ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ಬೆಂಗಳೂರು: ಹೊಸನಗರದ ರಾಮಚಂದ್ರಾಪುರ ಮಠವೂ ಸೇರಿ ರಾಜ್ಯದಲ್ಲಿರುವ ಎಲ್ಲ ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂಬ ಕೋರಿಕೆಯನ್ನು ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದ್ದು, ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಗುರುವಾರ ಇತ್ಯರ್ಥಪಡಿಸಿದೆ. ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು. ರಾಮಚಂದ್ರಾಪುರ ಮಠದ ಪೀಠಾಧಿಪತಿ ಸ್ಥಾನದಿಂದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು … Continued

ಜಿಪಂ-ತಾಪಂ ಕ್ಷೇತ್ರಗಳ ಮರುವಿಂಗಡಣೆ ಮೀಸಲು ನಿಗದಿ: ಸರ್ಕಾರಕ್ಕೆ ಮತ್ತೆ 12 ವಾರಗಳ ಕಾಲಾವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಕ್ಷೇತ್ರಗಳ ಮರು ವಿಂಗಡಣೆ ಮತ್ತು ಮೀಸಲು ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಲು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಮತ್ತೆ 12 ವಾರ ಕಾಲಾವಕಾಶ ನೀಡಿದೆ. ರಾಜ್ಯದಲ್ಲಿ ಜಿಪಂ ಹಾಗೂ ತಾಪಂ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್‌ ಪಡೆದು, ಕರ್ನಾಟಕ ಪಂಚಾಯತ್‌ … Continued

ಹಾಲಿನ ದರ  ಹೆಚ್ಚಿಸಲು ಕೋರಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ ಕೆಎಂಎಫ್‌

ಬೆಂಗಳೂರು: ಹಾಲಿನ ದರವನ್ನು ಪ್ರತಿ ಲೀಟರ್‌ಗೆ 3 ರೂ.ಗಳಂತೆ ಹೆಚ್ಚಿಸಲು ಕೋರಿ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್‌) ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ, ಖಾಸಗಿಯಾಗಿ ಹಾಲು ಮಾರಾಟ ಮಾಡುವ ದರಕ್ಕೆ ಹೋಲಿಸಿದರೆ ಕೆಎಂಎಫ್‌ ಹಾಲಿನ ದರ ಕಡಿಮೆಯಿದೆ. ಹೀಗಾಗಿ, ದರ ಹೆಚ್ಚಿಸುವಂತೆ ಕೋರಲಾಗಿದೆ ಎಂದು ತಿಳಿಸಿದರು. ಖಾಸಗಿ … Continued

ರಾಜ್ಯ ಸರ್ಕಾರದಿಂದ 7 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಕಮೀಷನರ್ ಆಗಿದ್ದ ತುಳಸಿ ಮದ್ದಿನೇನಿ ಅವರನ್ನು ಹಿಂದುಳಿದ ವರ್ಗಾಗಗಳ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದ ಮೇಜರ್ ಮಣಿವಣ್ಣನ್ ಪಿ ಅವರನ್ನು ವರ್ಗಾವಣೆ ಮಾಡಿದೆ. ಬೆಸ್ಕಾಂ ಎಂಡಿಯಾಗಿದ್ದ … Continued

ಬಕ್ರೀದ್ ಹಬ್ಬದಂದು ಗೋಹತ್ಯೆ ಮಾಡುವಂತಿಲ್ಲ : ರಾಜ್ಯ ಸರ್ಕಾರದ ಸೂಚನೆ

ಬೆಂಗಳೂರು: ಜುಲೈ 9 ಹಾಗೂ ಜುಲೈ 10 ರಂದು ದೇಶಾದ್ಯಂತ ಬಕ್ರೀದ್ ಹಬ್ಬ ಆಚರಣೆ ಮಾಡಲಾಗುತ್ತಿದ್ದು, ಹಬ್ಬದಂದು ರಾಜ್ಯದಲ್ಲಿ ಗೋಹತ್ಯೆ ಮಾಡುವಂತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಸೂಚಿಸಿದೆ. ಬಕ್ರೀದ್‌ ದಿನದಂದು ರಾಜ್ಯದಲ್ಲಿ ಗೋಹತ್ಯೆ ಮಾಡದಂತೆ ನೋಡಿಕೊಳ್ಳಲು ಸರ್ಕಾರವು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಹಬ್ಬದ ಸಂದರ್ಭದಲ್ಲಿ ಹಸು, ಕರು, ಎತ್ತು, … Continued

ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ: ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಮೇ 24ರ ವರೆಗೆ ಕಾಲಾವಕಾಶ ನೀಡಿದ ಕೆಎಟಿ

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗಳ (ಪಿಎಸ್‌ಐ) ನೇಮಕಾತಿಗೆ ಸಂಬಂಧಿಸಿದ ಹಗರಣ ಬೆಳಕಿಗೆ ಬಂದ ಬೆನ್ನಲ್ಲೇ ಮರುಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಪಡಿಸುವಂತೆ ಕೋರಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಇಪ್ಪತ್ತೆಂಟು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು (ಕೆಎಸ್‌ಎಟಿ) ಬುಧವಾರ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಮೇ 24ರ ವರೆಗೆ ಕಾಲಾವಕಾಶ … Continued

ಗೋ ಹತ್ಯೆ ನಿಷೇಧ ಕಾಯಿದೆ: ಸೆಕ್ಷನ್ 5 ನಿಯಮ ಜಾರಿಗೆ ಸರ್ಕಾರಕ್ಕೆ ಹೈಕೋರ್ಟ್‌ ಅಸ್ತು

ಬೆಂಗಳೂರು: ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣೆ ನಿಯಮಗಳನ್ನು (ಜಾನುವಾರು ಸಾಗಣೆ 2021ರ ನಿಯಮಗಳು) ರೂಪಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣಾ ಕಾಯಿದೆ- 2020ರ ಸೆಕ್ಷನ್ 5 ಮತ್ತು ಅದರ ಅಡಿ ರೂಪಿಸಿರುವ ನಿಯಮಗಳ ಜಾರಿಗೆ ಸೋಮವಾರ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ್ದು, ಅದು ಅಂತಿಮ ನಿರ್ಧಾರಕ್ಕೆ ಒಳಪಟ್ಟಿರುತ್ತದೆ … Continued

ಕರ್ನಾಟಕದ 346 ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿರುವ ಮಾಹಿತಿ ಲಭ್ಯ

ಬೆಂಗಳೂರು: ಯುದ್ಧಪೀಡಿತ ಉಕ್ರೇನ್‌ನಲ್ಲಿ ಈವರೆಗೆ ರಾಜ್ಯದ 346 ವಿದ್ಯಾರ್ಥಿಗಳು ಸಿಲುಕಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡಲ್‌ ಅಧಿಕಾರ ಮನೋಜ್‌ ರಂಜನ್‌ ತಿಳಿಸಿದ್ದಾರೆ. ಉಕ್ರೇನ್‌ನಲ್ಲಿರುವವರ ಬಗ್ಗೆ ಶುಕ್ರವಾರ ಮಧ್ಯಾಹ್ನ 3 ಗಂಟೆ ವರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಕರೆಗಳು ಬಂದಿವೆ. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್‌ಗೆ ತೆರಳಿರುವವರ ವಿದ್ಯಾರ್ಥಿಗಳ ತಂದೆ-ತಾಯಿ, ಪೋಷಕರು, … Continued

ಎರಡು ಡೋಸ್ ಲಸಿಕೆ ಪಡೆದವರಿಗೆ ಗ್ರೀನ್ ಪಾಸ್ ಕೊಡಲು ಸರ್ಕಾರದ ಚಿಂತನೆ: ಸಚಿವ ಡಾ.ಸುಧಾಕರ

ಬೆಂಗಳೂರು: ಕೊರೊನಾದ ಸಂಭವನೀಯ ಮೂರನೇ ಅಲೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಸರ್ಕಾರ ಎಲ್ಲಾ ತಯಾರಿ ಮಾಡಿಕೊಂಡಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ನಿಯಂತ್ರಣ ಮಾಡಲು ಅಧಿಕಾರಿಗಳಿಗೆ ಹಲವು ಜವಾಬ್ದಾರಿ ಕೊಟ್ಟಿದ್ದೇವೆ. ಎಲ್ಲಾ ಅಧಿಕಾರಿಗಳ ಸಮನ್ವಯದ ಕುರಿತು ಸಭೆ … Continued