ವಾಕ್‌-ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ವಾದ ಆಲಿಸಿ ಇತಿಹಾಸ ಸೃಷ್ಟಿಸಿದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು : ವಾಕ್‌ ಮತ್ತು ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ಅವರ ವಾದವನ್ನು ಪ್ರಮಾಣೀಕೃತ ದುಭಾಷಿಯ ನೆರವಿನಿಂದ ಆಲಿಸುವ ಮೂಲಕ ಕರ್ನಾಟಕ ಹೈಕೋರ್ಟ್‌ ಸೋಮವಾರ ಇತಿಹಾಸ ಸೃಷ್ಟಿಸಿದೆ. ಕೌಟುಂಬಿಕ ವ್ಯಾಜ್ಯ ಪ್ರಕರಣವೊಂದರಲ್ಲಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಪ್ರತಿವಾದಿ ಪತ್ನಿ ಪರವಾಗಿ ಸಾರಾ ಸನ್ನಿ ವಾದಿಸಿದರು. ಸ್ಕಾಟ್ಲೆಂಡ್‌ನಲ್ಲಿರುವ ಪತಿ ಮತ್ತು ಬೆಂಗಳೂರಿನಲ್ಲಿರುವ … Continued

ಯೋಗೀಶ ಗೌಡ ಕೊಲೆ ಪ್ರಕರಣ: ವಿಚಾರಣೆ ರದ್ದತಿ ಕೋರಿದ್ದ ಶಾಸಕ ವಿನಯ ಕುಲಕರ್ಣಿ ಅರ್ಜಿ ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿಗದಿಪಡಿಸಿರುವ ಆರೋಪ ನಿಗದಿಯಲ್ಲಿ ಸಾಕಷ್ಟು ದೋಷಗಳಿವೆ ಎಂದು ಆಕ್ಷೇಪಿಸಿ ಪ್ರಕರಣದ ಆರೋಪಿ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾ ಮಾಡಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ಮಾರ್ಚ್‌ … Continued

5, 8, 9ನೇ ತರಗತಿ ಬೋರ್ಡ್‌ ಪರೀಕ್ಷೆ : ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ; ಫಲಿತಾಂಶ ಪ್ರಕಟಿಸಿದಂತೆ ಆದೇಶ

ನವದೆಹಲಿ: 5, 8 ಮತ್ತು 9ನೇ ತರಗತಿ ಬೋರ್ಡ್‌ ಪರೀಕ್ಷೆ ಕುರಿತು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅಲ್ಲದೆ, ಈ ತರಗತಿಗಳ ಬೋರ್ಡ್‌ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಪೀಠ ಆದೇಶಿಸಿದೆ. ಈ ಕುರಿತು ಎರಡು ವಾರಗಳಲ್ಲಿ ಉತ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದೆ. ರಾಜ್ಯ … Continued

ಹೈಕೋರ್ಟ್‌ನಲ್ಲಿ ನ್ಯಾಯಪೀಠದ ಮುಂದೆಯೇ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ…

ಬೆಂಗಳೂರು: ಅನಾಮಿಕ ವ್ಯಕ್ತಿಯೊಬ್ಬರು ರೇಜರ್‌ ಹಿಡಿದು ಹೈಕೋರ್ಟ್‌ನ ಕೋರ್ಟ್‌ ಹಾಲ್‌ 1ಕ್ಕೆ ಪ್ರವೇಶಿಸಿ ನ್ಯಾಯಕ್ಕಾಗಿ ಮನವಿ ಮಾಡಿ ಕುತ್ತಿಗೆ ಕತ್ತರಿಸಿಕೊಳ್ಳಲು ಪ್ರಯತ್ನಿಸಿದ ವಿಲಕ್ಷಣ ಘಟನೆ ಕರ್ನಾಟಕ ಹೈಕೋರ್ಟ್‌ ಬುಧವಾರ ನಡೆದಿದೆ. ಮುಖ್ಯ ನ್ಯಾಯಮೂರ್ತಿ ಎನ್‌. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಡಾ. ಎಚ್‌. ಬಿ. ಪ್ರಭಾಕರ ಶಾಸ್ತ್ರಿ ಅವರ ನೇತೃತ್ವದ ವಿಭಾಗೀಯ ಪೀಠದ‌ ಮುಂದೆ ಈ … Continued

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಎಫ್‌ಐಆರ್‌ ಗೆ ತಡೆ ನೀಡಿದ ಹೈಕೋರ್ಟ್‌

ಬೆಂಗಳೂರು : ಇಲ್ಲಿನ ನಗರ್ತಪೇಟೆಯ ಮೊಬೈಲ್ ಅಂಗಡಿ ಮಾಲೀಕ ಮುಖೇಶ ಎಂಬಾತನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿ, ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತಂದ ಆರೋಪದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ. ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ … Continued

5, 8, 9ನೇ ತರಗತಿಗಳಿಗೆ ಬೋರ್ಡ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ಸಮ್ಮತಿ

ಬೆಂಗಳೂರು: ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್‌ನ (High Court) ದ್ವಿಸದ್ಯ ಪೀಠ ರದ್ದುಗೊಳಿಸಿದ್ದು 5,8,9, ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದೆ. ರಾಜ್ಯದ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಸುತ್ತೋಲೆ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಬದಿಗೆ ಸರಿಸಿರುವ ಕರ್ನಾಟಕ … Continued

ಅಪಾಯಕಾರಿ 23 ಶ್ವಾನ ತಳಿಗಳ ಸಾಕಣೆ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ ಸುತ್ತೋಲೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಮನುಷ್ಯನ ಜೀವಕ್ಕೆ ಮಾರಕವಾಗಬಹುದಾದ 23 ಶ್ವಾನ ತಳಿಗಳ ಸಾಕುವುದು ಹಾಗೂ ಮಾರಾಟ ನಿಷೇಧಿಸಿ ಕೇಂದ್ರ ಸರ್ಕಾರ ಇತ್ತೀಚಗೆ ಹೊರಡಿಸಿದ್ದ ಸುತ್ತೋಲೆಗೆ ಮಂಗಳವಾರ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ. ತಜ್ಞರ ಸಮಿತಿಯ ಶಿಫಾರಸ್ಸು ಆಧರಿಸಿ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಆದರೆ ತಜ್ಞರು ಇದಕ್ಕೆ ಸಂಬಂಧಿತ ಯಾರನ್ನು ಸಂಪರ್ಕಿಸಿಲ್ಲ ಎಂದು ಆಕ್ಷೇಪಿಸಿ ವೃತ್ತಿಪರ ಶ್ವಾನ … Continued

ಕರ್ನಾಟಕದ 5, 8, 9, 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು : ರಾಜ್ಯದ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಸುತ್ತೋಲೆ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿರುವ ಮೇಲ್ಮನವಿ ವಿಚಾರಣೆಯನ್ನು ಸೋಮವಾರ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ 5, 8, 9 ಮತ್ತು 11ನೇ ತರಗತಿಗಳಿಗೆ … Continued

ಅಪೆಕ್ಸ್ ಬ್ಯಾಂಕಿಗೆ ₹439 ಕೋಟಿ ಸಾಲ ಮರುಪಾವತಿಸದ ಪ್ರಕರಣ: ತನಿಖೆಗೆ ಸಹಕರಿಸಲು ಶಾಸಕ ರಮೇಶ ಜಾರಕಿಹೊಳಿಗೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ ಅಭಿವೃದ್ಧಿಗೆ ಪಡೆದ ಸಾಲ ಮರುಪಾವತಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆಗೆ ಸಹಕರಿಸುವಂತೆ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸೇರಿದಂತೆ ಎಲ್ಲ ಆರೋಪಿಗಳಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಅಲ್ಲದೆ, ಬಂಧನದಂಥ ಕ್ರಮಕ್ಕೆ ಮುಂದಾಗುವಾಗ ನ್ಯಾಯಾಲಯದ ಅನುಮತಿ ಪಡೆಯುವುದು ಕಡ್ಡಾಯ ಎಂದು ಶುಕ್ರವಾರ ಆದೇಶಿಸಿದೆ. ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ … Continued

ಸಿಎಂ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಅನಂತ ಕುಮಾರ ಹೆಗಡೆ ವಿರುದ್ಧ ಮುಂಡಗೋಡು ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಶುಕ್ರವಾರ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಅನಂತ ಕುಮಾರ ಹೆಗಡೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ … Continued