ರಾಜ್ಯ ಸರ್ಕಾರದಿಂದ ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಚೆಕ್ ಹಸ್ತಾಂತರ

ಬೆಂಗಳೂರು: ರಾಜ್ಯ ಸರ್ಕಾರದಿಂದ ಹುತಾತ್ಮ ಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ ಕುಟುಂಬಕ್ಕೆ 50 ಲಕ್ಷ ರೂ. ಚೆಕ್ ಅನ್ನು ಹಸ್ತಾಂತರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದಂತೆ ಜಿಲ್ಲಾಧಿಕಾರಿ ದಯಾನಂದ ಅವರು ಇಂದು ಮಂಗಳವಾರ ಪ್ರಾಂಜಲ್ ಅವರು ಕುಟುಂಬಕ್ಕೆ ಚೆಕ್ ನೀಡಿದ್ದಾರೆ. ಜಿಲ್ಲಾಧಿಕಾರಿ ದಯಾನಂದ ಅವರು ಪ್ರಾಂಜಲ್‌ ಅವರ ನಿವಾಸಕ್ಕೆ ತೆರಳಿ ಕುಟುಂಬದ ಸದಸ್ಯರಿಗೆ 25 ಲಕ್ಷ ರೂಪಾಯಿ ಮೊತ್ತದ … Continued

ಭ್ರೂಣ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಭ್ರೂಣ ಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈ ಕುರಿತು ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಗೃಹ ಸಚಿವರಿಗೆ ಈ ಸೂಚನೆ ನೀಡಿದ್ದಾರೆ. ಮಂಡ್ಯ ಮತ್ತು ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆ ಭ್ರೂಣ ಹತ್ಯೆ ಜಾಲ ಪತ್ತೆಯಾದ ನಂತರ ಅದರ ಒಂದೊಂದೇ ಕರಾಳ ಮುಖಗಳು ಬಯಲಿಗೆ ಬರುತ್ತಿವೆ. ಬೆಂಗಳೂರಿನ … Continued

ನಿಮ್ಮಲ್ಲಿ ಹಣವಿಲ್ಲವೇ? ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು? : ಗುತ್ತಿಗೆದಾರರ ಬಾಕಿ ಪಾವತಿ ವಿಳಂಬಕ್ಕೆ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ಬೆಂಗಳೂರು : ಗುತ್ತಿಗೆದಾರರ ಬಾಕಿ ಹಣ ಪಾವತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬುಧವಾರ ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಸರ್ಕಾರವೇ ಹೇಳಿರುವಂತೆ ಈಗಾಗಲೇ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಇನ್ನು ಎಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು, ಬಾಕಿ ಪಾವತಿಯಲ್ಲೂ ಹಿರಿತನವೇ?’’ ಎಂದು ಹೈಕೋರ್ಟ್‌ ಖಾರವಾಗಿ ಪ್ರಶ್ನಿಸಿತು. “ನೀವು (ಸರ್ಕಾರ) ನಿಮ್ಮ ದಾಖಲೆಗಳನ್ನೇ ಒಮ್ಮೆ ನೋಡಿ, … Continued

ಡಿಕೆಶಿ ಪ್ರಕರಣದ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮೋದನೆ ವಾಪಸ್‌ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಶಾಸಕ ಯತ್ನಾಳ

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ (D.K.Shivakumar) ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದ ಅನುಮೋದನೆಯನ್ನು ವಾಪಸ್ ಪಡೆದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ ಅವರನ್ನು ತನಿಖೆಯಿಂದ ರಕ್ಷಿಸಲು ಸಿಬಿಐ ತನಿಖೆಗೆ … Continued

ನಿಗಮ ಮಂಡಳಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ್ರೆ ಪಿಐಎಲ್‌ ಸಲ್ಲಿಕೆ : ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ

ಬೆಳಗಾವಿ : ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಿ ಸಂಪುಟ ದರ್ಜೆ ಸ್ಥಾನಮಾನ ನೀಡುವ ಸಂಪ್ರದಾಯ ನಿಲ್ಲಿಸಬೇಕು. ಇಲ್ಲವಾದರೆ ಸರ್ಕಾರದ ವಿರುದ್ಧ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗುವುದು ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗಮ ಮಂಡಳಿ ಅಧ್ಯಕ್ಷರಿಗೆ ಸಂಪುಟ ದರ್ಜೆಯ … Continued

ತೆಲಂಗಾಣದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ : ಕರ್ನಾಟಕ ಸರ್ಕಾರಕ್ಕೆ ಚುನಾವಣಾ ಆಯೋಗದಿಂದ ನೋಟಿಸ್….

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ಮುನ್ನ ತೆಲಂಗಾಣ ದಿನಪತ್ರಿಕೆಗಳಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಜಾಹೀರಾತು ಪ್ರಕಟಿಸುವುದನ್ನು ಚುನಾವಣಾ ಆಯೋಗ ನಿಷೇಧಿಸಿದೆ. ಬಿಜೆಪಿ ಮತ್ತು ಕೆ ಚಂದ್ರಶೇಖರ ರಾವ್ ಅವರ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ(ಬಿಆರ್‌ ಎಸ್‌)ಪಕ್ಷಗಳ ದೂರಿನ ನಂತರ ಚುನಾವಣಾ ಆಯೋಗ ಈ ನಿರ್ಧಾರ ಕೈಗೊಂಡಿದೆ. ಚುನಾವಣಾ ಆಯೋಗವು ಕರ್ನಾಟಕ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ … Continued

ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ನೂತನ ಅಧ್ಯಕ್ಷರ ನೇಮಕ

ಬೆಂಗಳೂರು: ಹಿಮಾಚಲ ಪ್ರದೇಶ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಲ್‌. ನಾರಾಯಣಸ್ವಾಮಿ ಅವರನ್ನು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೆ, ಜಿಲ್ಲಾ ನಿವೃತ್ತ ನ್ಯಾಯಾಧೀಶ ಎಸ್‌.ಕೆ. ವಂಟಿಗೋಡಿ ಅವರನ್ನು ಆಯೋಗದ ನ್ಯಾಯಾಂಗ ಸದಸ್ಯರಾಗಿ ಹಾಗೂ ನಿವೃತ್ತ ಐಎಎಸ್‌ ಅಧಿಕಾರಿ ಡಾ.ಟಿ.ಶ್ಯಾಂ ಭಟ್‌ ಅವರನ್ನು ಆಡಳಿತಾತ್ಮಕ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ನೂತನ ಅಧ್ಯಕ್ಷರು … Continued

ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸೇವಾವಧಿ ಎರಡು ತಿಂಗಳು ವಿಸ್ತರಣೆ

ಬೆಂಗಳೂರು: ಜಾತಿ ಗಣತಿ ವರದಿ ಕುರಿತಂತೆ ವ್ಯಾಪಕ ಚರ್ಚೆಗಳಾಗುತ್ತಿರುವ ಮಧ್ಯೆಯೇ ರಾಜ್ಯ ಸರ್ಕಾರ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರಾವಧಿಯನ್ನು ವಿಸ್ತರಿಸಿದೆ ಎಂದು ವರದಿಯಾಗಿದೆ. ಹಿಂದುಳಿದ ವರ್ಗಗಳ ಆಯೋಗದ (Backward Classes Commission) ಅಧ್ಯಕ್ಷ ಮತ್ತು ಸದಸ್ಯರ ಅವಧಿ ಎರಡು ತಿಂಗಳು ವಿಸ್ತರಣೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ … Continued

2024ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ : ಮುಂದಿನ ವರ್ಷದ 21 ದಿನಗಳ ರಜೆ ಪಟ್ಟಿ ಇಲ್ಲಿದೆ

ಬೆಂಗಳೂರು: ರಾಜ್ಯ ಸರ್ಕಾರವು 2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2ನೇ ಶನಿವಾರ, 4ನೇ ಶನಿವಾರ ಹಾಗೂ ಭಾನುವಾರದ ರಜಾ ದಿನಗಳನ್ನು ಹೊರತುಪಡಿಸಿ 2024 ರಲ್ಲಿ 21 ಸಾರ್ವತ್ರಿಕ ರಜಾ ದಿನಗಳು ಇರಲಿವೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿದೆ. ಈ ರಜಾ ಪಟ್ಟಿಯಲ್ಲಿ ಭಾನುವಾರಗಳಂದು ಬರುವ … Continued

ಡಿ.ಕೆ. ಶಿವಕುಮಾರ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ: ನವೆಂಬರ್‌ 29ಕ್ಕೆ ವಿಚಾರಣೆ ನಿಗದಿ

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಆದೇಶ ರದ್ದು ಕೋರಿರುವ ಮೇಲ್ಮನವಿ ವಿಚಾರಣೆಯನ್ನು ನವೆಂಬರ್‌ 29ಕ್ಕೆ ಕರ್ನಾಟಕ ಹೈಕೋರ್ಟ್‌ ವಿಚಾರಣೆ ನಿಗದಿಪಡಿಸಿದೆ. ಸಿಬಿಐ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌.ವಿ .ರಾಜು ಅವರು ಮೇಲ್ಮನವಿದಾರರು ಬುಧವಾರ (ನವೆಂಬರ್‌ ೨೨) ವಾದ ಮಂಡನೆ … Continued