ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಇಂದು, ಶುಕ್ರವಾರ ಬೆಂಗಳೂರಿನ ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ವಿಭು ಬಖ್ರು ಅವರು ಸುಧಾ ಯಾದವ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನಿರ್ಗಮಿತ … Continued

ವಂದೇ ಮಾತರಂ ಗೀತೆ ಎರಡು ಚರಣಕ್ಕೆ ಸೀಮಿತ ; ಸರ್ಕಾರದ ನಿರ್ಧಾರಕ್ಕೆ ರಾಜ್ಯಪಾಲರ ಆಕ್ಷೇಪ ; ಸಿಎಂಗೆ ಪತ್ರ

ಬೆಂಗಳೂರು : ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರಚಂದ ಗೆಹ್ಲೋತ್ ಆಕ್ಷೇಪಿಸಿದ್ದಾರೆ. ಸೆಪ್ಟೆಂಬರ್ 21ರಂದು ಮುಖ್ಯಮಂತ್ರಿಗೆ ಬರೆದಿರುವ ಪತ್ರದಲ್ಲಿ, ಸೆಪ್ಟೆಂಬರ್ 8ರಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶವು ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ರಾಜ್ಯಪಾಲರು … Continued

ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲರ ನಿರಾಕರಣೆ : ಸರ್ಕಾರದಿಂದ ಮನವೊಲಿಸುವ ಯತ್ನ

ಬೆಂಗಳೂರು: ಜನವರಿ 22 ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ. ರಾಜ್ಯಪಾಲರ ಈ ಅನಿರೀಕ್ಷಿತ ನಿರ್ಧಾರದ ಬೆನ್ನಲ್ಲೇ, ರಾಜ್ಯ ಸರ್ಕಾರವು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲು ತೀರ್ಮಾನಿಸಿದೆ. ರಾಜ್ಯಪಾಲರ ಈ ನಿರ್ಧಾರಕ್ಕೆ ನಿಖರವಾದ ಕಾರಣಗಳು ಅಧಿಕೃತವಾಗಿ ಇನ್ನು ಬಹಿರಂಗವಾಗಿಲ್ಲ. ರಾಜ್ಯದ ಕಾಂಗ್ರೆಸ್‌ ಸರ್ಕಾರದ … Continued

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಮಸೂದೆ ರಾಷ್ಟ್ರಪತಿಗೆ ರವಾನಿಸಿದ ಕರ್ನಾಟಕದ ರಾಜ್ಯಪಾಲ

ಬೆಂಗಳೂರು: ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ (Muslim reservation) ನೀಡುವ ರಾಜ್ಯದ ವಿಧೇಯಕವನ್ನು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಗಾಗಿ ಕಳುಹಿಸಿದ್ದಾರೆ. ಈ ವಿಧೇಯಕ ವಿಧಾನಮಂಡಲದಲ್ಲಿ ಅಂಗೀಕಾರಗೊಂಡಿತ್ತು. ನಂತರ ರಾಜ್ಯಪಾಲರ ಬಳಿ ಹೋಗಿತ್ತು. ಇದೀಗ ಈ ವಿಧೇಯಕವನ್ನು ರಾಜ್ಯಪಾಲರು ರಾಷ್ಟ್ರಪತಿ ಒಪ್ಪಿಗೆಗೆ ಕಳುಹಿಸಿದ್ದಾರೆ. “ಸಂವಿಧಾನವು ಧರ್ಮದ ಆಧಾರದ ಮೇಲೆ … Continued

ಮುಡಾ ಹಗರಣ | ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ ಜನವರಿ 25ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಸೆಕ್ಷನ್‌ 17ಎ ಅಡಿ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿಸಲು ರಾಜ್ಯಪಾಲರಿಗೆ ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ರಾಜ್ಯ ಸರ್ಕಾರ ವಾದಿಸಿತು. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯಪಾಲರು ಅನುಮತಿಸಿರುವುದನ್ನು ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ, … Continued