`ಹಡಪದ ಅಭಿವೃದ್ಧಿ ನಿಗಮ’ ಸ್ಥಾಪಿಸಲು ರಾಜ್ಯ ಸರ್ಕಾರದ ಆದೇಶ

ಬೆಂಗಳೂರು : ಕರ್ನಾಟಕ ಹಡಪದ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಕ್ರಮ ಸಂಖ್ಯೆ 8(ಜಿ)ನಲ್ಲಿ ಬರುವ ಹಡಪದ ಜಾತಿಗೆ ಶೈಕ್ಷಣಿಕ ಮತ್ತು ಔದ್ಯೋಗಿಕ ಮೀಸಲಾತಿಯನ್ನು ಕಲ್ಪಿಸಲಾಗಿದೆ. ಈಗ ಹಡಪದ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಿಗಮ ಸ್ಥಾಪಿಸಲು ಸರ್ಕಾರ … Continued

ಜನಾರ್ದನ ರೆಡ್ಡಿಗೆ ಸೇರಿದ ಹೆಚ್ಚುವರಿ ಆಸ್ತಿ ಜಪ್ತಿ ಪ್ರಕ್ರಿಯೆ ಅನುಮತಿಗೆ ವಿಳಂಬ; ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸಿಬಿಐ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಸೇರಿದ ಹೆಚ್ಚುವರಿ ಆಸ್ತಿಗಳ ಜಪ್ತಿಗೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಅನುಮತಿ ಕೋರಿ ಸಲ್ಲಿಸಿರುವ ಮನವಿಯನ್ನು ತುರ್ತಾಗಿ ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಕೇಂದ್ರೀಯ ತನಿಖಾ ದಳವು (ಸಿಬಿಐ) ಬುಧವಾರ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ … Continued

ಓಲಾ, ಉಬರ್‌ ಆಟೋ ಸರ್ವಿಸ್‌ : ಶೇ.5 ಸೇವಾ ಶುಲ್ಕ, ಜಿಎಸ್‌ಟಿ ಸೇರಿಸಿ ಪ್ರಯಾಣ ದರ ನಿಗದಿ ಕುರಿತು ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ. 5 ಜಿಎಸ್‌ಟಿ ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ನಿರ್ದೇಶಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಸೋಮವಾರ ತಿಳಿಸಿದೆ. ಆ್ಯಪ್ ಆಧಾರಿತ ಓಲಾ ಮತ್ತು ಉಬರ್ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸಬೇಕು ಎಂಬ ರಾಜ್ಯ ಸರ್ಕಾರದ … Continued

ದತ್ತಪೀಠಕ್ಕೆ ಎಂಟು ಸದಸ್ಯರ ಆಡಳಿತ ಮಂಡಳಿ ರಚನೆ: ಅರ್ಚಕರ ನೇಮಕಕ್ಕೂ ಅಧಿಕಾರ

ಚಿಕ್ಕಮಗಳೂರು : ಚಿಕ್ಕಮಗಳೂರು ತಾಲೂಕಿನ ದತ್ತಪೀಠಕ್ಕೆ ಸರ್ಕಾರ ಎಂಟು ಸದಸ್ಯರ ಆಡಳಿತ ಮಂಡಳಿ ರಚನೆ ಮಾಡಿ ಆದೇಶ ಹೊರಡಿಸಿದೆ. ಆಡಳಿತ ಮಂಡಳಿಗೆ ದತ್ತಪೀಠಕ್ಕೆ ಅರ್ಚಕರ ನೇಮಕ ಕುರಿತಂತೆ ನಿರ್ಧಾರ ಮಾಡುವ ಅಧಿಕಾರ ನೀಡಲಾಗಿದೆ. ರಾಜ್ಯ ಸರ್ಕಾರ ಇಂದು ಎಂಟು ಜನರ ಆಡಳಿತ ಮಂಡಳಿ ಸದಸ್ಯರನ್ನ ನೇಮಕ ಮಾಡಿದ್ದು, ಇದರಲ್ಲಿ ಇಬ್ಬರು ಮಹಿಳೆಯರು, ಒಬ್ಬರು ಮುಸ್ಲಿಂ ವ್ಯಕ್ತಿ … Continued

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ ಕಶ್ಯಪ ನೇಮಕ

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಕನ್ನಡದ ಖ್ಯಾತ ಸಿನಿಮಾಟೋಗ್ರಾಫರ್ ಅಶೋಕ್ ಕಶ್ಯಪ್ (Ashok Kashyap) ಅವರನ್ನು ನೇಮಕ ಮಾಡಿ, ಸರಕಾರ ಆದೇಶ ಹೊರಡಿಸಿದೆ. ಸುನೀಲ ಪುರಾಣಿಕ ಅವರಿಂದ ಈ ಸ್ಥಾನ ತೆರುವಾಗಿತ್ತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವ್ಯಾಪ್ತಿಯ ಕರ್ನಾಟಕ ಚಲನಚಿತ್ರ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷರ ಹುದ್ದೆಗೆ ತಕ್ಷಣದಿಂದ ಜಾರಿಗೆ … Continued

ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಗರಿಷ್ಠ ವಯೋಮಿತಿ ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ( Karnataka Police Department ) ಖಾಲಿ ಇರುವ 5075 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇದಕ್ಕೆ ಗರಿಷ್ಠ ವಯೋಮಿತಿಯನ್ನು ಎರಡು ವರ್ಷ ಹೆಚ್ಚಳ ಮಾಡಲಾಗಿದ್ದು, ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಸಿವಿಲ್‌, ಸಿಎಆರ್‌ (CAR), ಡಿಎಆರ್‌ (DAR) ಪೊಲೀಸ್ ಕಾನ್ಸ್‌ಟೇಬಲ್‌ … Continued

ರಾಜ್ಯ ಸರ್ಕಾರದಿಂದ 8 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ಎಂಟು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಐಎಎಸ್ ಅಧಿಕಾರಿ ಶೆಟ್ಟೆಣ್ಣನವರ್ ಎಸ್. ಬಿ. ಅವರನ್ನು ಹಟ್ಟಿ ಗೋಲ್ಡ್ ಮೈನಿಂಗ್ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಮಂಜುನಾಥ್ ಜೆ ಅವರನ್ನು ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಅನ್ನೀಸ್ ಕಣ್ಮಣಿ ಜೋಯ್ ಅವರನ್ನು ಬೆಂಗಳೂರಿನ ಕಮರ್ಷಿಯಲ್ ಟ್ಯಾಕ್ಸ್‌ನ ಹೆಚ್ಚುವರಿ ಆಯುಕ್ತರನ್ನಾಗಿ ನೇಮಿಸಿದೆ. ಚಾರುಲತಾ … Continued

ಆಟೋರಿಕ್ಷಾ ಸೇವೆ: ಸರ್ಕಾರ ನಿಗದಿಪಡಿಸಿದ ದರದ ಜೊತೆಗೆ ಶೇ. 10 ದರ ವಿಧಿಸಲು ಓಲಾ, ಉಬರ್‌ಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಆಟೋರಿಕ್ಷಾ ಸೇವೆಗಳಿಗೆ 2021ರ ನವೆಂಬರ್‌ನಲ್ಲಿ ರಾಜ್ಯ ಸರ್ಕಾರ ನಿಗದಿಪಡಿಸಿರುವ ದರದ ಜೊತೆಗೆ ಹೆಚ್ಚುವರಿಯಾಗಿ ಶೇ. 10ರಷ್ಟು ದರ ಮತ್ತು ಸರಕು ಹಾಗೂ ಸೇವಾ ತೆರಿಗೆ(ಜಿಎಸ್‌ಟಿ)ಯನ್ನು ವಿಧಿಸುವ ಮೂಲಕ ಆ್ಯಪ್‌ ಆಧರಿತ ಓಲಾ ಮತ್ತು ಉಬರ್‌ ಆಟೋರಿಕ್ಷಾ ಸೇವೆ ಮುಂದುವರಿಸಬಹುದು ಎಂದು ಹೈಕೋರ್ಟ್‌ ಶುಕ್ರವಾರ ಆದೇಶ ಮಾಡಿದೆ. ಓಲಾ ಮತ್ತು ಉಬರ್‌ ಇನ್ನು ಮುಂದೆ ತಮ್ಮ … Continued

ಬಾಬಾ ಬುಡನ್‌ಗಿರಿ-ದತ್ತಾತ್ರೇಯ ಪೀಠ: ಪ್ರತಿ ಆಕ್ಷೇಪಣೆಗೆ ರಾಜ್ಯ ಸರ್ಕಾರಕ್ಕೆ ಮೂರು ವಾರ ಕಾಲಾವಕಾಶ ನೀಡಿದ ಹೈಕೋರ್ಟ್‌

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ಗಿರಿಯ ದತ್ತಾತ್ರೇಯ ಪೀಠದಲ್ಲಿ ಹಿಂದೂ ಧರ್ಮಗಳು ಹಾಗೂ ಇಸ್ಲಾಂ ಧರ್ಮಗಳ ಸಂಪ್ರದಾಯಗಳಂತೆ ಪೂಜಾ ವಿಧಿವಿಧಾನ ನೆರವೇರಿಸಲು ಅವಕಾಶ ಕಲ್ಪಿಸಲು ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯಕ್ಕೆ ಮೌಲ್ವಿ ಸೈಯದ್ ಗೌಸ್ ಮೊಹಿಯುದ್ದೀನ್ ಎತ್ತಿರುವ ಆಕ್ಷೇಪಣೆಗೆ ಪ್ರತಿ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಮೂರು ವಾರಗಳ ಕಾಲಾವಕಾಶ ನೀಡಿದೆ … Continued

ವಿದ್ಯುತ್ ದರ ಏರಿಕೆ: ಹಿಂಪಡೆಯಲು ರಾಜ್ಯ ಸರ್ಕಾರದ ಚಿಂತನೆ…?

ಬೆಂಗಳೂರು: ವಿದ್ಯುತ್‌ದರ ಏರಿಕೆಗೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾದ ನಂತರ ರಾಜ್ಯ ಸರ್ಕಾರ ದರ ಏರಿಕೆ ಹಿಂಪಡೆಯುವ ಕುರಿತು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಇಂಧನ ಸಚಿವ ವಿ.ಸುನಿಲಕುಮಾರ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿ ದರ ಏರಿಕೆ ಹಿಂಪಡೆಯುವ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಈ ತಿಂಗಳು ಅಕ್ಟೋಬರ್‌ 1ರಿಂದ ಅನ್ವಯವಾಗುವಂತೆ ವಿದ್ಯುತ್‌ನ … Continued