ಇನ್ಮುಂದೆ ವರ್ಗಾವಣೆಗೆ ಸಿಎಂ ಪೂರ್ವಾನುಮತಿ ಕಡ್ಡಾಯ

ಬೆಂಗಳೂರು: ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆ ಮಾಡಲು ಮುಖ್ಯಮಂತ್ರಿಗಳ ಅನುಮತಿ ಕಡ್ಡಾಯ ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಮುಖ್ಯಮಂತ್ರಿಗಳ ಅನುಮತಿ ಪಡೆದ ನಂತರವೇ ಇಲಾಖಾವಾರು ವರ್ಗಾವಣೆ ಮಾಡಬೇಕು. ಯಾವುದೇ ವರ್ಗಾವಣೆ ಮಾಡುವುದಿದ್ದರೂ ಮುಖ್ಯಮಂತ್ರಿಗಳ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಅದರಲ್ಲಿ ತಿಳಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಪರ ಕಾರ್ಯದರ್ಶಿ ಈ ಸುತ್ತೋಲೆ … Continued

ಮಳೆಯಿಂದ ಮನೆಗಳಿಗೆ ಹಾನಿ; ಪರಿಹಾರದ ಮೊತ್ತ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಉಂಟಾದ ಅತಿವೃಷ್ಟಿ/ ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ/ ದುರಸ್ತಿಗೆ ಪರಿಹಾರದ ಮೊತ್ತ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾನಿಯನ್ನು ಎ, ಬಿ, ಸಿ ಎಂದು ಮೂರು ವರ್ಗವಾಗಿ ವಿಂಗಡಿಸಲಾಗಿದೆ. ಸರ್ಕಾರದ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ ಮತ್ತು ನೋಂ & ಮು) ಉಪ ಕಾರ್ಯದರ್ಶಿ ಟಿ. … Continued

ಸುಪ್ರೀಂ ಕೋರ್ಟ್‌, ಹೈಕೋರ್ಟ್‌ ಮೂರು ಪೀಠಗಳಿಗೆ 15 ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳ ನೇಮಕ

ಬೆಂಗಳೂರು: ಸುಪ್ರೀಂ ಕೋರ್ಟ್‌ಗೆ ಐವರು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳ (ಎಎಜಿ) ನೇಮಕಾತಿ ಸೇರಿದಂತೆ ಒಟ್ಟು 15 ಮಂದಿ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ರಾಜ್ಯ ಸರ್ಕಾರವು ಸೋಮವಾರ ಅಧಿಸೂಚನೆ ಪ್ರಕಟಿಸಿದೆ. ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠಕ್ಕೆ ಐವರು, ಕಲಬುರ್ಗಿ ಪೀಠಕ್ಕೆ ಮೂವರು ಮತ್ತು ಧಾರವಾಡ ಪೀಠಕ್ಕೆ ಇಬ್ಬರು ಹೆಚ್ಚುವರಿ ಅಡ್ವೊಕೇಟ್‌ … Continued

ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : ನಾಳೆ (ಜೂನ್‌ 16)ಯಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಆಫ್ ಲೈನ್, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಈ ಕುರಿತು ಮಾಹಿತಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರು, ಶುಕ್ರವಾರದಿಂದ ಫಲಾನುಭವಿಗಳು … Continued

ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಸಾಹಿತಿ ಬರಗೂರು ರಾಮಚಂದ್ರಪ್ಪ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶಾಲಾ ಪಠ್ಯ ಪರಿಷ್ಕರಣೆಗೆ ಮುಂದಾಗಿದೆ. ಈ ಸಂಬಂಧ ಸಾಹಿತಿ ಬರಗೂರು ರಾಮಚಂದ್ರಪ್ಪ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದರು. ಆದರೆ ಬರಗೂರು ರಾಮಚಂದ್ರಪ್ಪ ಅವರು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ಸ್ಥಾನದಿಂದ ಹಿಂದೆ ಸರಿದಿದ್ದಾರೆ. ಶಾಲಾ ಪಠ್ಯ ಪರಿಷ್ಕರಣೆ ಗೊಂದಲ ನಿವಾರಣೆಗೆ … Continued

ಒಡಿಶಾ ರೈಲು ಅಪಘಾತ: ಕರ್ನಾಟಕದ 32 ಕ್ರೀಡಾಪಟುಗಳಿಗೆ ಸರ್ಕಾರದಿಂದ ವಿಮಾನ ಟಿಕೆಟ್

ಬೆಂಗಳೂರು: ಒಡಿಶಾ ರೈಲು ಅಪಘಾತದ ನಂತರ ವಾಲಿಬಾಲ್ ಪಂದ್ಯಾವಳಿಗೆ ತೆರಳಿದ್ದ ಕರ್ನಾಟಕ ಕ್ರೀಡಾಪಟುಗಳಿಗೆ ಕಾರ್ಮಿಕ ಸಚಿವ ಸಂತೋಷ ಲಾಡ್ ವಿಮಾನದ ಮೂಲಕ ಕರ್ನಾಟಕಕ್ಕೆ ಮರಳಲು ಟಿಕೆಟ್ ವ್ಯವಸ್ಥೆ ಮಾಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಾರ್ಮಿಕ ಇಲಾಖೆಯು, ಕರ್ನಾಟಕದ ಬಾಲಕಿಯರು, ಬಾಲಕರು ಮತ್ತು ತರಬೇತುದಾರರು (ವಾಲಿಬಾಲ್ ಪಂದ್ಯಾವಳಿ) ಸೇರಿದಂತೆ ಕೋಲ್ಕತಾಕ್ಕೆ 32 ಮಂದಿ ತೆರಳಿದ್ದರು. ಅವರಿಗೆ … Continued

‘ಯುವನಿಧಿ ಯೋಜನೆ’ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಭರವಸೆಗಳನ್ನು ನೀಡಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಜುಲೈ 2ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು.ವ ಈ ಬೆನ್ನಲ್ಲೇ ಇಂದು ಯುವನಿಧಿ ಯೋಜನೆ ಜಾರಿಗೊಳಿಸಿ ಸರ್ಕಾರ ಆದೇಶ ಮಾಡಿದೆ. ಈ ಸಂಬಂಧ ಇಂದು, ಶುಕ್ರವಾರ ಕೌಶಲ್ಯಾಭಿವೃದ್ಧಿ, … Continued

ಅನ್ನಭಾಗ್ಯ ಯೋಜನೆಯಡಿ ಜುಲೈ1ರಿಂದ 10 ಕೆಜಿ ಉಚಿತ ಅಕ್ಕಿ ವಿತರಣೆ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ಗುರುವಾರ ರಾಜ್ಯ ಸಚಿವ ಸಂಪುಟ ಸಭೆ ಐದು ಗ್ಯಾರಂಟಿ ಯೋಜನೆಗಳಿಗೆ ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ಸಾರ್ವಜನಿಕ ವಿತರಣಾ ಪದ್ದತಿಯಡಿ ವಿತರಿಸಲಾಗಿರುವ ಅಂತ್ಯೋದಯ, ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಯನ್ನು ಹೊದಿರುವ ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯನ್ನು 10 ಕೆಜಿಗೆ ಹೆಚ್ಚಿಸಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಕುರಿತು ಇಂದು ಆಹಾರ, ನಾಗರೀಕ … Continued

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಹೆಚ್ಚಳ ಮಾಡಿದ ರಾಜ್ಯದ ನೂತನ ಸರ್ಕಾರ

ಬೆಂಗಳೂರು: ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ. ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಶೇ. 4ರಷ್ಟು ಹೆಚ್ಚಿಸಿ ಆದೇಶಿಸಿದೆ. ಈ ಕುರಿತು ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರುಗಳಿಗೆ ಈ ವರ್ಷದ ಜನವರಿ 1ರಿಂದ ಜಾರಿಗೆ … Continued

ಮುಸ್ಲಿಮರಿಗೆ ಮೀಸಲು ರದ್ದು ಆದೇಶ ಮೇ 9ರ ವರೆಗೆ ಜಾರಿಗೆ ತರುವುದು ಬೇಡ: ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಸೂಚನೆ

ನವದೆಹಲಿ: ಮುಸ್ಲಿಂ ಸಮುದಾಯಕ್ಕೆ ಹಿಂದುಳಿದ ವರ್ಗದ ಅಡಿ ಕಲ್ಪಿಸಿದ್ದ ಶೇ. 4 ರಷ್ಟು ಮೀಸಲಾತಿಯನ್ನು ಹಿಂಪಡೆದಿರುವ ಕರ್ನಾಟಕ ಸರ್ಕಾರದ ಆದೇಶವನ್ನು ಆದೇಶವನ್ನು ಮೇ 9ರ ವರೆಗೆ ಜಾರಿಗೊಳಿಸದಂತೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ. ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಕೋರಿದ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಲಾಗಿದೆ. ಅಲ್ಲಿಯವರೆಗೆ ಹಿಂದಿನ ಆದೇಶ … Continued