ಹಾಲಿನ ದರ  ಹೆಚ್ಚಿಸಲು ಕೋರಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ ಕೆಎಂಎಫ್‌

ಬೆಂಗಳೂರು: ಹಾಲಿನ ದರವನ್ನು ಪ್ರತಿ ಲೀಟರ್‌ಗೆ 3 ರೂ.ಗಳಂತೆ ಹೆಚ್ಚಿಸಲು ಕೋರಿ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್‌) ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ, ಖಾಸಗಿಯಾಗಿ ಹಾಲು ಮಾರಾಟ ಮಾಡುವ ದರಕ್ಕೆ ಹೋಲಿಸಿದರೆ ಕೆಎಂಎಫ್‌ ಹಾಲಿನ ದರ ಕಡಿಮೆಯಿದೆ. ಹೀಗಾಗಿ, ದರ ಹೆಚ್ಚಿಸುವಂತೆ ಕೋರಲಾಗಿದೆ ಎಂದು ತಿಳಿಸಿದರು. ಖಾಸಗಿ … Continued

ರಾಜ್ಯ ಸರ್ಕಾರದಿಂದ 7 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಕಮೀಷನರ್ ಆಗಿದ್ದ ತುಳಸಿ ಮದ್ದಿನೇನಿ ಅವರನ್ನು ಹಿಂದುಳಿದ ವರ್ಗಾಗಗಳ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದ ಮೇಜರ್ ಮಣಿವಣ್ಣನ್ ಪಿ ಅವರನ್ನು ವರ್ಗಾವಣೆ ಮಾಡಿದೆ. ಬೆಸ್ಕಾಂ ಎಂಡಿಯಾಗಿದ್ದ … Continued

ಬಕ್ರೀದ್ ಹಬ್ಬದಂದು ಗೋಹತ್ಯೆ ಮಾಡುವಂತಿಲ್ಲ : ರಾಜ್ಯ ಸರ್ಕಾರದ ಸೂಚನೆ

ಬೆಂಗಳೂರು: ಜುಲೈ 9 ಹಾಗೂ ಜುಲೈ 10 ರಂದು ದೇಶಾದ್ಯಂತ ಬಕ್ರೀದ್ ಹಬ್ಬ ಆಚರಣೆ ಮಾಡಲಾಗುತ್ತಿದ್ದು, ಹಬ್ಬದಂದು ರಾಜ್ಯದಲ್ಲಿ ಗೋಹತ್ಯೆ ಮಾಡುವಂತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಸೂಚಿಸಿದೆ. ಬಕ್ರೀದ್‌ ದಿನದಂದು ರಾಜ್ಯದಲ್ಲಿ ಗೋಹತ್ಯೆ ಮಾಡದಂತೆ ನೋಡಿಕೊಳ್ಳಲು ಸರ್ಕಾರವು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಹಬ್ಬದ ಸಂದರ್ಭದಲ್ಲಿ ಹಸು, ಕರು, ಎತ್ತು, … Continued

ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ: ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಮೇ 24ರ ವರೆಗೆ ಕಾಲಾವಕಾಶ ನೀಡಿದ ಕೆಎಟಿ

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗಳ (ಪಿಎಸ್‌ಐ) ನೇಮಕಾತಿಗೆ ಸಂಬಂಧಿಸಿದ ಹಗರಣ ಬೆಳಕಿಗೆ ಬಂದ ಬೆನ್ನಲ್ಲೇ ಮರುಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಪಡಿಸುವಂತೆ ಕೋರಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಇಪ್ಪತ್ತೆಂಟು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು (ಕೆಎಸ್‌ಎಟಿ) ಬುಧವಾರ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಮೇ 24ರ ವರೆಗೆ ಕಾಲಾವಕಾಶ … Continued

ಗೋ ಹತ್ಯೆ ನಿಷೇಧ ಕಾಯಿದೆ: ಸೆಕ್ಷನ್ 5 ನಿಯಮ ಜಾರಿಗೆ ಸರ್ಕಾರಕ್ಕೆ ಹೈಕೋರ್ಟ್‌ ಅಸ್ತು

ಬೆಂಗಳೂರು: ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣೆ ನಿಯಮಗಳನ್ನು (ಜಾನುವಾರು ಸಾಗಣೆ 2021ರ ನಿಯಮಗಳು) ರೂಪಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣಾ ಕಾಯಿದೆ- 2020ರ ಸೆಕ್ಷನ್ 5 ಮತ್ತು ಅದರ ಅಡಿ ರೂಪಿಸಿರುವ ನಿಯಮಗಳ ಜಾರಿಗೆ ಸೋಮವಾರ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ್ದು, ಅದು ಅಂತಿಮ ನಿರ್ಧಾರಕ್ಕೆ ಒಳಪಟ್ಟಿರುತ್ತದೆ … Continued

ಕರ್ನಾಟಕದ 346 ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿರುವ ಮಾಹಿತಿ ಲಭ್ಯ

ಬೆಂಗಳೂರು: ಯುದ್ಧಪೀಡಿತ ಉಕ್ರೇನ್‌ನಲ್ಲಿ ಈವರೆಗೆ ರಾಜ್ಯದ 346 ವಿದ್ಯಾರ್ಥಿಗಳು ಸಿಲುಕಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡಲ್‌ ಅಧಿಕಾರ ಮನೋಜ್‌ ರಂಜನ್‌ ತಿಳಿಸಿದ್ದಾರೆ. ಉಕ್ರೇನ್‌ನಲ್ಲಿರುವವರ ಬಗ್ಗೆ ಶುಕ್ರವಾರ ಮಧ್ಯಾಹ್ನ 3 ಗಂಟೆ ವರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಕರೆಗಳು ಬಂದಿವೆ. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್‌ಗೆ ತೆರಳಿರುವವರ ವಿದ್ಯಾರ್ಥಿಗಳ ತಂದೆ-ತಾಯಿ, ಪೋಷಕರು, … Continued

ಎರಡು ಡೋಸ್ ಲಸಿಕೆ ಪಡೆದವರಿಗೆ ಗ್ರೀನ್ ಪಾಸ್ ಕೊಡಲು ಸರ್ಕಾರದ ಚಿಂತನೆ: ಸಚಿವ ಡಾ.ಸುಧಾಕರ

ಬೆಂಗಳೂರು: ಕೊರೊನಾದ ಸಂಭವನೀಯ ಮೂರನೇ ಅಲೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಸರ್ಕಾರ ಎಲ್ಲಾ ತಯಾರಿ ಮಾಡಿಕೊಂಡಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ನಿಯಂತ್ರಣ ಮಾಡಲು ಅಧಿಕಾರಿಗಳಿಗೆ ಹಲವು ಜವಾಬ್ದಾರಿ ಕೊಟ್ಟಿದ್ದೇವೆ. ಎಲ್ಲಾ ಅಧಿಕಾರಿಗಳ ಸಮನ್ವಯದ ಕುರಿತು ಸಭೆ … Continued

ಮುಂದಿನ ಆದೇಶದ ವರೆಗೆ ಕನ್ನಡ ಕಲಿಕೆ ಕಡ್ಡಾಯ ಮಾಡದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಪದವಿ ಹಂತದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ಕನ್ನಡ ಕಲಿಕೆ ಕಡ್ಡಾಯ ಮಾಡುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಗುರುವಾರ ನಿರ್ದೇಶಿಸಿದೆ. ಪದವಿ ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್‌, … Continued

ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಹಬ್ಬದ ಮುಂಗಡ ಹಣ 25 ಸಾವಿರ ರೂಪಾಯಿಗೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡುತ್ತಿರುವ ಹಬ್ಬದ ಮುಂಗಡ ಮೊತ್ತವನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ. ಈಗ ಹಬ್ಬದ ಮುಂಗಡ ಮೊತ್ತವನ್ನು 10 ಸಾವಿರ ರೂಪಾಯಿಗಳಿಂದ 25 ಸಾವಿರ ರೂಪಾಯಿಗಳಿಗೆ ಹೆಚ್ಚಳ ಮಾಡಿ ಆದೇಶ ಮಾಡಲಾಗಿದೆ. ರಾಜ್ಯ ಸಿವಿಲ್ ಸೇವಾ ವೃಂದದಲ್ಲಿ ಕಾಯಂ ಆಗಿ ಸೇರ್ಪಡೆಯಾಗಿರುವ ಅಖಿಲ ಭಾರತ ಸೇವೆಯ ಅಧಿಕಾರಿಗಳು ಸೇರಿದಂತೆ ಒಬ್ಬ … Continued