ಸಂತ್ರಸ್ತೆ ಅಪಹರಣ ಪ್ರಕರಣ : ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್‌ ಕದತಟ್ಟಿದ ಭವಾನಿ ರೇವಣ್ಣ..

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಹಗರಣಕ್ಕೆ ಸಂಬಂಧಿಸಿದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಅರ್ಜಿ ವಿಚಾರಣೆಗೆ ನಿಗದಿಯಾಗಬೇಕಿದೆ. ವಿಶೇಷ ನ್ಯಾಯಾಲಯವು ಮೇ 31ರಂದು ಭವಾನಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಭವಾನಿ ಹೈಕೋರ್ಟ್‌ ಕದತಟ್ಟಿದ್ದಾರೆ. ವಿಶೇಷ … Continued

ಎರಡು ಎಫ್ಐಆರ್ ಗಳ ರದ್ದತಿ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ರೇವಣ್ಣ

ಬೆಂಗಳೂರು : ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಸಂತ್ರಸ್ತ ಮಹಿಳೆ ಅಪಹರಣದ ಆರೋಪ ಸಂಬಂಧ ಹಾಸನ ಜಿಲ್ಲೆಯ ಹೊಳೆನರಸೀಪುರ ಮತ್ತು ಮೈಸೂರು ಜಿಲ್ಲೆಯ ಕೆ.ಆರ್‌. ನಗರ ಪೊಲೀಸ್‌ ಠಾಣೆಗಳಲ್ಲಿ ತಮ್ಮ ಮೇಲೆ ದಾಖಲಾಗಿರುವ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ರದ್ದುಪಡಿಸಬೇಕು ಎಂದು ಕೋರಿ ಜೆಡಿಎಸ್‌ ಶಾಸಕ ಎಚ್‌.ಡಿ. ರೇವಣ್ಣ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ … Continued

ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ : ಸ್ವತಂತ್ರ ಸಂಸ್ಥೆಯಿಂದ ತನಿಖೆಗೆ ಕೋರಿದ್ದ ಅರ್ಜಿ ತುರ್ತು ವಿಚಾರಣೆಗೆ ಹೈಕೋರ್ಟ್‌ ನಕಾರ

ಬೆಂಗಳೂರು : ಹಾಸನ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಕೋರಿದ್ದ ಅರ್ಜಿಯ ತುರ್ತು ವಿಚಾರಣೆಗೆ ಹೈಕೋರ್ಟ್‌ ಮಂಗಳವಾರ ನಿರಾಕರಿಸಿದ್ದು, ಬೇಸಿಗೆ ರಜೆ ಬಳಿಕ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲು ಸೂಚಿಸಿದೆ. ಬೆಂಗಳೂರಿನ ರಾಷ್ಟ್ರ ಸಮಿತಿ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ರಜಾಕಾಲೀನ ಏಕಸದಸ್ಯ ಪೀಠದಲ್ಲಿದ್ದ … Continued

ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣಾದ ಶಿವಮೂರ್ತಿ ಮುರುಘಾ ಶರಣರು

ಚಿತ್ರದುರ್ಗ : ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಸೋಮವಾರ ಚಿತ್ರದುರ್ಗದ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಸೋಮವಾರ ಅಪರಾಹ್ನದ ವೇಳೆಗೆ ಪೋಕ್ಸೊ ವಿಶೇಷ ನ್ಯಾಯಾಲಯದ ಉಸ್ತುವಾರಿಯಾಗಿರುವ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಮುರುಘಾ ಶರಣರು ಹಾಜರಾದರು. ಈ ವಿಚಾರವನ್ನು ದಾಖಲಿಸಿಕೊಂಡ ನ್ಯಾಯಾಧೀಶರು ಆರೋಪಿ ಸ್ವಾಮೀಜಿಯನ್ನು … Continued

ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ಬೆಂಗಳೂರು : ಸುಳ್ಳು ಚುನಾವಣಾ ಅಫಿಡವಿಟ್‌ ಸಲ್ಲಿಸಿದ ಆರೋಪದ ಮೇಲೆ ಚಿಕ್ಕಪೇಟೆ ಶಾಸಕ ಬಿ ಜಿ ಉದಯ ಗರುಡಾಚಾರ್‌ ಅವರಿಗೆ ಎರಡು ತಿಂಗಳು ಸಾಧಾರಣಾ ಜೈಲು ಶಿಕ್ಷೆ ಹಾಗೂ ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ ವಿಚಾರಣಾಧೀನ ನ್ಯಾಯಾಲಯ ಮಾಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ರದ್ದುಪಡಿಸಿದೆ. ಜೊತೆಗೆ ಆ ತೀರ್ಪು ಪ್ರಕಟವಾದ ನಂತರ ಅರ್ಜಿದಾರರು … Continued

ಮೈಸೂರು ಅನಂತಸ್ವಾಮಿ ಧಾಟಿಯಲ್ಲಿ ನಾಡಗೀತೆ : ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ; ದಶಕಗಳ ಸಮಸ್ಯೆಗೆ ತೆರೆ

ಬೆಂಗಳೂರು : ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ ನಾಡಗೀತೆ ಹಾಡುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ಎತ್ತಿ ಹಿಡಿದಿದೆ. ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಸುಗಮ ಸಂಗೀತ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ನಾಡಗೀತೆಗೆ ಮೈಸೂರು ಅನಂತಸ್ವಾಮಿ ಅವರ ಧಾಟಿಯನ್ನು ಅಳವಡಿಸಿಕೊಂಡು ಅದರ ಪೂ‌ರ್ಣಪಾಠ … Continued

ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ನ್ಯಾಯಾಲಯದ ಆದೇಶ ಹಾಗೂ ನಿರ್ದೇಶಗಳನ್ನು ಪಾಲಿಸಲು ರಾಜ್ಯ ಸರ್ಕಾರವು ಎಲ್ಲಾ ಇಲಾಖೆಗಳು ಮತ್ತದರ ಪ್ರಾಧಿಕಾರಗಳಲ್ಲಿ ಆಂತರಿಕ ಮೇಲ್ವಿಚಾರಣಾ ವ್ಯವಸ್ಥೆ ಆರಂಭಿಸುವ ವಿಚಾರದ ಕುರಿತಾಗಿ ರಾಜ್ಯ ಸರ್ಕಾರದ ಮುಖ್ಯ ಕಾಯದರ್ಶಿ ಮತ್ತು ಸರ್ಕಾರದ 41 ಇಲಾಖೆಗಳಿಗೆ ಮಂಗಳವಾರ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ನ್ಯಾಯಾಲಯಗಳ ಆದೇಶ ಪಾಲಿಸಲು ಸರ್ಕಾರ ಮತ್ತದರ ಪ್ರಾಧಿಕಾರಗಳು ನಿರ್ಲಕ್ಷ್ಯ ಹಾಗೂ … Continued

ಹುಕ್ಕಾ, ಹುಕ್ಕಾ ಬಾರ್‌ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು:ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲಾ ಬಗೆಯ ಹುಕ್ಕಾ ದಾಸ್ತಾನು, ಮಾರಾಟ, ಸೇವನೆ ಮತ್ತು ಜಾಹೀರಾತು ನಿಷೇಧಿಸಿ ರಾಜ್ಯ ಸರ್ಕಾರ ರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಹಾಗೂ ಹುಕ್ಕಾ ಮತ್ತು ಹುಕ್ಕಾ ಬಾರ್‌ ನಿಷೇಧ ಪ್ರಶ್ನಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾ ಮಾಡಿದೆ. ಬೆಂಗಳೂರಿನ ಆರ್‌ ಭರತ್‌ ಹಾಗೂ ಮತ್ತಿತರರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ … Continued

ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ’ ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು : ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆʼ ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿಯ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ದಾಖಲಾದ ಎರಡು ಪ್ರತ್ಯೇಕ ಎಫ್‌ಐಆರ್‌ ಮತ್ತು ಅದಕ್ಕೆ ಸಂಬಂಧಿಸಿದ ತನಿಖೆಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ. ಹೇಳಿಕೆ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ … Continued

ಅಪಾಯಕಾರಿ 23 ಶ್ವಾನ ತಳಿ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಸುತ್ತೋಲೆ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು : ಮನುಷ್ಯನ ಜೀವಕ್ಕೆ ಅಪಾಯವಾಗಬಹುದಾದ 23 ಭೀಷಣ ಶ್ವಾನ ತಳಿಗಳ ಸಾಕುವಿಕೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಇತ್ತೀಚಿಗೆ ಹೊರಡಿಸಿದ್ದ ಸುತ್ತೋಲೆಯನ್ನು ಬುಧವಾರ ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ. ತಜ್ಞರ ಸಮಿತಿಯ ಶಿಫಾರಸ್ಸು ಆಧರಿಸಿ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದರೆ, ತಜ್ಞರು ಸಂಬಂಧಿತ ಯಾರನ್ನೂ ಸಂಪರ್ಕಿಸಿಲ್ಲ ಎಂದು ಆಕ್ಷೇಪಿಸಿ ವೃತ್ತಿಪರ ಶ್ವಾನ ಹ್ಯಾಂಡ್ಲರ್‌ ಮತ್ತು ರಾಟ್‌ವೈಲರ್‌ … Continued