ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ ಗೋಯಲ್ ನೇಮಕ

ಬೆಂಗಳೂರು : ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ. ನವೆಂಬರ್ 30ರಂದು ಮುಖ್ಯ ಕಾರ್ಯದರ್ಶಿಯಾಗಿರುವ ವಂದಿತಾ ಶರ್ಮಾ ಅವರು ನಿವೃತ್ತಿಯಾಗಲಿರುವ ಹಿನ್ನೆಲೆಯಲ್ಲಿ ರಜನೀಶ ಗೋಯಲ್ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯಾಗಿ ಸರ್ಕಾರ ನೇಮಕ ಮಾಡಿ ಮಂಗಳವಾರ (ನ.21ರಂದು) ಆದೇಶ ಹೊರಡಿಸಿದೆ. ಪ್ರಸ್ತುತ ರಜನೀಶ್ ಗೋಯಲ್ … Continued

ಬೆಂಗಳೂರಿನಲ್ಲಿ ವಿದ್ಯುತ್ ತಗುಲಿ ತಾಯಿ, ಮಗು ಸಾವಿನ ಪ್ರಕರಣ : ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್

ಬೆಂಗಳೂರು: ಕಾಡುಗೋಡಿಯ ಹೋಪ್‌ ಫಾರ್ಮ್ ಬಳಿ ಪಾದಚಾರಿ ಮಾರ್ಗದಲ್ಲಿ ಹೋಗುವಾಗ ಬೆಸ್ಕಾಂ ವಿದ್ಯುತ್ ತಂತಿ ತುಳಿದು ತಾಯಿ, ಮಗು ಮೃತಪಟ್ಟ ಘಟನೆ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಈ ಕುರಿತು ತನ್ನ ವೆಬ್‌ಸೈಟ್‌ನಲ್ಲಿ ಮಂಗಳವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, … Continued

ಮುಜರಾಯಿ ಇಲಾಖೆಗೆ ಸೇರದ ದೇವಸ್ಥಾನಗಳಿಗೂ ವ್ಯವಸ್ಥಾಪನಾ ಸಮಿತಿ ನೇಮಕಕ್ಕೆ ಮುಂದಾದ ಸರ್ಕಾರ : ಸ್ವರ್ಣವಲ್ಲೀ ಶ್ರೀಗಳ ವಿರೋಧ

ಶಿರಸಿ: ಮುಜರಾಯಿ ಇಲಾಖೆಗೆ ಸೇರದ ದೇವಸ್ಥಾನಗಳಿಗೂ ಸರ್ಕಾರ ವ್ಯವಸ್ಥಾಪನಾ ಸಮಿತಿ ನೇಮಕ ಮಾಡಲು ಮುಂದಾಗಿರುವುದನ್ನು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ, ಹಿಂದೂ‌ ಮಹಾ ಮಂಡಳದ ಗೌರವಾಧ್ಯಕ್ಷರಾದ ಸ್ವರ್ಣವಲ್ಲೀ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಖಂಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾರಿತ … Continued

ಗಣಿ-ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿ ಕೊಲೆ ಪ್ರಕರಣ : ಮಾಜಿ ಕಾರು ಚಾಲಕ ವಶಕ್ಕೆ

ಬೆಂಗಳೂರು: ಸಾಕಷ್ಟು ಚರ್ಚೆಗೆ ಕಾರಣವಾಗಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಅಧಿಕಾರಿ ಪ್ರತಿಮಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಆತ ಪ್ರತಿಮಾ ಅವರ ಮಾಜಿ ಕಾರು ಚಾಲಕ ಎನ್ನಲಾಗಿದೆ. ಬಂಧಿತ ವ್ಯಕ್ತಿಯನ್ನು ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣ ಎಂದು ಹೇಳಲಾಗಿದ್ದು, … Continued

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಈ ಬಾರಿ 68 ಸಾಧಕರು, 10 ಸಂಸ್ಥೆಗಳಿಗೆ ಪ್ರಶಸ್ತಿ; ಇಲ್ಲಿದೆ ಪಟ್ಟಿ

ಬೆಂಗಳೂರು: ವಿವಿಧ ಕ್ಷೇತ್ರಗಳ ಆಯ್ದ 68 ಸಾಧಕರು ಮತ್ತು 10 ಸಂಸ್ಥೆಗಳಿಗೆ ಈ ಸಲದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರನ್ನೂ ರಾಜ್ಯೋತ್ಸವ ಪ್ರಶಸ್ತಿಗಾಗಿ ಪರಿಗಣಿಸಿ ಗೌರವಿಸಲಾಗಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಇಸ್ರೋ ಅಧ್ಯಕ್ಷ ಎಸ್‌. ಸೋಮನಾಥನ್‌ … Continued

ದಸರಾ ಗಿಫ್ಟ್ : ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಉಡುಗೊರೆ ನೀಡಿದೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಗ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ. ಯುಜಿಸಿ/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ … Continued

ಕರ್ನಾಟಕ ಶಿಕ್ಷಣ ನೀತಿ ರಚನೆಗೆ ಸಮಿತಿ ರಚನೆ ಮಾಡಿ ಸರ್ಕಾರದ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ರಾಜ್ಯ ಸರ್ಕಾರವು ರಾಜ್ಯ ಶಿಕ್ಷಣ ನೀತಿ ರಚಿಸಿ ಬುಧವಾರ ಆದೇಶ ಹೊರಡಿಸಿದೆ. ಪ್ರೊ. ಸುಖದೇವ ಥೋರಟ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದು, ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಯುಜಿಸಿ ಮಾಜಿ ಅಧ್ಯಕ್ಷ ಪ್ರೊ. … Continued

43 ಹೆಚ್ಚುವರಿ ಬರಪೀಡಿತ ತಾಲೂಕು ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಈಗ ರಾಜ್ಯ ಸರ್ಕಾರವು 21 ಬರಪೀಡಿತ, 22 ಸಾಧಾರಣ ಬರಪೀಡಿತ ತಾಲೂಕುಗಳನ್ನು ಹೆಚ್ಚುವರಿಯಾಗಿ ಘೋಷಿಸಿದೆ. ರಾಜ್ಯದ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಮುಂಗಾರು ಕೊರತೆಯಿಂದ ಭೀಕರ ಬರದ ಛಾಯೆ ಆವರಿಸಿದೆ. ಹೀಗಾಗಿ ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ ಸರ್ಕಾರವು … Continued

ಕಾವೇರಿ ಸಭೆ : ಕಾನೂನು ಸಲಹಾ ಸಮಿತಿ ರಚಿಸಲು ಸಿಎಂಗೆ ತಜ್ಞರ ಸಲಹೆ

ಬೆಂಗಳೂರು : ಕಾವೇರಿ ಸೇರಿದಂತೆ ರಾಜ್ಯದ ಎಲ್ಲಾ ನದಿ ವಿವಾದಗಳಿಗೆ ಸಂಬಂಧಿಸಿದಂತೆ ಕಾನೂನು ಸಲಹಾ ಸಮಿತಿ ರಚಿಸುವಂತೆ ರಾಜ್ಯದ ನಿವೃತ್ತ ನ್ಯಾಯಮೂರ್ತಿಗಳು ಮತ್ತು ಕಾನೂನು ತಜ್ಞರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಾದ ಡಿ ಕೆ ಶಿವಕುಮಾರ ಪಾಲ್ಗೊಂಡಿದ್ದ ಶುಕ್ರವಾರ … Continued

ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಪುನೀತ್ ಕೆರೆಹಳ್ಳಿ ಬಿಡುಗಡೆ

ಬೆಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆರೆಹಳ್ಳಿಯ ಪುನೀತ ಅವರು, ಬೆಂಗಳೂರಿನಲ ಜೆಪಿ ನಗರ 7ನೇ ಹಂತದಲ್ಲಿ ವಾಸವಿದ್ದರು. ಅವರ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿತ್ತು. … Continued