ಮುಂದಿನ ಆದೇಶದ ವರೆಗೆ ಕನ್ನಡ ಕಲಿಕೆ ಕಡ್ಡಾಯ ಮಾಡದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಪದವಿ ಹಂತದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ಕನ್ನಡ ಕಲಿಕೆ ಕಡ್ಡಾಯ ಮಾಡುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಗುರುವಾರ ನಿರ್ದೇಶಿಸಿದೆ. ಪದವಿ ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್‌, … Continued

ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಹಬ್ಬದ ಮುಂಗಡ ಹಣ 25 ಸಾವಿರ ರೂಪಾಯಿಗೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡುತ್ತಿರುವ ಹಬ್ಬದ ಮುಂಗಡ ಮೊತ್ತವನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ. ಈಗ ಹಬ್ಬದ ಮುಂಗಡ ಮೊತ್ತವನ್ನು 10 ಸಾವಿರ ರೂಪಾಯಿಗಳಿಂದ 25 ಸಾವಿರ ರೂಪಾಯಿಗಳಿಗೆ ಹೆಚ್ಚಳ ಮಾಡಿ ಆದೇಶ ಮಾಡಲಾಗಿದೆ. ರಾಜ್ಯ ಸಿವಿಲ್ ಸೇವಾ ವೃಂದದಲ್ಲಿ ಕಾಯಂ ಆಗಿ ಸೇರ್ಪಡೆಯಾಗಿರುವ ಅಖಿಲ ಭಾರತ ಸೇವೆಯ ಅಧಿಕಾರಿಗಳು ಸೇರಿದಂತೆ ಒಬ್ಬ … Continued

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಕರ್ನಾಟಕ ಸರ್ಕಾರದ ವಿರೋಧ: ಕೇಂದ್ರಕ್ಕೆ ತಿಳಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಈ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಹಾಗೂ ಈ ಭಾಗದ ಜನತೆ ವಿರೋಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಅವರು ಶನಿವಾರ ಪಶ್ಚಿಮ ಘಟ್ಟದ ಕಸ್ತೂರಿ ರಂಗನ್ ವರದಿ ಜಾರಿ … Continued

ಪ್ರೊ. ಭಗವಾನ್‌ ವಿರುದ್ಧ ಕ್ರಮಕೈಗೊಳ್ಳಲು ಅನುಮತಿ ವಿಳಂಬ: ಸರ್ಕಾರದ ವಿರುದ್ಧ ಹೈಕೋರ್ಟ್‌ ಅಸಮಾಧಾನ

ಬೆಂಗಳೂರು: ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ಸಾಹಿತಿ ಪ್ರೊ. ಕೆ. ಎಸ್. ಭಗವಾನ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್ ಗುರುವಾರ ಅಸಮಾಧಾನ ವ್ಯಕ್ತಪಡಿಸಿದೆ. ಸಾಗರ ತಾಲ್ಲೂಕಿನ ಇಕ್ಕೇರಿಯ ಮಹಾಬಲೇಶ್ವರ ಮಾಪು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ … Continued

ಕನ್ನಡ ಕಡ್ಡಾಯ: ರಾಜ್ಯ ಸರ್ಕಾರ ತನ್ನ ನೀತಿ ಮರು ಪರಿಶೀಲಿಸಬೇಕು ಎಂದ ಹೈಕೋರ್ಟ್‌

ಬೆಂಗಳೂರು: ಪದವಿ ಶಿಕ್ಷಣದ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡವನ್ನು ಕಡ್ಡಾಯಗೊಳಿಸಲಾಗದು. ರಾಜ್ಯ ಸರ್ಕಾರವು ಕನ್ನಡ ಕಡ್ಡಾಯ ಮಾಡಿರುವ ತನ್ನ ನೀತಿ ಮರುಪರಿಶೀಲಿಸಬೇಕು. ನಿಮ್ಮ (ಸರ್ಕಾರ) ನೀತಿಯನ್ನು ಮರು ಪರಿಶೀಲಿಸದಿದ್ದರೆ ನಾವು ತಡೆಯಾಜ್ಞೆ ನೀಡಬೇಕಾಗುತ್ತದೆ” ಎಂದು ಮಂಗಳವಾರ ಕರ್ನಾಟಕ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. ರಾಜ್ಯ ಸರ್ಕಾರವು ಪದವಿ ಹಂತದಲ್ಲಿ … Continued

ಸಮವಸ್ತ್ರದಲ್ಲಿ ವಿದ್ಯಾರ್ಥಿಗಳ ವಿಚಾರಣೆ ನಡೆಸಿದ್ದ ಪೊಲೀಸರ ವಿರುದ್ಧ ಕ್ರಮ: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಬೀದರ್‌ನ ಶಾಹೀನ್‌ ಶಾಲೆಯಲ್ಲಿ ಸಮವಸ್ತ್ರ ಧರಿಸಿ ಮತ್ತು ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು 4, 5 ಮತ್ತು 6ನೇ ತರಗತಿ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ್ದ ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರವು ಶುಕ್ರವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಬೀದರಿನ ಶಾಹೀನ್‌ ಶಾಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯಿದೆಗೆ (ಸಿಎಎ) ಸಂಬಂಧಿಸಿದಂತೆ ಕಳೆದ ವರ್ಷ … Continued

ಸಿದ್ದಗಂಗಾ ಮಠ – ಮೀರಾಬಾಯಿ ಕೊಪ್ಪಿಕರಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಡುವ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ” 2020 ಮತ್ತು 2021 ನೇ ಸಾಲಿಗೆ ಎರಡು ವರ್ಷಗಳ ಪ್ರಶಸ್ತಿ ಪ್ರಕಟಿಸಿದೆ. ಕೋವಿಡ್- 19ರ ಹಿನ್ನಲೆಯಲ್ಲಿ ಕಳೆದ ವರ್ಷದ ಪ್ರಶಸ್ತಿಯನ್ನು ಸರ್ಕಾರ ಪ್ರಕಟಿಸಿರಲಿಲ್ಲ, ಈ ವರ್ಷ ಕೋವಿಡ್ ಪ್ರಕರಣ ಕಡಿಮೆಯಾಗುತ್ತಾ ಬಂದಿರುವ ಹಿನ್ನೆಲೆಯಲ್ಲಿ, ಸಕಾರವು ಈ … Continued

ನಿಗಮ, ಮಂಡಳಿಗಳಲ್ಲಿ ತೃತೀಯ ಲಿಂಗಿಗಳಿಗೆ ಮೀಸಲಾತಿ: ರಾಜ್ಯ ಸರ್ಕಾರಕ್ಕೆ ಕೊನೆಯ ಅವಕಾಶ ನೀಡಿದ ಹೈಕೋರ್ಟ್‌

ಬೆಂಗಳೂರು: ರಾಜ್ಯ ಸರ್ಕಾರದ ಪ್ರಾಧಿಕಾರಗಳು ಮತ್ತು ನಿಗಮ ಮಂಡಳಿಗಳ ನೇಮಕಾತಿಗಳಲ್ಲಿ ತೃತೀಯ ಲಿಂಗಿಗಳಿಗೆ ಶೇ.1ರಷ್ಟು ಸಮತಲ ಮೀಸಲಾತಿ ಕಲ್ಪಿಸುವಂತೆ ಸಲಹೆ ನೀಡುವ ವಿಚಾರದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ ಕೊನೆಯದಾಗಿ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ ಎಂದು ಬಾರ್‌ ಎಂಡ್‌ ಬೆಂಚ್‌ ವರದಿ ಮಾಡಿದೆ. ಲೈಂಗಿಕ ಅಲ್ಪಸಂಖ್ಯಾತರು, ಎಚ್‌ಐವಿ ಪೀಡಿತರ … Continued

1,242 ಸಹಾಯಕ ಪ್ರಾಧ್ಯಾಪಕ’ರ ಹುದ್ದೆಗೆ ಸರ್ಕಾರದಿಂದ ಅಧಿಸೂಚನೆ

ಬೆಂಗಳೂರು:ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ 1,242 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಈ ಕುರಿತು ಉನ್ನತ ಶಿಕ್ಷಣ ಇಲಾಖೆ ( ಕಾಲೇಜು ಶಿಕ್ಷಣ ) ಸರ್ಕಾರದ ಅಧೀನ ಕಾರ್ಯದರ್ಶಿ ಎಸ್. ಹರ್ಷ ಅಧಿಸೂಚನೆ ಹೊರಡಿಸಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿ … Continued

ನಾಳೆ ಸಾರಿಗೆ ನೌಕರರ ಮುಷ್ಕರ, ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ

ಬೆಂಗಳೂರು: ತಮ್ಮ ಬೇಡಿಕೆಗಳು ಈಡೇರದ ಕಾರಣಕ್ಕೆ ಏ.೭ರಂದು ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಹೀಗಾಗಿ ಬಸ್‌ ಸಂಚಾರಬಹುತೇಕ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಸರ್ಕಾರವು ಮುಷ್ಕರವನ್ನು ಹಿಂಪಡೆಯುವಂತೆ ಸಾರಿಗೆ ನೌಕರರಲ್ಲಿ ಮಾತುಕತೆ ನಡೆಸಿದರೂ ವಿಫಲವಾಗಿದ್ದು, ಹೀಗಾಗಿ ಸರ್ಕಾರವು ಮುಷ್ಕರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಜೊತೆಗೆ ಸದ್ಯದ ಸ್ಥಿತಿಯಲ್ಲಿ ಸಾರಿಗೆ ನೌಕರರಿಗೆ 6ನೇ ವೇತನ … Continued