ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ನೂತನ ಅಧ್ಯಕ್ಷರ ನೇಮಕ

ಬೆಂಗಳೂರು: ಹಿಮಾಚಲ ಪ್ರದೇಶ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಲ್‌. ನಾರಾಯಣಸ್ವಾಮಿ ಅವರನ್ನು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೆ, ಜಿಲ್ಲಾ ನಿವೃತ್ತ ನ್ಯಾಯಾಧೀಶ ಎಸ್‌.ಕೆ. ವಂಟಿಗೋಡಿ ಅವರನ್ನು ಆಯೋಗದ ನ್ಯಾಯಾಂಗ ಸದಸ್ಯರಾಗಿ ಹಾಗೂ ನಿವೃತ್ತ ಐಎಎಸ್‌ ಅಧಿಕಾರಿ ಡಾ.ಟಿ.ಶ್ಯಾಂ ಭಟ್‌ ಅವರನ್ನು ಆಡಳಿತಾತ್ಮಕ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ನೂತನ ಅಧ್ಯಕ್ಷರು … Continued

ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸೇವಾವಧಿ ಎರಡು ತಿಂಗಳು ವಿಸ್ತರಣೆ

ಬೆಂಗಳೂರು: ಜಾತಿ ಗಣತಿ ವರದಿ ಕುರಿತಂತೆ ವ್ಯಾಪಕ ಚರ್ಚೆಗಳಾಗುತ್ತಿರುವ ಮಧ್ಯೆಯೇ ರಾಜ್ಯ ಸರ್ಕಾರ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರಾವಧಿಯನ್ನು ವಿಸ್ತರಿಸಿದೆ ಎಂದು ವರದಿಯಾಗಿದೆ. ಹಿಂದುಳಿದ ವರ್ಗಗಳ ಆಯೋಗದ (Backward Classes Commission) ಅಧ್ಯಕ್ಷ ಮತ್ತು ಸದಸ್ಯರ ಅವಧಿ ಎರಡು ತಿಂಗಳು ವಿಸ್ತರಣೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ … Continued

2024ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ : ಮುಂದಿನ ವರ್ಷದ 21 ದಿನಗಳ ರಜೆ ಪಟ್ಟಿ ಇಲ್ಲಿದೆ

ಬೆಂಗಳೂರು: ರಾಜ್ಯ ಸರ್ಕಾರವು 2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2ನೇ ಶನಿವಾರ, 4ನೇ ಶನಿವಾರ ಹಾಗೂ ಭಾನುವಾರದ ರಜಾ ದಿನಗಳನ್ನು ಹೊರತುಪಡಿಸಿ 2024 ರಲ್ಲಿ 21 ಸಾರ್ವತ್ರಿಕ ರಜಾ ದಿನಗಳು ಇರಲಿವೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿದೆ. ಈ ರಜಾ ಪಟ್ಟಿಯಲ್ಲಿ ಭಾನುವಾರಗಳಂದು ಬರುವ … Continued

ಡಿ.ಕೆ. ಶಿವಕುಮಾರ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ: ನವೆಂಬರ್‌ 29ಕ್ಕೆ ವಿಚಾರಣೆ ನಿಗದಿ

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಆದೇಶ ರದ್ದು ಕೋರಿರುವ ಮೇಲ್ಮನವಿ ವಿಚಾರಣೆಯನ್ನು ನವೆಂಬರ್‌ 29ಕ್ಕೆ ಕರ್ನಾಟಕ ಹೈಕೋರ್ಟ್‌ ವಿಚಾರಣೆ ನಿಗದಿಪಡಿಸಿದೆ. ಸಿಬಿಐ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌.ವಿ .ರಾಜು ಅವರು ಮೇಲ್ಮನವಿದಾರರು ಬುಧವಾರ (ನವೆಂಬರ್‌ ೨೨) ವಾದ ಮಂಡನೆ … Continued

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ ಗೋಯಲ್ ನೇಮಕ

ಬೆಂಗಳೂರು : ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ. ನವೆಂಬರ್ 30ರಂದು ಮುಖ್ಯ ಕಾರ್ಯದರ್ಶಿಯಾಗಿರುವ ವಂದಿತಾ ಶರ್ಮಾ ಅವರು ನಿವೃತ್ತಿಯಾಗಲಿರುವ ಹಿನ್ನೆಲೆಯಲ್ಲಿ ರಜನೀಶ ಗೋಯಲ್ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯಾಗಿ ಸರ್ಕಾರ ನೇಮಕ ಮಾಡಿ ಮಂಗಳವಾರ (ನ.21ರಂದು) ಆದೇಶ ಹೊರಡಿಸಿದೆ. ಪ್ರಸ್ತುತ ರಜನೀಶ್ ಗೋಯಲ್ … Continued

ಬೆಂಗಳೂರಿನಲ್ಲಿ ವಿದ್ಯುತ್ ತಗುಲಿ ತಾಯಿ, ಮಗು ಸಾವಿನ ಪ್ರಕರಣ : ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್

ಬೆಂಗಳೂರು: ಕಾಡುಗೋಡಿಯ ಹೋಪ್‌ ಫಾರ್ಮ್ ಬಳಿ ಪಾದಚಾರಿ ಮಾರ್ಗದಲ್ಲಿ ಹೋಗುವಾಗ ಬೆಸ್ಕಾಂ ವಿದ್ಯುತ್ ತಂತಿ ತುಳಿದು ತಾಯಿ, ಮಗು ಮೃತಪಟ್ಟ ಘಟನೆ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಈ ಕುರಿತು ತನ್ನ ವೆಬ್‌ಸೈಟ್‌ನಲ್ಲಿ ಮಂಗಳವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, … Continued

ಮುಜರಾಯಿ ಇಲಾಖೆಗೆ ಸೇರದ ದೇವಸ್ಥಾನಗಳಿಗೂ ವ್ಯವಸ್ಥಾಪನಾ ಸಮಿತಿ ನೇಮಕಕ್ಕೆ ಮುಂದಾದ ಸರ್ಕಾರ : ಸ್ವರ್ಣವಲ್ಲೀ ಶ್ರೀಗಳ ವಿರೋಧ

ಶಿರಸಿ: ಮುಜರಾಯಿ ಇಲಾಖೆಗೆ ಸೇರದ ದೇವಸ್ಥಾನಗಳಿಗೂ ಸರ್ಕಾರ ವ್ಯವಸ್ಥಾಪನಾ ಸಮಿತಿ ನೇಮಕ ಮಾಡಲು ಮುಂದಾಗಿರುವುದನ್ನು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ, ಹಿಂದೂ‌ ಮಹಾ ಮಂಡಳದ ಗೌರವಾಧ್ಯಕ್ಷರಾದ ಸ್ವರ್ಣವಲ್ಲೀ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಖಂಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾರಿತ … Continued

ಗಣಿ-ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿ ಕೊಲೆ ಪ್ರಕರಣ : ಮಾಜಿ ಕಾರು ಚಾಲಕ ವಶಕ್ಕೆ

ಬೆಂಗಳೂರು: ಸಾಕಷ್ಟು ಚರ್ಚೆಗೆ ಕಾರಣವಾಗಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಅಧಿಕಾರಿ ಪ್ರತಿಮಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಆತ ಪ್ರತಿಮಾ ಅವರ ಮಾಜಿ ಕಾರು ಚಾಲಕ ಎನ್ನಲಾಗಿದೆ. ಬಂಧಿತ ವ್ಯಕ್ತಿಯನ್ನು ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣ ಎಂದು ಹೇಳಲಾಗಿದ್ದು, … Continued

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಈ ಬಾರಿ 68 ಸಾಧಕರು, 10 ಸಂಸ್ಥೆಗಳಿಗೆ ಪ್ರಶಸ್ತಿ; ಇಲ್ಲಿದೆ ಪಟ್ಟಿ

ಬೆಂಗಳೂರು: ವಿವಿಧ ಕ್ಷೇತ್ರಗಳ ಆಯ್ದ 68 ಸಾಧಕರು ಮತ್ತು 10 ಸಂಸ್ಥೆಗಳಿಗೆ ಈ ಸಲದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರನ್ನೂ ರಾಜ್ಯೋತ್ಸವ ಪ್ರಶಸ್ತಿಗಾಗಿ ಪರಿಗಣಿಸಿ ಗೌರವಿಸಲಾಗಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಇಸ್ರೋ ಅಧ್ಯಕ್ಷ ಎಸ್‌. ಸೋಮನಾಥನ್‌ … Continued

ದಸರಾ ಗಿಫ್ಟ್ : ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಉಡುಗೊರೆ ನೀಡಿದೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಗ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ. ಯುಜಿಸಿ/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ … Continued