ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ; ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಇದ್ದ ಆದಾಯದ ಮಿತಿ ಹೆಚ್ಚಳ

ಬೆಂಗಳೂರು: ರಾಜ್ಯದ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಇದ್ದ ಕುಟುಂಬದ ವಾರ್ಷಿಕ ಆದಾಯದ ಮಿತಿಯನ್ನು ₹32,000ದಿಂದ ₹1.20 ಲಕ್ಷಕ್ಕೆ ಹೆಚ್ಚಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ₹32,000 ವಾರ್ಷಿಕ … Continued

ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕೆ ಖರ್ಚಾದ ಹಣ ಎಷ್ಟು ಗೊತ್ತಾ…?

ಬೆಳಗಾವಿ: ಕಳೆದ ಎರಡು ವರ್ಷಗಳಲ್ಲಿ (2023 ರಿಂದ 2025 ನವೆಂಬರ್ ವರೆಗೆ )ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ವಿಮಾನ ಹಾಗೂ ಹೆಲಿಕಾಪ್ಟರ್ ಪ್ರಯಾಣದ ವೆಚ್ಚ 47 ಕೋಟಿ ರೂ. ಆಗಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ರವಿಕುಮಾರ ಅವರ ಪ್ರಶ್ನೆಗೆ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. 2023-24ರಲ್ಲಿ … Continued

ಮಹಿಳಾ ನೌಕರರಿಗೆ ಮುಟ್ಟಿನ ರಜೆ ; ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು : ಮಹಿಳಾ ನೌಕರರಿಗೆ ಮುಟ್ಟಿನ ರಜೆ (ಋತುಚಕ್ರ) ರಜೆ ನೀಡಲು ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ತಿಂಗಳಲ್ಲಿ ಒಂದು ದಿನಮುಟ್ಟಿನ ರಜೆ ನೀಡಬೇಕು. ತಿಂಗಳಲ್ಲಿ ಒಂದು ದಿನ ವರ್ಷಕ್ಕೆ 12 ದಿನ ವೇತನ ಸಹಿತ ರಜೆ ನೀಡುವಂತೆ ಸರ್ಕಾರ ಆದೇಶಿಸಿದೆ. ಇತ್ತೀಚೆಗಷ್ಟೇ ಋತುಚಕ್ರ ರಜೆ ನೀಡಲು … Continued

ಟ್ಯಾಟೂನಿಂದ ಬರಲಿದೆ ಎಚ್​ಐವಿ, ಕ್ಯಾನ್ಸರ್ : ಕೇಂದ್ರಕ್ಕೆ ಈ ಬಗ್ಗೆ ಪತ್ರ , ಕಾನೂನು ಜಾರಿಗೆ ಚಿಂತನೆ ; ಗುಂಡೂರಾವ್

ಬೆಂಗಳೂರು: ಇಡ್ಲಿ ಬೇಯಿಸಲು ಉಪಯೋಗಿಸುವ ಪ್ಲಾಸ್ಟಿಕ್ ಹಾಳೆ ಬಳಕೆ ಆರೋಗ್ಯಕ್ಕೆ ಹಾನಿಕರ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಪರೀಕ್ಷೆಯಿಂದ ದೃಢಪಟ್ಟ ಟ್ಯಾಟೂನಿಂದ ಎಚ್​ಐವಿ ಹಾಗೂ ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಶುಕ್ರವಾರ ಮಾಹಿತಿ ನೀಡಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಹಾಗೂ ಔಷಧ … Continued

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟ ಅಸ್ತು; ಆಯೋಗ ರಚನೆಗೆ ತೀರ್ಮಾನ

ಬೆಂಗಳೂರು: ಪರಿಶಿಷ್ಟ ಜಾತಿ(ಎಸ್‌ಸಿ)ಗಳಿಗೆ ಒಳಮೀಸಲಾತಿ ಜಾರಿ ಮಾಡುವ ಕುರಿತು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶಗಳನ್ನು ಸಂಗ್ರಹಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್‌.ಕೆ. … Continued

ವಾಹನಗಳಿಗೆ ಎಚ್​​​ ಎಸ್​ ಆರ್​ ಪಿ ನಂಬರ್​ ಪ್ಲೇಟ್​​ ಅವಳಡಿಸುವ ಗಡುವು ವಿಸ್ತರಣೆ

ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (High Security Registration Number Plate- HSRP)    ಪ್ಲೇಟ್ ಅಳವಡಿಸಿಕೊಳ್ಳುವ ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಕಡ್ಡಾಯವಾಗಿ ಅಳವಡಿಸಲು ರಾಜ್ಯ ಸರ್ಕಾರ‌ ನೀಡಿದ ಗಡುವು ಸಮೀಪ ಬಂದ ನಂತರ … Continued

ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ : ಮೊದಲ ಪಟ್ಟಿಯಲ್ಲಿ 34 ಶಾಸಕರಿಗೆ ಮಣೆ ; ಯಾರಿಗೆ ಯಾವ ನಿಗಮ-ಮಂಡಳಿ-ಪಟ್ಟಿ ಇಲ್ಲಿದೆ…

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ವಿವಿಧ ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, ವಿನಯ ಕುಲಕರ್ಣಿ ಸೇರಿದಂತೆ ಒಟ್ಟು 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸಿ. ಪುಟ್ಟರಂಗಶೆಟ್ಟಿ ಹಾಗೂ ಎಸ್.ಎನ್. ಸುಬ್ಬಾರೆಡ್ಡಿ, ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, … Continued

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ‘ಹಳೇ ಪಿಂಚಣಿ ಯೋಜನೆ(OPS)ಗೆ ಒಳಪಡಲು ಅವಕಾಶ ನೀಡಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕಾಂಗ್ರೆಸ್ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೊಸ ಪಿಂಚಣಿ ಯೋಜನೆ (ಎನ್ ಪಿಎಸ್)ಯಿಂದ ಹಳೆ ಪಿಂಚಣಿ ಯೋಜನೆಗೆ ಒಳಪಡಲು ಅವಕಾಶ ನೀಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಈ ಬಗ್ಗೆ ಆಡಳಿತ ಮತ್ತು ಸಮನ್ವಯ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆಗೆ ಒಳಪಡಲು 6 ಷರತ್ತುಗಳನ್ನು … Continued

ಕೋಲಾರ: ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಪ್ರಕರಣ; ಪ್ರಾಂಶುಪಾಲ, ವಾರ್ಡನ್, ಶಿಕ್ಷಕ ಅಮಾನತು

ಕೋಲಾರ : ಕೋಲಾರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ಮಾಲೂರು ತಾಲ್ಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲರಾದ ಭಾರತಮ್ಮ, ವಾರ್ಡನ್ ಮಂಜುನಾಥ … Continued

ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣ: ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್

ಬೆಳಗಾವಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ ಸಿ) ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಈ ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ ಸಿ), ತನಿಖೆಯ ಪ್ರಗತಿ, ಬಂಧನ, ಪರಿಹಾರ ನೀಡಿದ … Continued