ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ ; ಸೋನು ನಿಗಮ್‌ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್‌

ಬೆಂಗಳೂರು : ಬಹುಭಾಷಾ ಗಾಯಕ ಸೋನು ನಿಗಮ್‌ ಅವರು ಕನ್ನಡಾಭಿಮಾನವನ್ನು ಪಹಲ್ಗಾಮ್‌ ಘಟನೆಗೆ ತಳುಕು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಗುರುವಾರ ನಗರ ಪೊಲೀಸರಿಗೆ ಅನುಮತಿ ನೀಡಿದೆ. ಆದರೆ, ಯಾವುದೇ ರೀತಿಯ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ. ಹಾಗೂ ಮುಂದಿನ ವಿಚಾರಣೆವರೆಗೆ ಅಂತಿಮ ವರದಿ ಸಲ್ಲಿಸುವುದಕ್ಕೆ … Continued

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯುವ ಮುನ್ನ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆಯಲಾಗಿದೆ ಎಂದು ಆರೋಪಿತ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್ ಶನಿವಾರ ಆದೇಶಿಸಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ … Continued

ಬಡ್ತಿ ಕೋರಿಕೆ: ಎರಡು ತಿಂಗಳಲ್ಲಿ ಐಪಿಎಸ್‌ ಅಧಿಕಾರಿ ರೂಪಾ ಮನವಿ ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರ (ಎಡಿಜಿಪಿ) ಹುದ್ದೆಗೆ ಬಡ್ತಿ ನೀಡುವ ಸಂಬಂಧ ಹೊಸದಾಗಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಹಿರಿಯ ಪೊಲೀಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ ಸೂಚಿಸಿದ್ದು, ಎರಡು ತಿಂಗಳಲ್ಲಿ ಮೌದ್ಗಿಲ್‌ ಮನವಿಯನ್ನು ಕಾನೂನಿನ ಅನ್ವಯ ಪರಿಗಣಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಶುಕ್ರವಾರ ನಿರ್ದೇಶಿಸಿದೆ. ಐಎಎಸ್‌ ಅಧಿಕಾರಿ ರೋಹಿಣಿ … Continued

ಮುಡಾ ಪ್ರಕರಣ ಸಿಬಿಐ ತನಿಖೆಗೆ ಕೋರಿ ಮೇಲ್ಮನವಿ: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಬಿ.ಎಂ. ಪಾರ್ವತಿ ಅವರು ಅಕ್ರಮವಾಗಿ ಬದಲಿ ನಿವೇಶಗಳನ್ನು ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿರುವ ಮೇಲ್ಮನವಿಯ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಮುಡಾ ಹಗರಣವನ್ನು ಸಿಬಿಐ … Continued

ಏಕರೂಪ ನಾಗರಿಕ ಸಂಹಿತೆ ಕಾಯಿದೆ ಜಾರಿಗೆ ಸಂಸತ್ತು, ವಿಧಾನಸಭೆಗಳಿಗೆ ಕರ್ನಾಟಕ ಹೈಕೋರ್ಟ್‌ ಸಲಹೆ

ಬೆಂಗಳೂರು: ಸಂವಿಧಾನದ ಪೀಠಿಕೆಯಲ್ಲಿ ಉಲ್ಲೇಖಿಸಿರುವ ಮೂಲ ತತ್ವಗಳನ್ನು ಸಾಕಾರಗೊಳಿಸಲು ಏಕರೂಪ ನಾಗರಿಕ ಸಂಹಿತೆಗೆ (ಯುಸಿಸಿ) ಜಾರಿಗೆ ತರುವಂತೆ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳು ಎಲ್ಲಾ ಪ್ರಯತ್ನ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಅಭಿಪ್ರಾಯಪಟ್ಟಿದೆ. ಕುಟುಂಬದ ಆಸ್ತಿ ವಿಭಾಗ ದಾವೆಯೊಂದಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿವೇಕ ನಗರದ ಸಮೀವುಲ್ಲಾ ಖಾನ್‌ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ … Continued

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌: ನ್ಯಾಯಾಂಗ ತನಿಖೆಗೆ ಹೈಕೋರ್ಟ್‌ ಆದೇಶ

ಬೆಂಗಳೂರು : ಬೆಳಗಾವಿಯ ಸುವರ್ಣ ಸೌಧದ ಬಳಿ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ನೀಡಬೇಕು ಎಂದು ಬೇಡಿಕೆ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿರುವ ಪ್ರಕರಣವನ್ನು ನ್ಯಾಯಾಂಗ ಆಯೋಗದ ತನಿಖೆಗೆ ವಹಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನಿರ್ದೇಶಿಸಿದೆ. ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಸುವರ್ಣ ಸೌಧದ ಮುಂದೆ 10.12.2024ರಂದು … Continued

6 ವಾರಗಳಲ್ಲಿ ಓಲಾ, ಉಬರ್, ರ‍್ಯಾಪಿಡೊ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸ್ಥಗಿತಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು : ಓಲಾ, ಉಬರ್‌ ಮತ್ತು ರ‍್ಯಾಪಿಡೊ ಬೈಕ್‌ ಟ್ಯಾಕ್ಸಿ ಸೇವೆಯನ್ನು ಸಂಬಂಧಿತ ಸಂಸ್ಥೆಗಳು ಆರು ವಾರಗಳಲ್ಲಿ ಸ್ಥಗಿತಗೊಳಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಬುಧವಾರ ಆದೇಶ ಮಾಡಿದೆ. ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಅನುಮತಿಗೆ ನಿರ್ದೇಶನ ಕೋರಿ ಉಬರ್‌ ಇಂಡಿಯಾ ಸಿಸ್ಟಮ್ಸ್‌ ಪ್ರೈವೇಟ್‌ ಲಿಮಿಟೆಡ್‌, ರೊಪ್ಪೆನ್‌ ಟ್ರಾನ್ಸ್‌ಪೋರ್ಟೇಶನ್‌ ಸರ್ವೀಸಸ್‌ ಪ್ರೈವೇಟ್‌ ಲಿಮಿಟೆಡ್‌ ಮತ್ತು ಎಎನ್‌ಐ ಟೆಕ್ನಾಲಜೀಸ್‌ … Continued

ಮುಡಾ ಹಗರಣ | ಇ.ಡಿ ತನಿಖೆಗೆ ಹೈಕೋರ್ಟ್‌ ಅನುಮತಿ ; ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ..?

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ 14 ಬದಲಿ ನಿವೇಶನ (ಈಗ ವಾಪಸ್‌ ಮಾಡಲಾಗಿದೆ) ಹಂಚಿಕೆ ಮಾಡಿದ ಸಮಯದಲ್ಲಿ ಮುಡಾ ಆಯುಕ್ತರಾಗಿದ್ದ ಡಾ. ಡಿ ಬಿ ನಟೇಶ ಅವರಿಗೆ ಜಾರಿ ನಿರ್ದೇಶನಾಲಯ (ED) ಜಾರಿ ಮಾಡಿದ್ದ ಸಮನ್ಸ್‌ ರದ್ದುಪಡಿಸಿ ಏಕಸದಸ್ಯ ಪೀಠ ಮಾಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಲು ಕರ್ನಾಟಕ ಹೈಕೋರ್ಟ್‌ ಬುಧವಾರ … Continued

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಮತ್ತು ಇತರೆ ಮೂವರ ವಿರುದ್ಧದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದು ಹಾಜರಾಗುವಂತೆ ನೀಡಿದ್ದ ನ್ಯಾಯಾಲಯವು ನೀಡಿದ್ದ ಸಮನ್ಸ್‌ಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ಹಾಗೂ ಮುಂದಿನ ವಿಚಾರಣೆವರೆಗೆ ವಿಚಾರಣಾಧೀನ ನ್ಯಾಯಾಲಯ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದೆ. ಹೀಗಾಗಿ ಸದ್ಯಕ್ಕೆ ಯಡಿಯೂರಪ್ಪ ನಿರಾಳರಾದಂತಾಗಿದೆ. ಯಡಿಯೂರಪ್ಪ ಅವರ ಅರ್ಜಿಯ … Continued

ಮುಡಾ ಮಾಜಿ ಆಯುಕ್ತ ನಟೇಶಗೆ ನೀಡಿದ್ದ ಸಮನ್ಸ್‌ ವಜಾ: ಇ.ಡಿ. ಮೇಲ್ಮನವಿ ವಿಚಾರಣೆಗೆ ಪರಿಗಣಿಸಿದ ಹೈಕೋರ್ಟ್‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿಗೆ 14 ನಿವೇಶನಗಳನ್ನು ಹಂಚಿಕೆ ಮಾಡಿದ್ದ ಅವಧಿಯಲ್ಲಿ ಮುಡಾ ಆಯುಕ್ತರಾಗಿದ್ದ ಡಾ. ಡಿ ಬಿ ನಟೇಶ ಅವರ ಮನೆಯಲ್ಲಿ ಜಾರಿ ನಿರ್ದೇಶನಾಲಯ ಶೋಧ ನಡೆಸಿ, ಸಮನ್ಸ್‌ ಜಾರಿ ಮಾಡಿದ್ದನ್ನು ವಜಾಗೊಳಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯವು ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್‌ ಸೋಮವಾರ … Continued