ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ತನಿಖೆ ಸಿಐಡಿಗೆ

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರ ಕಚೇರಿಯು ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲು ಆದೇಶಿಸಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಕಳೆದ … Continued

ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರನ್ನು ನೇಮಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರನ್ನಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಆರೋಗ್ಯ ಸಚಿವ ದಿನೇಶ ಗುಂಡೂರಾವ್, ಕಂದಾಯ ಸಚಿವ ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್​ ಖರ್ಗೆ, ಅರಣ್ಯ ಇಲಾಖೆ ಸಚಿವ ಈಶ್ವರ … Continued

5, 8, 9ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ ಸುಪ್ರೀಂ ಕೋರ್ಟ್‌ ತಡೆ; ಪರೀಕ್ಷೆ ಮುಂದೂಡಿಕೆ

ನವದೆಹಲಿ : 5, 8 ಮತ್ತು 9ನೇ ತರಗತಿಗಳಿಗೆ ಕರ್ನಾಟಕ ಸರ್ಕಾರ ನಡೆಸುತ್ತಿರುವ ಬೋರ್ಡ್ ಪರೀಕ್ಷೆಗಳನ್ನು ನಡೆಸದಂತೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶವನ್ನು ರುಪ್ಸ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿತ್ತು. ಮೇಲ್ಮನವಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು … Continued

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರವು ಸಿಹಿ ಸುದ್ದಿ ನೀಡಿದ್ದು, ತನ್ನ ನೌಕರರ ತುಟ್ಟಿಭತ್ಯೆಯನ್ನು (Dearness Allowance) ಶೇ. ಶೇ.3.75ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು (Dearness Allowance) ಶೇಕಡಾ 38.75 ರಿಂದ ಶೇಕಡಾ 42.5 ಕ್ಕೆ ಪರಿಷ್ಕರಿಸಲು ಅನುಮೋದಿಸಲಾಗಿದೆ. … Continued

ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆ ರದ್ದು

ಬೆಂಗಳೂರು : ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ (Bike Taxi) ಬಾಡಿಗೆ ಯೋಜನೆ ರದ್ದುಗೊಳಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಬೈಕ್‌ಗಳಂತಹ ಸಾರಿಗೆಯೇತರ ವಾಹನಗಳನ್ನು ಟ್ಯಾಕ್ಸಿ ಸೇವೆಗೆ ಬಳಕೆ ಮತ್ತು ಅವುಗಳ ಕಾರ್ಯಾಚರಣೆಗೆ ಖಾಸಗಿ ಅಪ್ಲಿಕೇಶನ್‌ಗಳನ್ನು ಬಳಸುವುದು ಮೋಟಾರು ವಾಹನ ಕಾಯ್ದೆಗೆ ವಿರುದ್ಧವಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಹೀಗಾಗಿ ಎಲ್ಲ ರೀತಿಯ ಬೈಕ್‌ … Continued

5, 8, 9, 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ರದ್ದು : ಹೈಕೋರ್ಟ್ ಆದೇಶ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5, 8, 9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ರದ್ದುಪಡಿಸಿದೆ. ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ … Continued

ಸರ್ಕಾರದ ಮತ್ತೊಂದು ಎಡವಟ್ಟು : ಖಾಸಗಿ ಶಾಲೆಯಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದು ಸುತ್ತೋಲೆ, ವಿವಾದ ಬೆನ್ನಲ್ಲೇ ಯೂ ಟರ್ನ್…!​

ಬೆಂಗಳೂರು: ವಸತಿ ಶಾಲೆಗಳ ಪ್ರವೇಶ ದ್ವಾರದ ಮೇಲೆ ಕುವೆಂಪು ಅವರ ಕವಿತೆಯ ಬರಹವನ್ನು ಬದಲಾವಣೆ ಮಾಡಿ ಚರ್ಚೆಗೆ ಗ್ರಾಸವಾಗಿದ್ದ ರಾಜ್ಯ ಸರ್ಕಾರ ಅದಾದ ಎರಡು ದಿನಗಳಲ್ಲಿ ಮತ್ತೊಂದು ಯಡವಟ್ಟು ನಿರ್ಧಾರ ಮಾಡಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಅದರಿಂದ ಯೂ ಟರ್ನ್‌ ಹೊಡೆದಿದೆ ಹಾಗೂ ಈಗ ತಿದ್ದುಪಡಿ ಆದೇಶ ಹೊರಡಿಸಿದೆ…! ಖಾಸಗಿ ಶಾಲೆಗಳಲ್ಲಿ (Private Schools) ಇನ್ನು … Continued

ಮಂಗನ ಕಾಯಿಲೆ ಲಸಿಕೆ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ : ದಿನೇಶ ಗುಂಡೂರಾವ್‌

ಉಡುಪಿ : ಮಂಗನ ಕಾಯಿಲೆಗೆ ಲಸಿಕೆ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದ್ದು, ಲಸಿಕೆ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಉಡುಪಿಯಲ್ಲಿ ಶನಿವಾರ ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ನಂತರ ಮಾಧ್ಯಮದವರ ಜೊತೆಗೆ ಮಾತನಾಡಿದರು. ಐಸಿಎಂಆರ್ ನವರು ವ್ಯಾಕ್ಸಿನ್ ತಯಾರಿಕೆಗೆ … Continued

ಕರ್ನಾಟಕದಲ್ಲಿ ಹುಕ್ಕಾ ಬಾರ್, ಮಾರಾಟ, ಬಳಕೆ ಸಂಪೂರ್ಣ ನಿಷೇಧ

ಬೆಂಗಳೂರು : ಕರ್ನಾಟಕದಲ್ಲಿ ಎಲ್ಲ ಬಗೆಯ ಹುಕ್ಕಾ ಉತ್ಪನ್ನಗಳ ಮಾರಾಟ, ಬಳಕೆ, ಸ್ವಾಧೀನ ಮತ್ತು ಅವುಗಳ ಜಾಹೀರಾತಿನ ಮೇಲೆ ಬುಧವಾರದಿಂದ ಜಾರಿಗೆ ಬರುವಂತೆ ಆರೋಗ್ಯ ಇಲಾಖೆ ತಕ್ಷಣದಿಂದ ನಿಷೇಧಿಸಿದೆ. ಕರ್ನಾಟಕ ಆರೋಗ್ಯ ಇಲಾಖೆಯು ಹುಕ್ಕಾ ಮಾರಾಟ ಮತ್ತು ಸೇವನೆ ನಿಷೇಧಿಸಿ ಬುಧವಾರ ಅಧಿಸೂಚನೆ ಹೊರಡಿಸಿದೆ. ‘ಸಾರ್ವಜನಿಕ ಆರೋಗ್ಯ’ವನ್ನು ಉಲ್ಲೇಖಿಸಿ ಸರ್ಕಾರವು ಹುಕ್ಕಾ ಬಾರ್‌ಗಳಲ್ಲಿ ಹುಕ್ಕಾ ಮಾರಾಟವನ್ನು … Continued