಲು, ಮರಳು ಗಣಿಗಾರಿಕೆಗೆ ನಿಷೇಧ : ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು : ಗದಗ ಜಿಲ್ಲೆಯ ಕಪ್ಪತ್ತಗುಡ್ಡ ವನ್ಯಜೀವಿ ಧಾಮದ ಅಂಚಿನಿಂದ ಒಂದು ಕಿಲೋ ಮೀಟರ್‌ ವ್ಯಾಪ್ತಿಯಲ್ಲಿನ ಕಲ್ಲು, ಮರಳು ಗಣಿಗಾರಿಕೆ ಚಟುವಟಿಕೆಗಳನ್ನು ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಗದಗ ಜಿಲ್ಲಾ ಟಾಸ್ಕ್‌ ಫೋರ್ಸ್‌ ಸಮಿತಿಯ ಆದೇಶವನ್ನು ಪ್ರಶ್ನಿಸಿ ಬ್ಯಾಡಗಿ ತಾಲ್ಲೂಕು ಮೋಟೆಬೆನ್ನೂರು ಗ್ರಾಮದ ಎಸ್ ಆರ್‌ ಬಳ್ಳಾರಿ ಹಾಗೂ ಕೆಲವು ಗಣಿಗಾರಿಕಾ ಕಂಪೆನಿಗಳೂ … Continued